ಪ್ರಜ್ಞೆ ತಪ್ಪಿದ ಪ್ರಯಾಣಿಕನಿಗಾಗಿ ಇಂದೋರ್​​ನಲ್ಲಿ ಲ್ಯಾಂಡ್ ಆದ ದೆಹಲಿ ವಿಮಾನ; ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ವ್ಯಕ್ತಿ ಸಾವು!

50 ವರ್ಷದ ಮನೋಜ್ ಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ಆಗ ಉಸಿರಾಟದ ತೊಂದರೆಯಾಘಿ ಪ್ರಜ್ಞೆ ತಪ್ಪಿದ ಅವರನ್ನು ಆಸ್ಪತ್ರೆಗೆ ಸೇರಿಸಲು ಇಂದೋರ್​ನಲ್ಲಿ ವಿಮಾನವನ್ನು ಇಳಿಸಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

ಪ್ರಜ್ಞೆ ತಪ್ಪಿದ ಪ್ರಯಾಣಿಕನಿಗಾಗಿ ಇಂದೋರ್​​ನಲ್ಲಿ ಲ್ಯಾಂಡ್ ಆದ ದೆಹಲಿ ವಿಮಾನ; ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ವ್ಯಕ್ತಿ ಸಾವು!
ವಿಸ್ತಾರ ವಿಮಾನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 22, 2021 | 3:56 PM

ಇಂದೋರ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ, ಪ್ರಜ್ಞೆ ತಪ್ಪಿದರು. ಈ ಹಿನ್ನೆಲೆಯಲ್ಲಿ ಅವರಿಗೆ ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವಿಮಾನವನ್ನು ಇಂದೋರ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ಇಂದೋರ್ ಏರ್​ಪೋರ್ಟ್​ನಿಂದ ಆ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರ್​ವಾಲ್ ಎಂಬುವವರು ಈ ರೀತಿ ದುರಂತವಾಗಿ ಸಾವನ್ನಪ್ಪಿದ ವ್ಯಕ್ತಿ. 50 ವರ್ಷದ ಮನೋಜ್ ಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ನಿನ್ನೆ ರಾತ್ರಿ 9.30ಕ್ಕೆ ವಿಮಾನ ಇಂದೋರ್​ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಯಿತು. ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ, ಆಸ್ಪತ್ರೆಗೆ ಸೇರಿಸಿದರೂ ಆ ಪ್ರಯಾಣಿಕ ಬದುಕುಳಿಯಲಿಲ್ಲ.

ಮನೋಜ್ ಕುಮಾರ್ ತಿವಾರ್ ಉದ್ಯಮಿಯಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವಾಪಾಸ್ ದೆಹಲಿಗೆ ಹೊರಟಿದ್ದರು. ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರವಾಲ್ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆಯಾಗುತ್ತಿರುವುದಾಗಿ ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಅವರು ಪ್ರಜ್ಞೆ ತಪ್ಪಿದರು. ಹೀಗಾಗಿ, ಪೈಲಟ್ ವಿಮಾನವನ್ನು ಇಂದೋರ್​ನತ್ತ ತಿರುಗಿಸಿದರು. ತಕ್ಷಣ ಮನೋಜ್ ಕುಮಾರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಇಂದೋರ್ ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಹೃದಯಾಘಾತದಿಂದ ಮನೋಜ್ ಕುಮಾರ್ ಸಾವನ್ನಪ್ಪಿರುವ ಸಾಧ್ಯತೆಯಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ ಮೂಲದ ಮನೋಜ್ ಕುಮಾರ್ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ದೆಹಲಿಗೆ ವಾಪಾಸ್ ತೆರಳುವಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ: Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ

Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್