Delhi Chalo: ರೈತರ ಪ್ರತಿಭಟನೆ: ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ಇಲ್ಲಿದೆ ಮಾಹಿತಿ

ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿ ಇಂದು ತಮ್ಮ ದೆಹಲಿ ಚಲೋ ಮೆರವಣಿಗೆಯನ್ನು ಆಯೋಜಿಸಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು ಈ ಬೇಡಿಕೆಗಳಲ್ಲಿ ಪ್ರಮುಖವಾಗಿದೆ.

Delhi Chalo: ರೈತರ ಪ್ರತಿಭಟನೆ: ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ಇಲ್ಲಿದೆ ಮಾಹಿತಿ
ಪ್ರತಿಭಟನೆImage Credit source: Timesnow
Follow us
ನಯನಾ ರಾಜೀವ್
|

Updated on: Feb 13, 2024 | 11:05 AM

ರೈತರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ(Delhi Chalo) ಪ್ರತಿಭಟನೆ(Protest)ಗೆ ಕರೆಕೊಟ್ಟಿದ್ದಾರೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ಮತ್ತು ಇತರೆ ಸ್ಥಳಗಳಿಂದ ರೈತರು ದೆಹಲಿ ಚಲೋ ಮೆರವಣಿಗೆಗಾಗಿ ರಾಜಧಾನಿಗೆ ಹೊರಟಿದ್ದಾರೆ. ಏತನ್ಮಧ್ಯೆ, ತಮ್ಮ ಬೇಡಿಕೆಗಳ ಕುರಿತು ಚರ್ಚಿಸಲು ಕೇಂದ್ರವು ಸೋಮವಾರ (ಫೆಬ್ರವರಿ 12) ಸಭೆ ಕರೆದಿತ್ತು.  ರೈತರ ಬೇಡಿಕೆಗಳೇನು ಎಂಬುದರ ಕುರಿತ ಮಾಹಿತಿ ಇಲ್ಲಿದೆ.

ರೈತರ ಬೇಡಿಕೆ ಏನು? 1. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್‌ನ ಹೆಚ್ಚಿನ ರೈತ ಸಂಘಗಳು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಖಾತರಿಪಡಿಸುವ ಕಾನೂನನ್ನು ಒತ್ತಾಯಿಸಿವೆ. 2.  PTI ಪ್ರಕಾರ, ಪ್ರಸಿದ್ಧ ವಿಜ್ಞಾನಿ ಮತ್ತು ಭಾರತದಲ್ಲಿ ಹಸಿರು ಕ್ರಾಂತಿಯ ಪಿತಾಮಹ, M.S. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಒತ್ತಾಯಿಸಲಾಗುತ್ತಿದೆ. 3. ಅಲ್ಲದೆ, ರೈತರು ಕೃಷಿ ಸಾಲ ಮನ್ನಾ ಮತ್ತು ಪೊಲೀಸರು ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. 4. ಇದಲ್ಲದೇ, ಲಖಿಂಪುರಿ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ರೈತರು ಒತ್ತಾಯಿಸುತ್ತಿದ್ದಾರೆ.

ಮತ್ತಷ್ಟು ಓದಿ: Delhi Chalo: ಇಂದು ರೈತರ ದೆಹಲಿ ಚಲೋ; ದೆಹಲಿಯಲ್ಲಿ ಹೆಜ್ಜೆ ಹೆಜ್ಜೆಗೂ ಖಾಕಿ ಕೋಟೆ, ನಿಷೇಧಾಜ್ಞೆ

ದೆಹಲಿಯಲ್ಲಿ ಸೆಕ್ಷನ್ 144 ಜಾರಿ ರೈತರ ದೆಹಲಿ ಚಲೋ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರ ರಾಜಧಾನಿಯಲ್ಲಿ ಸೆಕ್ಷನ್ 144 ಅನ್ನು ದೆಹಲಿ ಪೊಲೀಸರು ಜಾರಿಗೊಳಿಸಿದ್ದಾರೆ. ಈ ಆದೇಶ ಒಂದು ತಿಂಗಳ ಕಾಲ ಜಾರಿಯಲ್ಲಿರುತ್ತದೆ. ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಸೋಮವಾರ ಹೊರಡಿಸಿದ ಆದೇಶದಲ್ಲಿ, ಯಾವುದೇ ರೀತಿಯ ರ್ಯಾಲಿ ಅಥವಾ ಮೆರವಣಿಗೆಯನ್ನು ಕೈಗೊಳ್ಳುವುದನ್ನು ಮತ್ತು ರಸ್ತೆಗಳು ಮತ್ತು ಮಾರ್ಗಗಳನ್ನು ನಿರ್ಬಂಧಿಸುವುದನ್ನು ನಿಷೇಧಿಸಲಾಗಿದೆ.

ದೆಹಲಿ ಚಲೋ ಮೆರವಣಿಗೆ ವೇಗ ಪಡೆಯುತ್ತಿದ್ದಂತೆ, ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಪ್ರತಿಭಟಿಸುವ ವಾಹನಗಳು ನಗರಕ್ಕೆ ಪ್ರವೇಶಿಸುವುದನ್ನು ತಡೆಯುವ ಉದ್ದೇಶದಿಂದ ದೆಹಲಿ ಪೊಲೀಸರು ಬ್ಯಾರಿಕೇಡ್‌ಗಳ ಜೊತೆಗೆ ಮೊಳೆಗಳನ್ನು ಅಳವಡಿಸಲಾಗಿದೆ.

ದೆಹಲಿ ಪೊಲೀಸರ ಆದೇಶದ ಮೇರೆಗೆ, ರಾಷ್ಟ್ರ ರಾಜಧಾನಿಯ ಗಡಿಯನ್ನು ದಾಟದಂತೆ ಟ್ರಾಕ್ಟರ್ ರ್ಯಾಲಿಗಳನ್ನು ನಿಷೇಧಿಸಲಾಗಿದೆ.  ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ದೆಹಲಿ ಪ್ರವೇಶಿಸಲು ಪ್ರಯತ್ನಿಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ