ಇಡಿ ಸರ್ಚ್ ವಾರಂಟ್ ನಡುವೆ ಸುಪ್ರೀಂಕೋರ್ಟ್‌ನಲ್ಲಿ ತುರ್ತು ವಿಚಾರಣೆ ಕೋರಿದ ಅರವಿಂದ್ ಕೇಜ್ರಿವಾಲ್
ಈಗಾಗಲೇ ಹಲವು ಚಾರ್ಜ್ ಶೀಟ್‌ಗಳು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವ ಅಗತ್ಯವಿಲ್ಲದಿದ್ದರೂ ಮುಂಬರುವ ಸಾರ್ವತ್ರಿಕ ಚುನಾವಣೆಗೆ ‘ನಾನ್-ಲೆವೆಲ್ ಪ್ಲೇಯಿಂಗ್ ಫೀಲ್ಡ್’ ಸೃಷ್ಟಿಸುವ ಯತ್ನ ನಡೆಯುತ್ತಿದ್ದು, ಸಿಎಂ ಬಂಧನ ಸನ್ನಿಹಿತವಾಗಿದೆ ಎಂದು ಕೇಜ್ರಿವಾಲ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ದೆಹಲಿ ಮಾರ್ಚ್ 21: ಅಬಕಾರಿ ನೀತಿ ಪ್ರಕರಣದಲ್ಲಿ (excise policy case) ಜಾರಿ ನಿರ್ದೇಶನಾಲಯದ (Enforcement Directorate) ಕ್ರಮದಿಂದ ರಕ್ಷಣೆಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಕಾನೂನು ತಂಡವು ಸುಪ್ರೀಂಕೋರ್ಟ್‌ನಲ್ಲಿ (Supreme Court) ತುರ್ತು ವಿಚಾರಣೆಗೆ ಮನವಿ ಮಾಡಿದೆ. ಹೈಕೋರ್ಟ್ ಆದೇಶದ ವಿರುದ್ಧ ಆಮ್ ಆದ್ಮಿ ಪಕ್ಷದ ಸಂಚಾಲಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂಗದು ಎಎನ್‌ಐ ವರದಿ ಮಾಡಿದೆ. ಇಡಿ ತಂಡವು ಕೇಜ್ರಿವಾಲ್ ಅವರ ನಿವಾಸಕ್ಕೆ ಸರ್ಚ್ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಎಎಪಿ ಮುಖ್ಯಸ್ಥರು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಹಿಂದಿನ ದಿನ, ನ್ಯಾಯಮೂರ್ತಿಗಳಾದ ಸುರೇಶ್ ಕೈಟ್ ಮತ್ತು ಮನೋಜ್ ಜೈನ್ ಅವರ ಹೈಕೋರ್ಟ್ ಪೀಠವು ಪ್ರಕರಣದಲ್ಲಿ ‘ಬಲವಂತದ ಕ್ರಮ’ದಿಂದ ದೆಹಲಿ ಸಿಎಂಗೆ ಯಾವುದೇ ರಕ್ಷಣೆ ನೀಡಲು ನಿರಾಕರಿಸಿತ್ತು. ಇಡಿ ಸಮನ್ಸ್‌ಗಳನ್ನು ಪ್ರಶ್ನಿಸಿ ಅವರ ಮುಖ್ಯ ಮನವಿಯನ್ನು ವಿಚಾರಣೆಗೆ ನಿಗದಿಪಡಿಸಿದಾಗ ಪೀಠವು ಏಪ್ರಿಲ್ 22 ರಂದು ಹೆಚ್ಚಿನ ಪರಿಗಣನೆಗೆ ಅವರ ಅರ್ಜಿಯನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿತ್ತು,.
ವಿಚಾರಣೆ ವೇಳೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, “ಈಗಾಗಲೇ ಮುಗಿದಿದೆ. ಸಮಯ ಮೀರಿದೆ. ಅವರು ಹಾಜರಾಗುತ್ತಿಲ್ಲ” “ಕಾನೂನನ್ನು ಉಲ್ಲಂಘಿಸುವ” ವ್ಯಕ್ತಿಯ ಅರ್ಜಿ ಆಲಿಸಬಾರದು ಎಂದು ಹೇಳಿದ್ದಾರೆ.
ಈಗಾಗಲೇ ಹಲವು ಚಾರ್ಜ್ ಶೀಟ್‌ಗಳು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಂಧಿಸುವ ಅಗತ್ಯವಿಲ್ಲದಿದ್ದರೂ ಮುಂಬರುವ ಸಾರ್ವತ್ರಿಕ ಚುನಾವಣೆಗೆ ‘ನಾನ್-ಲೆವೆಲ್ ಪ್ಲೇಯಿಂಗ್ ಫೀಲ್ಡ್’ ಸೃಷ್ಟಿಸುವ ಯತ್ನ ನಡೆಯುತ್ತಿದ್ದು, ಸಿಎಂ ಬಂಧನ ಸನ್ನಿಹಿತವಾಗಿದೆ ಎಂದು ಕೇಜ್ರಿವಾಲ್ ಪರ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಡಿ ತಂಡ
ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು. ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಈಗಾಗಲೇ ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇಡಿ ಸಲ್ಲಿಸಿರುವ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಎಎಪಿ ಮುಖ್ಯಸ್ಥರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಸಂಸ್ಥೆ ಆರೋಪಿಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ