ಇಂದೋರ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಪ್ರಯಾಣಿಕರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಉಂಟಾಗಿ, ಪ್ರಜ್ಞೆ ತಪ್ಪಿದರು. ಈ ಹಿನ್ನೆಲೆಯಲ್ಲಿ ಅವರಿಗೆ ತುರ್ತಾಗಿ ವೈದ್ಯಕೀಯ ಚಿಕಿತ್ಸೆ ಕೊಡಿಸಲು ವಿಮಾನವನ್ನು ಇಂದೋರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯಿತು. ಇಂದೋರ್ ಏರ್ಪೋರ್ಟ್ನಿಂದ ಆ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ವಿಸ್ತಾರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರ್ವಾಲ್ ಎಂಬುವವರು ಈ ರೀತಿ ದುರಂತವಾಗಿ ಸಾವನ್ನಪ್ಪಿದ ವ್ಯಕ್ತಿ. 50 ವರ್ಷದ ಮನೋಜ್ ಕುಮಾರ್ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ನಿನ್ನೆ ರಾತ್ರಿ 9.30ಕ್ಕೆ ವಿಮಾನ ಇಂದೋರ್ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಯಿತು. ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ, ಆಸ್ಪತ್ರೆಗೆ ಸೇರಿಸಿದರೂ ಆ ಪ್ರಯಾಣಿಕ ಬದುಕುಳಿಯಲಿಲ್ಲ.
ಮನೋಜ್ ಕುಮಾರ್ ತಿವಾರ್ ಉದ್ಯಮಿಯಾಗಿದ್ದು, ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಅವರು ವಾಪಾಸ್ ದೆಹಲಿಗೆ ಹೊರಟಿದ್ದರು. ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಮನೋಜ್ ಕುಮಾರ್ ಅಗರವಾಲ್ ಇದ್ದಕ್ಕಿದ್ದಂತೆ ಉಸಿರಾಟದ ತೊಂದರೆಯಾಗುತ್ತಿರುವುದಾಗಿ ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಅವರು ಪ್ರಜ್ಞೆ ತಪ್ಪಿದರು. ಹೀಗಾಗಿ, ಪೈಲಟ್ ವಿಮಾನವನ್ನು ಇಂದೋರ್ನತ್ತ ತಿರುಗಿಸಿದರು. ತಕ್ಷಣ ಮನೋಜ್ ಕುಮಾರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಇಂದೋರ್ ವಿಮಾನ ನಿಲ್ದಾಣದ ಉಸ್ತುವಾರಿ ನಿರ್ದೇಶಕ ಪ್ರಮೋದ್ ಕುಮಾರ್ ಶರ್ಮಾ ತಿಳಿಸಿದ್ದಾರೆ.
ಹೃದಯಾಘಾತದಿಂದ ಮನೋಜ್ ಕುಮಾರ್ ಸಾವನ್ನಪ್ಪಿರುವ ಸಾಧ್ಯತೆಯಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿ ಮೂಲದ ಮನೋಜ್ ಕುಮಾರ್ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ದೆಹಲಿಗೆ ವಾಪಾಸ್ ತೆರಳುವಾಗ ಈ ಘಟನೆ ನಡೆದಿದೆ.
ಇದನ್ನೂ ಓದಿ: Viral News: ಕಿಡ್ನಿ ಸ್ಟೋನ್ ಬದಲು ಕಿಡ್ನಿಯನ್ನೇ ತೆಗೆದ ವೈದ್ಯ; 11 ಲಕ್ಷ ರೂ. ಪರಿಹಾರ ನೀಡಲು ಆಸ್ಪತ್ರೆಗೆ ಆದೇಶ
Shocking News: ಇಟ್ಟಿಗೆ ಎಸೆದು ಮನುಷ್ಯನ ಪ್ರಾಣ ತೆಗೆದ ಕೋತಿ!; ದೆಹಲಿಯಲ್ಲೊಂದು ಶಾಕಿಂಗ್ ಘಟನೆ