ದೆಹಲಿ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 11ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಆರಂಭ

ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಕಟ್ಟಡ ಕುಸಿದು ಬಿದ್ದ ಘಟನೆ ಸಂಭವಿಸಿತ್ತು. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಅಗ್ನಿಶಾಮಕ ಸೇವೆಗಳು, ದೆಹಲಿ ಪೊಲೀಸರು ಮತ್ತು ಇತರ ಸ್ವಯಂಸೇವಕರ ತಂಡಗಳು 12 ಗಂಟೆಗಳಿಗೂ ಹೆಚ್ಚು ಕಾಲ ರಕ್ಷಣಾ ಪ್ರಯತ್ನಗಳನ್ನು ನಡೆಸಿವೆ. ಈ ದುರಂತದಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರ ಪಟ್ಟಿಯನ್ನು ದೆಹಲಿ ಪೊಲೀಸರು ಹಂಚಿಕೊಂಡಿದ್ದಾರೆ. ಈ ಭೀಕರ ಘಟನೆಯಲ್ಲಿ ಪ್ರಾಣ ಕಳೆದುಕೊಂಡ 11 ಜನರಲ್ಲಿ 8 ಮಂದಿ ಒಂದೇ ಕುಟುಂಬಕ್ಕೆ ಸೇರಿದವರು. ಮೃತರಲ್ಲಿ ಮೂವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸಹ ಕಟ್ಟಡ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ದೆಹಲಿ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 11ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಆರಂಭ
Delhi Building Collapse

Updated on: Apr 19, 2025 | 8:18 PM

ನವದೆಹಲಿ, ಏಪ್ರಿಲ್ 19: ಇಂದು (ಏಪ್ರಿಲ್ 19) ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈಶಾನ್ಯ ದೆಹಲಿಯ ಮುಸ್ತಫಾಬಾದ್ (Mustafabad) ಪ್ರದೇಶದಲ್ಲಿ 4 ಅಂತಸ್ತಿನ ವಸತಿ ಕಟ್ಟಡ ಕುಸಿದಿತ್ತು. ಈ ಕಟ್ಟಡವು ಕಾರ್ಡ್‌ಗಳ ರಾಶಿಯಂತೆ ಕುಸಿದು ಬಿದ್ದಿದ್ದು, ಶಕ್ತಿ ವಿಹಾರ್ ಪ್ರದೇಶದ ಗಾಲಿ ಸಂಖ್ಯೆ 1ರಲ್ಲಿ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, ಇನ್ನೂ ಹಲವಾರು ಜನರು ಒಳಗೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಇತರ ಸಂಸ್ಥೆಗಳು ಇಂದು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿವೆ.

ಕಟ್ಟಡ ಕುಸಿತದಲ್ಲಿ ಇತರ 11 ಜನರಿಗೆ ವಿವಿಧ ಹಂತದ ಗಾಯಗಳಾಗಿವೆ. ಗಾಯಗೊಂಡವರಲ್ಲಿ 6 ಮಂದಿಯನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, 5 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 4 ಅಂತಸ್ತಿನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವ 22 ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆಯ ಸಮಯ ಹೆಚ್ಚು ಬೇಕಾಯಿತು.

ಇದನ್ನೂ ಓದಿ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ದೆಹಲಿ: ಬೀದಿಯಲ್ಲಿ ಯುವತಿ ಶವ ಪತ್ತೆ, ಮೈಮೇಲೆ ಬುಲೆಟ್ ಗುರುತು


ಈಶಾನ್ಯ ದೆಹಲಿಯ ಮುಸ್ತಫಾಬಾದ್‌ನಲ್ಲಿ ಕಟ್ಟಡ ಕುಸಿತದ ಬಗ್ಗೆ ತನಿಖೆಗೆ ಇಂದು ಆದೇಶಿಸಿದ್ದಾರೆ. ಇದರಲ್ಲಿ ಕನಿಷ್ಠ ನಾಲ್ವರು ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (DDMA), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ದೆಹಲಿ ಅಗ್ನಿಶಾಮಕ ಸೇವೆ (DFS) ಮತ್ತು ಇತರ ಸಂಸ್ಥೆಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಗಳಲ್ಲಿ ತೊಡಗಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಅಧಿಕಾರಿಯೊಬ್ಬರು ರಕ್ಷಣಾ ಕಾರ್ಯಾಚರಣೆಯ ಸವಾಲುಗಳನ್ನು ಎತ್ತಿ ತೋರಿಸಿದ್ದಾರೆ. ಈ ಪ್ರದೇಶವು ಜನದಟ್ಟಣೆಯಿಂದ ಕೂಡಿದೆ ಎಂಬ ಕಾರಣಕ್ಕೆ ರಕ್ಷಣಾ ಕಾರ್ಯಾಚರಣೆ ಹೆಚ್ಚಾಗಿದೆ.


ಇದನ್ನೂ ಓದಿ: Video: ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ

“ಸ್ಥಳೀಯರಿಂದ ಬಂದ ಮಾಹಿತಿಯ ಪ್ರಕಾರ, ಸುಮಾರು 12 ಜನರು ಇನ್ನೂ ಸಿಕ್ಕಿಬಿದ್ದಿದ್ದಾರೆ. ನಮ್ಮ NDRF ತಂಡ ಮತ್ತು ಇತರ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಇದು ಜನದಟ್ಟಣೆಯ ಪ್ರದೇಶವಾಗಿದ್ದು, ಭಾರೀ ಯಂತ್ರೋಪಕರಣಗಳ ಚಲನೆಯಲ್ಲಿ ನಾವು ತೊಂದರೆಗಳನ್ನು ಎದುರಿಸುತ್ತಿದ್ದೇವೆ. ಜೀವಗಳನ್ನು ಉಳಿಸಲು ನಮಗೆ ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ