AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚುನಾವಣೆ: ಆಮ್​ ಆದ್ಮಿ ಪಕ್ಷ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ: ಕೇಜ್ರಿವಾಲ್

ಆಮ್​ ಆದ್ಮಿ ಪಕ್ಷವು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷ ಘೋಷಿಸಿದೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿಗಳನ್ನು ನೀಡುವುದಾಗಿ ಎಎಪಿ ಭರವಸೆ ನೀಡಿದೆ.

ದೆಹಲಿ ಚುನಾವಣೆ: ಆಮ್​ ಆದ್ಮಿ ಪಕ್ಷ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್ Image Credit source: Business Standard
ನಯನಾ ರಾಜೀವ್
|

Updated on: Dec 30, 2024 | 2:18 PM

Share

ಮುಂಬರಲಿರುವ ದೆಹಲಿ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಆಮ್​ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ದೇವಸ್ಥಾನಗಳಲ್ಲಿ ಕೆಲಸ ಮಾಡುವ ಎಲ್ಲಾ ಅರ್ಚಕರು ಮತ್ತು ನಗರದಾದ್ಯಂತ ಗುರುದ್ವಾರಗಳಲ್ಲಿ ಗ್ರಂಥಿಗಳಿಗೆ ತಿಂಗಳಿಗೆ 18,000 ರೂಪಾಯಿಗಳನ್ನು ನೀಡುವುದಾಗಿ ಎಎಪಿ ಭರವಸೆ ನೀಡಿದೆ. ಈ ನಿಟ್ಟಿನಲ್ಲಿ ಪೂಜಾರಿ ಗ್ರಂಥಿ ಸಮ್ಮಾನ್ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಸಿಎಂ ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವನಿ ಯೋಜನೆ ಮತ್ತು ಅರ್ಚಕರಿಗೆ ಗೌರವಧನ ನೀಡುವ ಯೋಜನೆಯನ್ನು ವಿರೋಧಿಸಬೇಡಿ ಎಂದು ಆಪ್ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ. ಮಹಿಳೆಯರು, ದಲಿತರು ಮತ್ತು ಹಿರಿಯ ನಾಗರಿಕರು ಸೇರಿದಂತೆ ನಿರ್ದಿಷ್ಟ ವರ್ಗದ ಮತದಾರರನ್ನು ಗುರಿಯಾಗಿಸಿಕೊಂಡು ಪಕ್ಷ ಇದುವರೆಗೆ ನಾಲ್ಕು ಕಲ್ಯಾಣ ಯೋಜನೆಗಳನ್ನು ಘೋಷಿಸಿದೆ.

ನಗರದಲ್ಲಿ 24/7 ನೀರು ಪೂರೈಕೆ ಮಾಡುವ ಭರವಸೆಯನ್ನೂ ನೀಡಿದೆ. ಅವರು ಸುಮಾರು 20 ಪ್ರತಿಶತ ಮತದಾರರನ್ನು ಹೊಂದಿರುವ ಪಂಡಿತರು ಮತ್ತು ಸಿಖ್ ಮತದಾರರನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಯೋಜನೆಯು ಚರ್ಚ್‌ಗಳಲ್ಲಿನ ಪಾದ್ರಿಗಳನ್ನು ಒಳಗೊಳ್ಳುತ್ತದೆಯೇ ಎಂಬುದನ್ನು ಕೇಜ್ರಿವಾಲ್ ಉಲ್ಲೇಖಿಸಲಿಲ್ಲ.

ಮತ್ತಷ್ಟು ಓದಿ: ದೆಹಲಿ ಸಿಎಂ ಅತಿಶಿಯನ್ನು ಶೀಘ್ರ ಬಂಧಿಸಬಹುದು: ಕೇಜ್ರಿವಾಲ್ ಹೀಗೆ ಹೇಳಿದ್ದೇಕೆ?

ಅರ್ಚಕರಿಗಾಗಿ ಇಂತಹ ಯೋಜನೆಗಳನ್ನು ಘೋಷಿಸಿದ ದೇಶದ ಮೊದಲ ಪಕ್ಷ ಎಎಪಿ ಎಂದು ಕೇಜ್ರಿವಾಲ್ ಹೇಳಿದರು. ದೇಶದ ಯಾವ ಪಕ್ಷವೂ ಇಂತಹ ಯೋಜನೆ ತಂದಿಲ್ಲ ಎಂದರು. ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಮಂಗಳವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದರು.

ದೇವಸ್ಥಾನದಲ್ಲಿರುವ ಎಲ್ಲಾ ಪಂಡಿತರ ನೋಂದಣಿಯನ್ನು ನಾನು ಮಾಡುತ್ತೇನೆ. ನಮ್ಮ ಶಾಸಕರು ಎಲ್ಲಾ 70 ಕ್ಷೇತ್ರಗಳಲ್ಲಿ ಇದನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ ಎಂದು ಎಎಪಿ ನಾಯಕ ಹೇಳಿದರು. ಶತಮಾನಗಳಿಂದ ನಮ್ಮ ಸಂಪ್ರದಾಯಗಳು ಮತ್ತು ಪದ್ಧತಿಗಳನ್ನು ಪೀಳಿಗೆಯಿಂದ ಪೀಳಿಗೆಗೆ ಸಾಗಿಸಿ ಅರ್ಚಕರು ದೇವರಿಗೆ ಪೂಜೆಯನ್ನು ನಡೆಸುತ್ತಾರೆ. ಆದರೆ ನಾವು ಅವರತ್ತ ಗಮನಹರಿಸಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ