AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬಿಜೆಪಿ ನಾಯಕ ಜಿ.ಎಸ್. ಬಾವಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ

GS Bawa: ಸೋಮವಾರ ಸಂಜೆ ದೆಹಲಿಯ ಸುಭಾಷ್ ನಗರ್ ಪ್ರದೇಶದ ಪಾರ್ಕ್​ ನಲ್ಲಿರುವ ಕೆರೆ ಪಕ್ಕದ ಗ್ರಿಲ್​ಗೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಗುರುವಿಂದರ್ ಸಿಂಗ್ ಬಾವಾ ಅವರ ಮೃತದೇಹ ಪತ್ತೆಯಾಗಿತ್ತು.

ದೆಹಲಿಯ ಬಿಜೆಪಿ ನಾಯಕ ಜಿ.ಎಸ್. ಬಾವಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ
ಜಿ.ಎಸ್.ಬಾವಾ
ರಶ್ಮಿ ಕಲ್ಲಕಟ್ಟ
|

Updated on:Mar 30, 2021 | 4:05 PM

Share

ದೆಹಲಿ: ದೆಹಲಿಯ ಬಿಜೆಪಿ ನಾಯಕ, ಪಶ್ಚಿಮ ದೆಹಲಿ ಬಿಜೆಪಿ ಘಟಕದ ಮಾಜಿ ಉಪಾಧ್ಯಕ್ಷ ಜಿ.ಎಸ್.ಬಾವಾ ಎಂದೇ  ಚಿರಪರಿಚಿತರಾಗಿದ್ದ ಗುರುವಿಂದರ್ ಸಿಂಗ್ ಬಾವಾ   ತಮ್ಮ ಮನೆ ಪಕ್ಕದಲ್ಲಿರುವ ಪಾರ್ಕ್ ನಲ್ಲಿ ಸೋಮವಾರ ಸಂಜೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಮಾಧ್ಯಮಗಳ ವರದಿ ಪ್ರಕಾರ 58ರ ಹರೆಯದ ಜಿ.ಎಸ್.ಬಾವಾ ವೈಯಕ್ತಿಕ ಸಮಸ್ಯೆಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಗ್ಯೂ, ದೆಹಲಿ ಪೊಲೀಸರಾಗಲೀ, ಬಿಜೆಪಿ ಘಟಕವಾಗಲೀ ಇವರ ಸಾವಿನ ಹಿಂದಿರುವ ಕಾರಣಗಳ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಪಶ್ಚಿಮ ದೆಹಲಿಯ ಫತೇಹ್ ನಗರ್ ನಿವಾಸಿಯಾಗಿದ್ದರು ಬಾವಾ. ಮೃತದೇಹದ ಬಳಿ ಆತ್ಮಹತ್ಯೆ ಟಿಪ್ಪಣಿ ಪತ್ತೆಯಾಗಿಲ್ಲ ಎಂದು ಹೇಳಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗ ಕಳುಹಿಸಲಾಗಿದೆ ಎಂದಿದ್ದಾರೆ.

ಸೋಮವಾರ ಸಂಜೆ ದೆಹಲಿಯ ಸುಭಾಷ್ ನಗರ್ ಪ್ರದೇಶದ ಪಾರ್ಕ್​ ನಲ್ಲಿರುವ ಕೆರೆ ಪಕ್ಕದ ಗ್ರಿಲ್​ಗೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮೃತದೇಹ ಪಶ್ಚಿಮ ದೆಹಲಿಯ ಬಿಜೆಪಿ ನಾಯಕ ಜಿ.ಎಸ್. ಬಾವಾ ಅವರದ್ದು ಎಂದು ಗುರುತಿಸಿದ್ದಾರೆ.

ವಾರಗಳ ಹಿಂದೆಯಷ್ಟೇ ಬಿಜೆಪಿಯ ನಾಯಕ ರಾಮ್ ಸ್ವರೂಪ್ ಶರ್ಮಾ ದೆಹಲಿಯಲ್ಲಿ ನೇಣಿಗೆ ಶರಣಾಗಿದ್ದರು. ರಾಮ್ ಸ್ವರೂಪ್ ಶರ್ಮಾ ಅವರಿಗೆ 62ರ ವರ್ಷ ವಯಸ್ಸಾಗಿತ್ತು. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ 1958ರಲ್ಲಿ ಜನಿಸಿದ ಶರ್ಮಾ 2014ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಎರಡನೇ ಬಾರಿ ಮಂಡಿ ಲೋಕಸಭಾ ಕ್ಷೇತ್ರದಿಂದಲೇ ಮತ್ತೊಮ್ಮೆ ಚುನಾವಣೆ ಗೆದ್ದಿದ್ದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿದ್ದರು ಶರ್ಮಾ. ಶರ್ಮಾ ಅವರು ಖಿನ್ನತೆಯಿಂದ ಬಳಲುತ್ತಿದ್ದು, ಕಳೆದ ಆರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಪತ್ನಿ ಚಾರ್ ಧಾಮ್ ತೀರ್ಥಯಾತ್ರೆಯಲ್ಲಿದ್ದು  ಶರ್ಮಾ ಒಬ್ಬರೇ ಮನೆಯಲ್ಲಿದ್ದರು ಎಂದು ಟ್ರಿಬ್ಯೂನ್ ಇಂಡಿಯಾ ಡಾಟ್ ಕಾಮ್ ವರದಿ ಮಾಡಿದೆ.

ಫೆಬ್ರವರಿ ತಿಂಗಳಲ್ಲಿ ದಾದ್ರಾ ಮತ್ತು ನಾಗರ್ ಹವೇಲಿ (DNH) ಕೇಂದ್ರಾಡಳಿತ ಪ್ರದೇಶದ ಸಂಸದ 58ರ ಹರೆಯದ ಮೋಹನ್ ದೇಲ್ಕರ್ ಅವರ ಮೃತದೇಹ ಹೋಟೆಲ್​ವೊಂದರಲ್ಲಿ ಪತ್ತೆಯಾಗಿತ್ತು. ಗುಜರಾತಿಯಲ್ಲಿ ಬರೆದ ಆತ್ಮಹತ್ಯಾ ಟಿಪ್ಪಣಿ ದೇಲ್ಕರ್ ಅವರು ತಂಗಿದ್ದ ಕೋಣೆಯಿಂದ ಪತ್ತೆಯಾಗಿತ್ತು. ಅದರಲ್ಲಿ ಹಿರಿಯ ರಾಜಕಾರಣಿಗಳು ಸೇರಿದಂತೆ ಹಲವರ ಮೇಲೆ ಆರೋಪ ಹೊರಿಸಲಾಗಿತ್ತು.

ಇದನ್ನೂ ಓದಿ:  Ram Swaroop Sharma ಬಿಜೆಪಿ ಸಂಸದ ರಾಮ್‌ಸ್ವರೂಪ್ ಶರ್ಮಾ ನಿಗೂಢ ಸಾವು.. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Published On - 11:34 am, Tue, 30 March 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ