ದೆಹಲಿ, ಜೂ.29: ಮಳೆಯಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ನಡೆದ ಅನಾಹುತದ ಬಗ್ಗೆ ಪರಿಶೀಲನೆ ನಡೆಸಿದ ನಂತರ ಇದೀಗ ನೆನ್ನೆ (ಜೂ.28) ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ನೇತೃತ್ವದಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ನಾಗರಿಕ ವಿಮಾನಯಾನ ಮಹಾನಿರ್ದೇಶಕರು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷರು, ಬ್ಯೂರೋದ ಮಹಾನಿರ್ದೇಶಕರು ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆಯನ್ನು ಕರೆದಿದ್ದರು. ನಾಗರಿಕ ವಿಮಾನಯಾನ ಭದ್ರತೆ, ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ಪ್ರಯಾಣಿಕರ ಸುರಕ್ಷತೆ ಹಾಗೂ ಅವರ ಅನುಕೂಲಕ್ಕಾಗಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಯ ನಂತರನಾಗರಿಕ ವಿಮಾನಯಾನ ಸಚಿವಾಲಯದ ನಿಕಟ ಮೇಲ್ವಿಚಾರಣೆಯನ್ನು ನಡೆಸಲಾಗುವುದು. ಟರ್ಮಿನಲ್ 2 ಮತ್ತು T3 ವಾರ್ ರೂಮ್, ರದ್ದಾದ ವಿಮಾನಗಳ ಸಂಪೂರ್ಣ ಮರುಪಾವತಿ ಬಗ್ಗೆ ಖಚಿತಪಡಿಸುತ್ತದೆ. ಪರ್ಯಾಯ ಪ್ರಯಾಣ ಮಾರ್ಗದ ಟಿಕೆಟ್‌ಗಳನ್ನು ಒದಗಿಸುವುದನ್ನು ಈ ವಾರ್ ರೂಮ್ಗಳನ್ನು ಸ್ಥಾಪನೆ ಮಾಡಲಾಗಿದೆ. ಮರುಪಾವತಿಗಳನ್ನು 7 ದಿನ ಒಳಗೆ ಮಾಡಬೇಕು ಹಾಗೂ ಈ ಬಗ್ಗೆ ಪ್ರಯಾಣಿಕರಿಗೆ ವೈಯಕ್ತಿವಾಗಿ ತಿಳಿಸಬೇಕು.
ಇಂಡಿಗೋ ವಿಮಾನಯಾನ ಸಂಸ್ಥೆ
T2 ಟರ್ಮಿನಲ್: 7428748308
T3 ಟರ್ಮಿನಲ್: 7428748310
ಸ್ಪೈಸ್‌ಜೆಟ್
T3 ಟರ್ಮಿನಲ್: 0124-4983410/0124-7101600
9 711209864 (ಶ್ರೀ ರೋಹಿತ್)
ಈಗಾಗಲೇ ಟರ್ಮಿನಲ್ 1ರ ಕುಸಿದು ಬಿದ್ದ ಕಾರಣ, ಟರ್ಮಿನಲ್ 2 ಮತ್ತು 3ರಲ್ಲಿ ಹೆಚ್ಚುವರಿ ಒತ್ತಡವನ್ನು ನಿಭಾಯಿಸಿ ಅಲ್ಲಿ ಪ್ರಯಾಣಿಕರಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ನೀಡಬೇಕು ಎಂದು ಈ ಸಭೆಯಲ್ಲಿ ಹೇಳಲಾಗಿದೆ.
ಇನ್ನು ದೆಹಲಿಯಲ್ಲಿ ನಡೆದ ಅಪಘಾತದಿಂದ ವಿಮಾನ ದರದಲ್ಲಿ ಹೆಚ್ಚಳ ಮಾಡದಂತೆ ನೋಡಿಕೊಳ್ಳಲು ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಸೂಚನೆಯನ್ನು ನೀಡಲಾಗಿದೆ. ಪ್ರಯಾಣಿಕರ ಕಷ್ಟವಾಗದಂತೆ ಪ್ರಯಾಣ ದರದ ಸ್ಥಿರತೆಯನ್ನು ಕಾಯ್ದುಕೊಳ್ಳಲು ವಿಮಾನಯಾನ ಸಂಸ್ಥೆಗಳಿಗೆ ತಿಳಿಸಲಾಗಿದೆ.
ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಮೇಲ್ಛಾವಣಿ ಕುಸಿತದ ತನಿಖೆಗೆ ಸಮಿತಿ ರಚನೆ
ರಚನಾತ್ಮಕ ಸಾಮರ್ಥ್ಯದ ಸಂಪೂರ್ಣ ತಪಾಸಣೆ ನಡೆಸಲು ಎಲ್ಲ ವಿಮಾನ ನಿಲ್ದಾಣಗಳಿಗೆ ಸುತ್ತೋಲೆ ಹೊರಡಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ (AAI) ನಿರ್ದೇಶನ ನೀಡಲಾಗಿದೆ. ಈ ತಪಾಸಣೆಗಳನ್ನು ಮುಂದಿನ 2-5 ದಿನಗಳಲ್ಲಿ ಪೂರ್ಣಗೊಳಿಸಬೇಕು ಮತ್ತು ವರದಿಗಳನ್ನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸಲ್ಲಿಸಬೇಕು ಎಂದು ಹೇಳಲಾಗಿದೆ.
ಈ ವರದಿಯ ಆಧಾರದ ಮೇಲೆ ಹೆಚ್ಚಿನ ಸುರಕ್ಷತಾ ಕ್ರಮಗಳ ಅಗತ್ಯತೆ ಮತ್ತು ಅಂತಹ ಅಹಿತಕರ ಘಟನೆಗಳು ಮರುಕಳಿಸುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.
Review with the Secretary-MoCA, Director General Civil Aviation, DG – BCAS, Chairman – AAI, & Joint Secretaries – MoCA at the Rajiv Gandhi Bhavan on the ongoing works at the Delhi T1 terminal. pic.twitter.com/zGYT9NvbAJ
— Ram Mohan Naidu Kinjarapu (@RamMNK) June 28, 2024
ದೆಹಲಿಯ ಸ್ಟ್ರಕ್ಚರಲ್ ಇಂಜಿನಿಯರ್‌ಗಳಲ್ಲಿ ಟರ್ಮಿನಲ್ 1ರಲ್ಲಿ ನಡೆದ ಅವ್ಯವಸ್ಥೆಯನ್ನು ತಕ್ಷಣ ಸರಿ ಮಾಡುವಂತೆ ಕೇಳಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆಯನ್ನು ಕೂಡ ನಡೆಸಲಾಗುತ್ತಿದೆ. ಈ ವರದಿಯ ಆಧಾರ ಮೇಲೆ ಹೆಚ್ಚಿನ ತನಿಖೆ ನಡೆಸಲಾಗುವುದು. ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಾಗೂ ಸಚಿವಾಲಯವು ಎಲ್ಲಾ ಸಂಬಂಧಿತ ಏಜೆನ್ಸಿಗಳೊಂದಿಗೆ ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಹಾಗೂ ನಮ್ಮ ವಿಮಾನ ನಿಲ್ದಾಣಗಳ ಒಟ್ಟಾರೆ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸಲು ಹೆಚ್ಚು ಕೆಲಸ ಮಾಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಈ ಸಭೆಯಲ್ಲಿ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ