AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸ್ಫೋಟ; ಎನ್​ಐಎಯಿಂದ ಮುಜಮ್ಮಿಲ್, ಶಾಹೀನ್ ಸೇರಿ ನಾಲ್ವರ ಬಂಧನ

ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಗರದಿಂದ NIA ನಾಲ್ವರು ಆರೋಪಿಗಳನ್ನು ಬಂಧಿಸಿದೆ. ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ಡಾ. ಮುಜಮ್ಮಿಲ್ ಗನೈ, ಶಾಹೀನ್ ಶಾಹೀದ್ ಮತ್ತು ಇತರ ಇಬ್ಬರನ್ನು ಪಟಿಯಾಲ ಹೌಸ್ ನ್ಯಾಯಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) 10 ದಿನಗಳ ವಶಕ್ಕೆ ನೀಡಿದೆ.

ದೆಹಲಿ ಸ್ಫೋಟ; ಎನ್​ಐಎಯಿಂದ ಮುಜಮ್ಮಿಲ್, ಶಾಹೀನ್ ಸೇರಿ ನಾಲ್ವರ ಬಂಧನ
Delhi Blast Accused
ಸುಷ್ಮಾ ಚಕ್ರೆ
|

Updated on:Nov 20, 2025 | 6:05 PM

Share

ನವದೆಹಲಿ, ನವೆಂಬರ್ 20: ನವೆಂಬರ್ 10ರಂದು ನವದೆಹಲಿಯ ಕೆಂಪು ಕೋಟೆಯ (Red Fort) ಹೊರಗೆ ನಡೆದ ಬಾಂಬ್ ಸ್ಫೋಟದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇನ್ನೂ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ. ಈ ಮೂಲಕ ಒಟ್ಟು ಬಂಧಿತರ ಸಂಖ್ಯೆ 6ಕ್ಕೆ ಏರಿದೆ. ಪಟಿಯಾಲ ಹೌಸ್ ನ್ಯಾಯಾಲಯದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ನೀಡಿದ ವಿಚಾರಣೆಯ ಆದೇಶದ ಮೇರೆಗೆ ನಾಲ್ವರು ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ವಶಕ್ಕೆ ಪಡೆಯಲಾಗಿದೆ. ನವೆಂಬರ್ 10ರಂದು ನೇತಾಜಿ ಸುಭಾಷ್ ಮಾರ್ಗದಲ್ಲಿ ನಡೆದ ಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದರು. ಹರಿಯಾಣದ ಫರಿದಾಬಾದ್‌ನಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಮಾಡ್ಯೂಲ್‌ನಿಂದ ಸ್ಫೋಟಕಗಳನ್ನು ತುಂಬಿದ ಕಾರು ಸ್ಫೋಟಿಸಲಾಗಿತ್ತು.

ಬಂಧಿತ ಆರೋಪಿಗಳನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಡಾ. ಮುಜಮ್ಮಿಲ್ ಶಕೀಲ್ ಗನೈ, ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಡಾ. ಅದೀಲ್ ಅಹ್ಮದ್ ರಾಥರ್, ಉತ್ತರ ಪ್ರದೇಶದ ಲಕ್ನೋದ ಡಾ. ಶಾಹೀನ್ ಸಯೀದ್, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಎಂದು ಗುರುತಿಸಲಾಗಿದೆ. ಏಜೆನ್ಸಿಯ ಪ್ರಕಾರ, ಅವರೆಲ್ಲರೂ ದೆಹಲಿಯ ದಾಳಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಮುಂದಿನ ವಿಚಾರಣೆಗಾಗಿ ಅವರನ್ನು ಪಟಿಯಾಲ ಹೌಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ದೆಹಲಿ ದಾಳಿಗೂ ಮುನ್ನ ಸಹೋದರನಿಗೆ ಮೊಬೈಲ್ ಕೊಟ್ಟು ಉಗ್ರ ಉಮರ್ ಏನು ಹೇಳಿದ್ದ ಗೊತ್ತೇ ?

ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ಡಾ. ಮುಜಮ್ಮಿಲ್ ಗನೈ, ಶಾಹೀನ್ ಶಾಹೀದ್ ಮತ್ತು ಇತರ ಇಬ್ಬರನ್ನು ಇಂದು ಪಟಿಯಾಲ ಹೌಸ್ ನ್ಯಾಯಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) 10 ದಿನಗಳ ಕಸ್ಟಡಿಗೆ ನೀಡಿದೆ.

ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ಮುಜಮ್ಮಿಲ್ ಗನೈ, ಅದೀಲ್ ರಾಥರ್, ಶಾಹೀನ್ ಶಾಹೀದ್ ಮತ್ತು ಮೌಲ್ವಿ ಇರ್ಫಾನ್ ಅಹ್ಮದ್ ವಾಗೆ ಎಂಬ ಧರ್ಮೋಪದೇಶಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಹಿಂದೆ “ವೈಟ್-ಕಾಲರ್ ಭಯೋತ್ಪಾದನಾ ಘಟಕ”ಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು.

ಇದನ್ನೂ ಓದಿ: ದಾರಿ ತಪ್ಪಿದ ಮುಸ್ಲಿಮರು; ದೆಹಲಿ ಸ್ಫೋಟದ ಆರೋಪಿ ವಿಡಿಯೋಗೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪ್ರತಿಕ್ರಿಯೆ

ಹಲವಾರು ಅಮಾಯಕರ ಸಾವಿಗೆ ಕಾರಣವಾದ ಮತ್ತು ಇತರ ಅನೇಕರು ಗಾಯಗೊಂಡ ಭಯೋತ್ಪಾದಕ ದಾಳಿಯಲ್ಲಿ ಅವರೆಲ್ಲರೂ ಪ್ರಮುಖ ಪಾತ್ರ ವಹಿಸಿದ್ದರು ಎಂದು ಎನ್ಐಎ ತನಿಖೆಗಳು ತಿಳಿಸಿವೆ.

ಕೆಂಪು ಕೋಟೆ ಕಾರು ಸ್ಫೋಟ:

ನವೆಂಬರ್ 10ರಂದು ಕೆಂಪು ಕೋಟೆ ಬಳಿ ಕಾರಿನೊಳಗೆ ಹೆಚ್ಚಿನ ತೀವ್ರತೆಯ ಸ್ಫೋಟಕ ಸಾಧನ ಸ್ಫೋಟಗೊಂಡು 15 ಜನರು ಸಾವನ್ನಪ್ಪಿದಾಗ ಸ್ಫೋಟ ಸಂಭವಿಸಿತ್ತು. ಸ್ಫೋಟಕಗಳಿಂದ ತುಂಬಿದ i20 ಅನ್ನು ಚಲಾಯಿಸುತ್ತಿದ್ದ ಡಾ. ಉಮರ್ ಉನ್ ನಬಿ, ಅಲಿ ಹೆಸರಿನಲ್ಲಿ ವಾಹನವನ್ನು ಖರೀದಿಸಿದ್ದರು. ಉಮರ್ ಅವರನ್ನು ಆತ್ಮಾಹುತಿ ಬಾಂಬರ್ ಆಗಲು ಮನವೊಲಿಸಲು ಪ್ರಯತ್ನಿಸಿದ್ದಾರೆ ಎಂದು ಕಂಡುಬಂದ ನಂತರ ವಾನಿಯನ್ನು ಬಂಧಿಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Thu, 20 November 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ