Delhi Air Pollution: ದೆಹಲಿ ವಾಯು ಮಾಲಿನ್ಯ, ಪಂಜಾಬ್​ಗೆ ಸುಪ್ರೀಂ ಛೀಮಾರಿ, ಹುಲ್ಲು ಸುಡುವುದನ್ನು ನಿಲ್ಲಿಸಲು ಸೂಚನೆ

|

Updated on: Nov 07, 2023 | 12:43 PM

ದೆಹಲಿಯಲ್ಲಿ ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಈ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಪಂಜಾಬ್​ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಹೇಗೆ ಮಾಡುತ್ತೀರಿ ಎಂಬುದು ನನಗೆ ತಿಳಿದಿಲ್ಲ, ಆದರೆ ಹುಲ್ಲು ಸುಡುವಿಕೆಯನ್ನು ಕಡಿಮೆ ಮಾಡಲೇಬೇಕು ಅದು ನಿಮ್ಮ ಕೆಲಸ, ಈ ಸಮಸ್ಯೆಗೆ ನೀವೇ ಪರಿಹಾರ ಕಂಡುಹಿಡಿಯಬೇಕು ಎಂದು ಕೋರ್ಟ್​ ಹೇಳಿದೆ.

Delhi Air Pollution: ದೆಹಲಿ ವಾಯು ಮಾಲಿನ್ಯ, ಪಂಜಾಬ್​ಗೆ ಸುಪ್ರೀಂ ಛೀಮಾರಿ, ಹುಲ್ಲು ಸುಡುವುದನ್ನು ನಿಲ್ಲಿಸಲು ಸೂಚನೆ
ಬೆಂಕಿ
Image Credit source: ABP Live
Follow us on

ದೆಹಲಿಯಲ್ಲಿ ಮಾಲಿನ್ಯದ ಮಟ್ಟ ನಿರಂತರವಾಗಿ ಹೆಚ್ಚುತ್ತಿದೆ. ಈ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಿತು. ಪಂಜಾಬ್​ ಸರ್ಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಹೇಗೆ ಮಾಡುತ್ತೀರಿ ಎಂಬುದು ನನಗೆ ತಿಳಿದಿಲ್ಲ, ಆದರೆ ಹುಲ್ಲು ಸುಡುವಿಕೆಯನ್ನು ಕಡಿಮೆ ಮಾಡಲೇಬೇಕು ಅದು ನಿಮ್ಮ ಕೆಲಸ, ಈ ಸಮಸ್ಯೆಗೆ ನೀವೇ ಪರಿಹಾರ ಕಂಡುಹಿಡಿಯಬೇಕು ಎಂದು ಕೋರ್ಟ್​ ಹೇಳಿದೆ.

ಹಬ್ಬ ಹರಿದಿನಗಳಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಹಿಂದಿನ ಆದೇಶವನ್ನು ಪಾಲಿಸುವಂತೆ ರಾಜಸ್ಥಾನ ಹಾಗೂ ಇತರೆ ರಾಜ್ಯಗಳಿಗೆ ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ. ವಿಶೇಷವಾಗಿ ಹಬ್ಬ ಹರಿದಿನಗಳಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸಲು ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಸರ್ಕಾರಕ್ಕೆ ಸೂಚನೆ ನೀಡಿದೆ.

ಮಾಲಿನ್ಯವನ್ನು ನಿಯಂತ್ರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪಂಜಾಬ್​ನಲ್ಲಿ ಹುಲ್ಲು ಸುಡುವ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡುಬರುತ್ತಿಲ್ಲ.

ಮತ್ತಷ್ಟು ಓದಿ: ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್‌ 13ರಿಂದ 20ರವರೆಗೆ ವಾಹನಗಳ ಬೆಸ-ಸಮ ನಿಯಮ ಮತ್ತೆ ಜಾರಿ

ಪಂಜಾಬ್​ನ 2060 ಕಡೆಗಳಲ್ಲಿ ಹುಲ್ಲು ಸುಡುವ ಪ್ರಕರಣಗಳು ವರದಿಯಾಗಿದೆ, ಇದುವರೆಗೆ 19,463 ಹುಲ್ಲು ಸುಡುವ ಪ್ರಕರಣಗಳು ವರದಿಯಾಗಿವೆ.
ಇದರಿಂದಾಗಿ ಪಂಜಾಬ್​ನ ಹಲವು ನಗರಗಳ ವಾಯು ಗುಣಮಟ್ಟ ಸೂಚ್ಯಂಕ ಈಗ ಕಳಪೆ ವರ್ಗವನ್ನು ತಲುಪಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು, ಸಾರ್ವಜನಿಕ ಯೋಜನೆಗಳಿಗೆ ಸಂಬಂಧಿಸಿದ ನಿರ್ಮಾಣ ಕಾರ್ಯಗಳನ್ನು ಮತ್ತು ಟ್ರಕ್‌ಗಳು ಹಾಗೂ ವಾಣಿಜ್ಯ ಬಳಕೆ ನಾಲ್ಕು ಚಕ್ರಗಳ ವಾಹನಗಳು ರಾಷ್ಟ್ರ ರಾಜಧಾನಿ ಪ್ರವೇಶ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆ ಅಡಿ ಈಗಾಗಲೇ ಮೂರು ಹಂತದಲ್ಲಿ ನಿಬಂಧನೆಗಳನ್ನು ವಿಧಿಸಲಾಗಿದ್ದು, ಈಗ ನಾಲ್ಕನೇ ಹಂತದ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಸಮ ಬೆಸ ನಿಯಮವನ್ನೂ ಕೂಡ ಜಾರಿ ಮಾಡಲಾಗಿದೆ. ದೆಹಲಿಯಲ್ಲಿ ಮಾಲಿನ್ಯಕಾರಕ ಟ್ರಕ್‌ಗಳು ಮತ್ತು ವಾಣಿಜ್ಯ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ