AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal Net Worth: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಬಳಿ ಇರುವ ಒಟ್ಟು ಆಸ್ತಿ ಎಷ್ಟು?

ದೆಹಲಿ ವಿಧಾನಸಭಾ ಚುನಾವಣೆಗೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ, ನಾಮಪತ್ರ ಸಲ್ಲಿಕೆ, ಆಸ್ತಿ ಘೋಷಣೆ, ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಸೇರಿದಂತೆ ಹಲವು ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಆಮ್ ಆದ್ಮಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿಯನ್ನು ಬಹಿರಂಗಪಡಿಸಿದ್ದಾರೆ. ಅದರ ಪ್ರಕಾರ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 1 ಕೋಟಿ 73 ಲಕ್ಷ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಹೆಸರಲ್ಲಿ ಒಟ್ಟು ಸ್ಥಿರಾಸ್ತಿ 2 ಕೋಟಿ 10 ಲಕ್ಷ ರೂ. ಇದೆ.

Arvind Kejriwal Net Worth: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಬಳಿ ಇರುವ ಒಟ್ಟು ಆಸ್ತಿ ಎಷ್ಟು?
ಅರವಿಂದ್ ಕೇಜ್ರಿವಾಲ್ Image Credit source: India Today
ನಯನಾ ರಾಜೀವ್
|

Updated on:Jan 16, 2025 | 8:58 AM

Share

ಆಮ್ ಆದ್ಮಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣಾ ಅಫಿಡವಿಟ್‌ನಲ್ಲಿ ಅವರು ತಮ್ಮ ಆಸ್ತಿಯನ್ನು ಬಹಿರಂಗಪಡಿಸಿದ್ದಾರೆ. ಅದರ ಪ್ರಕಾರ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 1 ಕೋಟಿ 73 ಲಕ್ಷ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಹೆಸರಲ್ಲಿ ಒಟ್ಟು ಸ್ಥಿರಾಸ್ತಿ 2 ಕೋಟಿ 10 ಲಕ್ಷ ರೂ. ಇದೆ.

ಅರವಿಂದ್ ಕೇಜ್ರಿವಾಲ್ ಅವರ ಚರ ಆಸ್ತಿಯ ಬಗ್ಗೆ ಹೇಳುವುದಾದರೆ, ಅವರ ಒಟ್ಟು ಚರ ಆಸ್ತಿ 3 ಲಕ್ಷ 46 ಸಾವಿರ ರೂ.ಗಿಂತ ಹೆಚ್ಚು, ಆದರೆ ಅವರ ಪತ್ನಿ ಹೆಸರಿನಲ್ಲಿ 1 ಕೋಟಿ 89 ಸಾವಿರ ರೂ. ಇಂತಹ ಪರಿಸ್ಥಿತಿಯಲ್ಲಿ ನೋಡಿದರೆ ಅರವಿಂದ್ ಕೇಜ್ರಿವಾಲ್ ಅವರ ಒಟ್ಟು ಆಸ್ತಿ ಸುಮಾರು 1 ಕೋಟಿ 77 ಲಕ್ಷ ರೂ. ಅವರ ಪತ್ನಿ ಬಳಿ ಒಟ್ಟು ಆಸ್ತಿ 3 ಕೋಟಿ 99 ಲಕ್ಷ ರೂ. ಇದೆ.

ಚುನಾವಣಾ ಅಫಿಡವಿಟ್ ಪ್ರಕಾರ ಅರವಿಂದ್ ಕೇಜ್ರಿವಾಲ್ ಬಳಿ 50,000 ರೂಪಾಯಿ ನಗದು ಇದ್ದರೆ, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಬಳಿ 42,000 ರೂಪಾಯಿ ನಗದು ಇದೆ . ಅರವಿಂದ್ ಕೇಜ್ರಿವಾಲ್ ಹೆಸರಿನಲ್ಲಿ ಯಾವುದೇ ಕಾರು ಇಲ್ಲ, ಅವರ ಪತ್ನಿ ಹೆಸರಿನಲ್ಲಿ ಮಾರುತಿ ಬಲೆನೊ ಕಾರು ಇದೆ. ಇದಲ್ಲದೇ ಗುರುಗ್ರಾಮದಲ್ಲಿ ಸುನೀತಾ ಕೇಜ್ರಿವಾಲ್ ಹೆಸರಿನಲ್ಲಿ ಫ್ಲಾಟ್ ಇದೆ. ಗಂಡ ಹೆಂಡತಿ ಇಬ್ಬರ ಹೆಸರಲ್ಲೂ ಸಾಲವಿಲ್ಲ.

ಮತ್ತಷ್ಟು ಓದಿ: ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿಗೆ ಖಲಿಸ್ತಾನಿ ಉಗ್ರರ ಸಂಚು, ಗುಪ್ತಚರ ಮಾಹಿತಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೆಸರಿನಲ್ಲಿಲ್ಲ. ಮನೆ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಹೆಸರಿನಲ್ಲಿದ್ದು, ಅವರ ಪ್ರಸ್ತುತ ಮಾರುಕಟ್ಟೆ ಮೌಲ್ಯ ಸುಮಾರು 1.5 ಕೋಟಿ ರೂ. ಅರವಿಂದ್ ಕೇಜ್ರಿವಾಲ್ ಅವರ ಬಳಿಯೂ ಕೃಷಿಯೇತರ ಭೂಮಿ ಇದ್ದು, 1 ಕೋಟಿ 70 ಲಕ್ಷ ರೂ. ಬೆಲೆ ಬಾಳುತ್ತದೆ.

ಅರವಿಂದ್ ಕೇಜ್ರಿವಾಲ್ ಷೇರು ಮಾರುಕಟ್ಟೆಯಲ್ಲಿ ಅಥವಾ ಬೇರೆಲ್ಲಿಯೂ ಯಾವುದೇ ರೀತಿಯ ಹೂಡಿಕೆ ಮಾಡಿಲ್ಲ . ಪತ್ನಿ ಬಳಿ 25 ಲಕ್ಷ 92 ಸಾವಿರ ಮೌಲ್ಯದ ಚಿನ್ನಾಭರಣವಿದೆ. ಸಂಗಾತಿಯ ಹೆಸರಲ್ಲೂ ಪಿಪಿಎಫ್ ನಲ್ಲಿ ಖಾತೆ ಇದ್ದು, ಅದರಲ್ಲಿ 26 ಲಕ್ಷಕ್ಕೂ ಹೆಚ್ಚು ಠೇವಣಿ ಇದೆ.

ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಪ್ರವೇಶ್ ವರ್ಮಾ ವಿರುದ್ಧ ಬಿಜೆಪಿ ಇಲ್ಲಿಂದ ಟಿಕೆಟ್ ನೀಡಿದೆ. ಅವರು ಬುಧವಾರ ನಾಮಪತ್ರ ಸಲ್ಲಿಸಿ ತಮ್ಮ ಆಸ್ತಿಯನ್ನು ಬಹಿರಂಗಪಡಿಸಿದ್ದು, ಪ್ರವೇಶ್ ವರ್ಮಾ ಅವರು ಸುಮಾರು 95 ಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿ ಹೊಂದಿದ್ದಾರೆ.

ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5ರಂದು ನಡೆಯಲಿದ್ದು, 8ರಂದು ಫಲಿತಾಂಶ ಹೊರಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:56 am, Thu, 16 January 25

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ