Bomb Threat: ದೆಹಲಿಯ ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ
ದೆಹಲಿಯ ಗೀತಾ ಕಾಲೊನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಪೊಲೀಸರು ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ, ಮಾಹಿತಿ ಮೇರೆಗೆ ಬಾಂಬ್ ನಿಷ್ಕ್ರಿಯ ದಳ ಚಾಚಾ ನೆಹರೂ ಆಸ್ಪತ್ರೆಗೆ ತಲುಪಿದೆ. ಆಸ್ಪತ್ರೆ ಆವರಣದಲ್ಲಿ ಬಾಂಬ್ ಬೆದರಿಕೆಯ ಕುರಿತು ತನಿಖೆ ನಡೆಸಲಾಗುತ್ತಿದೆ.
ದೆಹಲಿಯ ಗೀತಾ ಕಾಲೊನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗೆ ಬಾಂಬ್ ಬೆದರಿಕೆ(Bomb Threat) ಇಮೇಲ್ ಬಂದಿದೆ. ಪೊಲೀಸರು ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸಿದ್ದಾರೆ, ಮಾಹಿತಿ ಮೇರೆಗೆ ಬಾಂಬ್ ನಿಷ್ಕ್ರಿಯ ದಳ ಚಾಚಾ ನೆಹರು ಆಸ್ಪತ್ರೆಗೆ ತಲುಪಿದೆ. ಆಸ್ಪತ್ರೆ ಆವರಣದಲ್ಲಿ ಬಾಂಬ್ ಬೆದರಿಕೆಯ ಕುರಿತು ತನಿಖೆ ನಡೆಸಲಾಗುತ್ತಿದೆ.
ಮಾಹಿತಿ ಪ್ರಕಾರ ಬಾಂಬ್ ಬೆದರಿಕೆ ಇರುವ ಈ ಇಮೇಲ್ ಸಿಬ್ಬಂದಿಗೆ ಬಂದಿದ್ದು, ಅದರಲ್ಲಿ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಬರೆಯಲಾಗಿದೆ. ಈ ನಿಟ್ಟಿನಲ್ಲಿ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಚಾಚಾ ನೆಹರು ಮಕ್ಕಳ ಆಸ್ಪತ್ರೆಯ ನಿರ್ದೇಶಕಿ ಡಾ.ಸೀಮಾ ಕಪೂರ್ ಹೇಳುತ್ತಾರೆ. ಸಿಬ್ಬಂದಿ, ವೈದ್ಯರು, ಮಕ್ಕಳು, ರೋಗಿಗಳು ಮತ್ತು ಅಟೆಂಡರ್‌ಗಳು ಆಸ್ಪತ್ರೆಯಿಂದ ಹೊರಗೆ ಕಳುಹಿಸಲಾಗಿದೆ.
ಸ್ಥಳದಲ್ಲೇ ಸ್ಥಳೀಯ ಪೊಲೀಸರು ಮತ್ತು ಬಾಂಬ್ ಸ್ಕ್ವಾಡ್ ತಂಡ ಗಂಟೆಗಳ ಕಾಲ ತನಿಖೆಯಲ್ಲಿ ನಿರತರಾಗಿದ್ದರು. ಆಸ್ಪತ್ರೆಯಲ್ಲಿ ಇನ್ನೂ ಏನೂ ಪತ್ತೆಯಾಗಿಲ್ಲ. ಇದಾದ ಬಳಿಕ ಈಗ ರೋಗಿಗಳನ್ನು ಆಸ್ಪತ್ರೆಯೊಳಗೆ ಕಳುಹಿಸಲಾಗುತ್ತಿದೆ.
ಮತ್ತಷ್ಟು ಓದಿ: Chennai Schools Bomb Threat: ಚೆನ್ನೈನ 5 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ, ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ಶಿಕ್ಷಕರು
ದೆಹಲಿ ಪಬ್ಲಿಕ್ ಶಾಲೆ ಬಾಂಬ್ ಬೆದರಿಕೆ ದೆಹಲಿಯ ಆರ್‌ಕೆ ಪುರಂ ಪ್ರದೇಶದ ದೆಹಲಿ ಪಬ್ಲಿಕ್ ಸ್ಕೂಲ್‌ಗೆ ಶುಕ್ರವಾರ ಬಾಂಬ್ ಬೆದರಿಕೆ(Bomb Threat) ಕರೆ ಬಂದಿತ್ತು. ಸುಮಾರು 10 ಗಂಟೆಗೆ ಕರೆ ಸ್ವೀಕರಿಸಿದ ನಂತರ ಮಕ್ಕಳನ್ನು ಸ್ಥಳಾಂತರಿಸಲಾಗಿದೆ. ಕರೆ ಬಂದ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಕಳೆದ ಎರಡು ಗಂಟೆಗಳಿಂದ ಶೋಧ ಕಾರ್ಯ ನಡೆಸಿದ್ದರು.
ಚೆನ್ನೈನ 5 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಚೆನ್ನೈನ 5 ಖ್ಯಾತ ಖಾಸಗಿ ಶಾಲೆ(Private School)ಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ(Bomb Threat)ಯ ಸಂದೇಶ ರವಾನಿಸಿದ್ದು ಆತಂಕ ಸೃಷ್ಟಿಯಾಗಿತ್ತು. ಗೋಪಾಲಪುರಂ, ಜೆಜೆ ನಗರ, ಆರ್‌ಎ ಪುರಂ, ಅಣ್ಣಾನಗರ, ಪರಿಮಳ ಶಾಲೆಗಳಿಗೆ ಬೆದರಿಕೆ ಹಾಕಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:54 pm, Tue, 30 April 24