AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಕಳಪೆ ಮಟ್ಟದಲ್ಲಿಯೇ ಇರುವ ವಾಯು ಗುಣಮಟ್ಟ, ಇಂದಿನಿಂದ ಸುಧಾರಿಸುವ ಸಾಧ್ಯತೆ; ಅಕ್ಕಪಕ್ಕದ ನಗರಗಳಲ್ಲಿ ಪರಿಸ್ಥಿತಿ ಹೇಗಿದೆ?

Delhi Air Pollution: ದೆಹಲಿಯಲ್ಲಿ ಸತತ ಎಂಟನೇ ದಿನವೂ ವಾಯು ಮಾಲಿನ್ಯ ಕಳಪೆ ಮಟ್ಟದಲ್ಲಿದೆ. ಅದರ ಅಕ್ಕಪಕ್ಕದ ನಗರಗಳಲ್ಲೂ ಪರಿಸ್ಥಿತಿ ಗಂಭೀರವಾಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

ದೆಹಲಿ: ಕಳಪೆ ಮಟ್ಟದಲ್ಲಿಯೇ ಇರುವ ವಾಯು ಗುಣಮಟ್ಟ, ಇಂದಿನಿಂದ ಸುಧಾರಿಸುವ ಸಾಧ್ಯತೆ; ಅಕ್ಕಪಕ್ಕದ ನಗರಗಳಲ್ಲಿ ಪರಿಸ್ಥಿತಿ ಹೇಗಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 21, 2021 | 4:55 PM

Share

ದೆಹಲಿ: ದೇಶದ ರಾಜಧಾನಿ ಹಾಗೂ ಸುತ್ತಮುತ್ತದ ನಗರಗಳಲ್ಲಿ ಸತತ ಎಂಟನೇ ದಿನವೂ ವಾಯುಗುಣಮಟ್ಟ ಕಳಪೆ ಮಟ್ಟದಲ್ಲಿಯೇ ಇದೆ. ಗಾಳಿಯ ಗುಣಮಟ್ಟ ಮತ್ತು ಹವಾಮಾನ ಮುನ್ಸೂಚನೆ ಮತ್ತು ಸಂಶೋಧನೆಯ ವ್ಯವಸ್ಥೆ (SAFAR) ಇಂದಿನ (ಭಾನುವಾರ) ಸೂಚ್ಯಂಕವನ್ನು ಬಿಡುಗಡೆಗೊಳಿಸಿದ್ದು, 347 ಎಕ್ಯುಐ ದಾಖಲಾಗಿದೆ. ನಿನ್ನೆ (ಶನಿವಾರ) 355 (ಎಕ್ಯುಐ) ಇತ್ತು. ತಜ್ಞರ ಪ್ರಕಾರ, ಮಾಲಿನ್ಯದ ಮಟ್ಟ ಕಡಿಮೆಯಾಗುತ್ತಿದ್ದು, ಸೋಮವಾರದಿಂದ ವಾಯು ಗುಣಮಟ್ಟ ಸುಧಾರಣೆಯಾಗಲಿದೆ ಎನ್ನಲಾಗಿದೆ. ಇಂದಿನಿಂದ ವಾತಾವರಣ ಬದಲಾಗಲಿದೆ ಎಂದು ತಜ್ಞರು ಹೇಳಿದ್ದು, ಭಾರಿ ಗಾಳಿಯನ್ನು ನಿರೀಕ್ಷಿಸಲಾಗಿದೆ. ಇದರಿಂದ ಕ್ರಮೇಣ ವಾಯುಗುಣಮಟ್ಟ ಉತ್ತಮವಾಗುವ ಸಾಧ್ಯತೆ ಇದೆ. ಸೂಚ್ಯಂಕದ ಪ್ರಕಾರ ಎಕ್ಯುಐ 0 ಯಿಂದ 50ರ ಒಳಗಿದ್ದರೆ ಉತ್ತಮವೆಂದು, 51 ರಿಂದ 100ರೊಳಗಿದ್ದರೆ ಮಧ್ಯಮವೆಂದೂ, 301ರಿಂದ 400ರ ಒಳಗಿದ್ದರೆ ಕಳಪೆಯಿಂದೂ ಗುರುತಿಸಲಾಗುತ್ತದೆ. 400-500ರ ನಡುವಿದ್ದರೆ ಅದನ್ನು ಅತ್ಯಂತ ಗಂಭೀರ ಪರಿಸ್ಥಿತಿ ಎಂದು ಪರಿಗಣಿಸಲಾಗುತ್ತದೆ. ಕಳೆದ ಎರಡು ವಾರದಿಂದ ದೆಹಲಿಯ ವಾಯು ಗುಣಮಟ್ಟ ಕಳಪೆ ಹಾಗೂ ಅತ್ಯಂತ ಗಂಭೀರ ಸ್ಥಿತಿಯ ನಡುವೆಯೇ ಇದೆ.

ಈ ನಡುವೆ ದೆಹಲಿ ಸರ್ಕಾರ, ಮಾಲಿನ್ಯ ಮಟ್ಟವನ್ನು ನಿಯಂತ್ರಿಸಲು ಶಾಲೆಗಳನ್ನು ಮುಚ್ಚುವುದು, ಕಟ್ಟಡ ನಿರ್ಮಾಣ ಮತ್ತು ಕಸ ಸುಡುವುದನ್ನು ನಿಷೇಧಿಸುವುದು, ಜನರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವುದು ಮೊದಲಾದ ಕ್ರಮಗಳನ್ನು ತೆಗೆದುಕೊಂಡಿದೆ. ಇತ್ತೀಚೆಗಷ್ಟೇ ಸಾರಿಗೆ ಇಲಾಖೆ ವಾಹನಗಳಿಗೆ ಯಾವ ಮಾದರಿಯ ಇಂಧನ ಬಳಸುತ್ತಿದೆ ಎಂಬುದನ್ನು ಗಮನಿಸಿ, ಕಲರ್ ಕೋಡಿಂಗ್ ಸ್ಟಿಕ್ಕರ್ ನೀಡುವ ನಿಯಮ ಜಾರಿಗೆ ತಂದಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿರುವಂತೆ ದೆಹಲಿಯ ಪಕ್ಕದ ನಗರಗಳಾದ, ಫರೀದಾಬಾದ್ (332), ಘಾಜಿಯಾಬಾದ್ (346), ಗ್ರೇಟರ್ ನೋಯ್ಡಾ (340), ಗುರುಗ್ರಾಮ್ (375) ಮತ್ತು ನೋಯ್ಡಾ (422)ಗಳೂ ಕೂಡ ಕಳಪೆ ವಾಯು ಗುಣಮಟ್ಟವನ್ನು ಹೊಂದಿವೆ.

ಇದನ್ನೂ ಓದಿ:

ದೆಹಲಿ ವಾಯುಮಾಲಿನ್ಯ; ಶಾಲಾ-ಕಾಲೇಜು ಮುಚ್ಚಲು, ಕಚೇರಿಗಳಿಗೆ ಶೇ.50ರಷ್ಟು ಉದ್ಯೋಗಿಗಳು ಬರಲು ಸೂಚನೆ

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Published On - 9:57 am, Sun, 21 November 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್