AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚುನಾವಣೆಗೂ ಮುನ್ನ ಆಪ್​ಗೆ ದೊಡ್ಡ ಆಘಾತ; 8 ಶಾಸಕರು, ಕೌನ್ಸಿಲರ್​ಗಳು ಬಿಜೆಪಿಗೆ ಸೇರ್ಪಡೆ

ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಆದರೆ, ಚುನಾವಣೆಗೂ ಮುನ್ನವೇ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಉಂಟಾಗಿದೆ. ದೆಹಲಿ ವಿಧಾನಸಭಾ ಚುನಾವಣೆ ಎಎಪಿಗೆ ಭಾರಿ ಹೊಡೆತ ಬಿದ್ದಿದ್ದು, 8 ಶಾಸಕರು, ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇಂದು ರಾಜೀನಾಮೆ ನೀಡುವಾಗ ಶಾಸಕರು ಭ್ರಷ್ಟಾಚಾರ ಆರೋಪ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಿದ್ಧಾಂತದ ಬಗ್ಗೆ ನಂಬಿಕೆಯಿಲ್ಲ ಎಂಬ ಮುಂತಾದ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ಬಾರಿ 8 ಶಾಸಕರಿಗೆ ಆಪ್ ಚುನಾವಣಾ ಟಿಕೆಟ್ ನಿರಾಕರಿಸಿತ್ತು.

ದೆಹಲಿ ಚುನಾವಣೆಗೂ ಮುನ್ನ ಆಪ್​ಗೆ ದೊಡ್ಡ ಆಘಾತ; 8 ಶಾಸಕರು, ಕೌನ್ಸಿಲರ್​ಗಳು ಬಿಜೆಪಿಗೆ ಸೇರ್ಪಡೆ
Delhi Bjp
ಸುಷ್ಮಾ ಚಕ್ರೆ
|

Updated on: Feb 01, 2025 | 7:26 PM

Share

ನವದೆಹಲಿ: ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲು ಕೇವಲ 4 ದಿನಗಳು ಬಾಕಿ ಇವೆ. ಫೆಬ್ರವರಿ 5ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ, ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ ತೊರೆದಿರುವ ಆಪ್​ನ ಎಂಟು ಶಾಸಕರು ಮತ್ತು ಪಕ್ಷದ ಕೆಲವು ಕೌನ್ಸಿಲರ್‌ಗಳು ಬಿಜೆಪಿಗೆ ಸೇರಿದ್ದಾರೆ. ಫೆಬ್ರವರಿ 5ರ ದೆಹಲಿ ವಿಧಾನಸಭಾ ಚುನಾವಣೆಗೆ ಕೇವಲ 4 ದಿನಗಳು ಬಾಕಿ ಇರುವಾಗ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದರಿಂದ ಆಮ್ ಆದ್ಮಿ ಪಕ್ಷ (ಎಎಪಿ) ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.

ಪಲಂನಿಂದ 2 ಬಾರಿ ಶಾಸಕರಾಗಿರುವ ಭಾವನಾ ಗೌರ್, ಕಸ್ತೂರ್ಬಾ ನಗರದಿಂದ 3 ಬಾರಿ ಶಾಸಕರಾಗಿರುವ ಮದನ್ ಲಾಲ್, 3 ಬಾರಿ ಶಾಸಕರಾಗಿರುವ ಗಿರೀಶ್ ಸೋನಿ, 2 ಬಾರಿ ಶಾಸಕರಾಗಿರುವ ರಾಜೇಶ್ ರಿಷಿ, ನರೇಶ್ ಯಾದವ್, ಪವನ್ ಶರ್ಮಾ, ಬಿಎಸ್ ಜೂನ್, ರೋಹಿತ್ ಮೆಹ್ರೋಲಿಯಾ ಮತ್ತು ಮಾಜಿ ಶಾಸಕ ಬಿಜೇಂದ್ರ ಗಾರ್ಗ್ ಇಂದು ಬಿಜೆಪಿ ಸೇರಿದ 8 ಶಾಸಕರು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಆಗಿದ್ದ ಅಜಯ್ ರೈ ಕೂಡ ಬಿಜೆಪಿಗೆ ಸೇರಿದ್ದಾರೆ.

ಇದನ್ನೂ ಓದಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ ಡಿಕೆ ಶಿವಕುಮಾರ್

ಶುಕ್ರವಾರ ರಾಜೀನಾಮೆ ನೀಡಿದ ಶಾಸಕರು, ಭ್ರಷ್ಟಾಚಾರ ಆರೋಪ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷದ ಸಿದ್ಧಾಂತದಿಂದ ವಿಮುಖತೆ ಮುಂತಾದ ಕಾರಣಗಳನ್ನು ನೀಡಿದ್ದಾರೆ. ಈ ಬಾರಿ 8 ಶಾಸಕರಿಗೂ ಎಎಪಿ ಚುನಾವಣಾ ಟಿಕೆಟ್ ನಿರಾಕರಿಸಿದೆ. ಹೀಗಾಗಿ, ಈ ಶಾಸಕರು ಅಸಮಾಧಾನಗೊಂಡು ಬಿಜೆಪಿ ಸೇರಿದ್ದಾರೆ.

ಎಎಪಿಗೆ ರಾಜೀನಾಮೆ ನೀಡಿದ ನಂತರ, ಅವರು ತಮ್ಮ ರಾಜೀನಾಮೆ ಪತ್ರಗಳನ್ನು ವಿಧಾನಸಭಾ ಸ್ಪೀಕರ್‌ಗೆ ಕಳುಹಿಸಿದ್ದಾರೆ ಮತ್ತು ಸದನದ ಸದಸ್ಯತ್ವವನ್ನು ತ್ಯಜಿಸಿದ್ದಾರೆ. 70 ಸದಸ್ಯರ ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಫಲಿತಾಂಶಗಳು ಪ್ರಕಟವಾಗಲಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?