ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 4 ಕೊಲೆಗಳು ನಡೆದಿದ್ದು, ಸಿಎಂ ಅರವಿಂದ್ ಕೇಜ್ರಿವಾಲ್ ಲೆಫ್ಟಿನೆಂಟ್ಗವರ್ನರ್ಗೆ ಪತ್ರ ಬರೆದಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಗಂಭೀರ ಅಪರಾಧಗಳ ಬಗ್ಗೆ ತುರ್ತು ಗಮನಹರಿಸುವಂತೆ ಮನವಿ ಮಾಡಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ತಮ್ಮ ಸುರಕ್ಷತೆ ಬಗ್ಗೆ ಜನರಲ್ಲಿ ಮತ್ತೆ ನಂಬಿಕೆಯನ್ನು ಮರುಕಳಿಸುವ ಕೆಲಸಗಳನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಉತ್ತಮವಾಗಿರಿಸಿಕೊಳ್ಳಲು ಬೇಕಾದ ಎಲ್ಲಾ ಸಹಕಾರವನ್ನು ನೀಡುವುದಾಗಿ ತಿಳಿಸಿದ್ದಾರೆ.
ಮತ್ತಷ್ಟು ಓದಿ: Delhi Crime: ಹುಡುಗಿಯನ್ನು ಬಲವಂತಾಗಿ ಎಳೆದೊಯ್ತಿದ್ದಾರೆ ಕಾಪಾಡಿ, ಮಧ್ಯರಾತ್ರಿ ದೆಹಲಿ ಪೊಲೀಸರಿಗೆ ಬಂತೊಂದು ಕರೆ
ಭಾರತದ 19 ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆದ ಮಹಿಳೆಯರ ಮೇಲಿನ ಒಟ್ಟು ಅಪರಾಧಗಳ ಪೈಕಿ ದೆಹಲಿಯೊಂದರಲ್ಲೇ ಶೇ. 32.20ರಷ್ಟಿದೆ.
ರಾತ್ರಿ ಹೊತ್ತು ಪೊಲೀಸರು ಗಸ್ತು ತಿರುಗಬೇಕಿದೆ, ಅಪರಾಧವನ್ನು ಕಡಿಮೆ ಮಾಡಲು ಉತ್ತಮ ಮಾರ್ಗವನ್ನು ಕಂಡುಕೊಳ್ಳಲು ಶಾಸಕರು, ಕೌನ್ಸಿಲರ್ಗಳ ಜಂಟಿ ಸಭೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು ಎಂದು ಸಲಹೆ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ