ದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ಇಂದಿನಿಂದಲೇ ನೀತಿ ಸಂಹಿತಿ ಜಾರಿ

ದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ಇಂದಿನಿಂದಲೇ ನೀತಿ ಸಂಹಿತಿ ಜಾರಿ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 22ಕ್ಕೆ ಈಗಿನ ಸರ್ಕಾರದ ಅವಧಿ ಕೊನೆಯಾಗಲಿರುವ ಕಾರಣ, ಇಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ನಿಗದಿ ಮಾಡಿದೆ.

ಒಂದೇ ಹಂತ ಚುನಾವಣೆ: 
70 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ದೆಹಲಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜನವರಿ 14ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 21ರಂದು ಕೊನೆ ದಿನವಾಗಲಿದೆ. ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ಫೆ.11ರಂದು ಚುನಾವಣೆ ಫಲಿತಾಂಶ ಹೊರಬೀಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.

ಫೆ.8ಕ್ಕೆ ಮತದಾನ:
ದೆಹಲಿಯಲ್ಲಿ ಒಟ್ಟು 1.46 ಕೋಟಿ ಮತದಾರರಿದ್ದಾರೆ. ಹೀಗಾಗಿ ಚುನಾವಣೆಗೆ 13,750 ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು. ಮತದಾನ ವೇಳೆ ಹಿರಿಯ ನಾಗರಿಕರನ್ನ ಕರೆತರುವ ವ್ಯವಸ್ಥೆ ಸಹ ಮಾಡಲಾಗುತ್ತೆ. ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ದೆಹಲಿಯಲ್ಲಿ ಇಂದಿನಿಂದಲೇ ನೀತಿಸಂಹಿತೆ ಜಾರಿಯಲ್ಲಿರಲಿದೆ.

ಹಿರಿಯರಿಗೆ ಅಂಚೆ ಮತಕ್ಕೆ ಅವಕಾಶ:
ಚುನಾವಣಾ ಆಯೋಗ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಮತದಾನ ಹೆಚ್ಚಿಸಲು ದಿವ್ಯಾಂಗರಿಗೆ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅಂಚೆ ಮತದಾನ ವ್ಯವಸ್ಥೆಯನ್ನೂ ಕಲ್ಪಿಸಿದೆ.

Click on your DTH Provider to Add TV9 Kannada