Sign In

By signing in or creating an account, you agree with Associated Broadcasting Company's Terms & Conditions and Privacy Policy.

Indigo Flight: ಇಂಡಿಗೋ ವಿಮಾನದಲ್ಲಿ ವೃದ್ಧರೊಬ್ಬರ ಬಾಯಿಯಿಂದ ರಕ್ತಸ್ರಾವ, ತುರ್ತು ಭೂಸ್ಪರ್ಶ, ಕೊನೆಗೂ ಬದುಕುಳಿಯಲೇ ಇಲ್ಲ

ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ(Indigo Flight)ದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

Indigo Flight: ಇಂಡಿಗೋ ವಿಮಾನದಲ್ಲಿ ವೃದ್ಧರೊಬ್ಬರ ಬಾಯಿಯಿಂದ ರಕ್ತಸ್ರಾವ, ತುರ್ತು ಭೂಸ್ಪರ್ಶ, ಕೊನೆಗೂ ಬದುಕುಳಿಯಲೇ ಇಲ್ಲ
ಇಂಡಿಗೋ ವಿಮಾನ
Follow us
TV9 Web
| Updated By: ನಯನಾ ರಾಜೀವ್

Updated on: Jan 15, 2023 | 11:26 AM

ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ(Indigo Flight)ದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕರೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ ಅವರ ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು ಮತ್ತು ಪ್ರಯಾಣದ ಮಧ್ಯದಲ್ಲಿ ಅವರ ಸ್ಥಿತಿ ಹದಗೆಟ್ಟಿತು ಎಂದು ವಿಮಾನ ನಿಲ್ದಾಣ ಪ್ರಭಾರಿ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಹೇಳಿದ್ದಾರೆ. ವೈದ್ಯರ ಪ್ರಕಾರ, ಅವರು ಈಗಾಗಲೇ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ಶರ್ಮಾ ಹೇಳಿದ್ದಾರೆ.

ವಿಮಾನವು ತನ್ನ ಸಂಜೆ 6:40 ಕ್ಕೆ ದೆಹಲಿಗೆ ಯಾನ ಮುಂದುವರಿಸಿತು. ಮೃತರು ನೋಯ್ಡಾ ನಿವಾಸಿ , ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ಎಂದು ಏರೋಡ್ರೋಮ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಾಹಿತಿ ನೀಡಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?