AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಒಂದೇ ದಿನ ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ!

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಕರೆ ನೀಡಿರುವ ಪ್ರತಿಭಟನೆಗೂ ಮುನ್ನ ದೆಹಲಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ರಾತ್ರೋರಾತ್ರಿ 1,000ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, 30,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಧ್ರುವ್ ರಾಠಿ ಅವರನ್ನೂ ಗುರುಗ್ರಾಮದ ನಿವಾಸದಿಂದ ವಶಕ್ಕೆ ಪಡೆದ್ದಾರೆ.

ಸಿಜೆಪಿ ಪ್ರತಿಭಟನೆ ಹಿನ್ನೆಲೆ: ದೆಹಲಿಯಲ್ಲಿ ಒಂದೇ ದಿನ ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ!
ಧ್ರುವ್ ರಾಠಿ ಪೊಲೀಸ್ ವಶಕ್ಕೆImage Credit source: TV9 Network
ಗಣಪತಿ ಶರ್ಮಾ
|

Updated on: Oct 10, 2026 | 12:35 PM

Share

ಮುಖ್ಯಾಂಶಗಳು

  • ದೆಹಲಿಯಲ್ಲಿ ರಾತ್ರೋರಾತ್ರಿ ಸಾವಿರಕ್ಕೂ ಹೆಚ್ಚು ಜನರು ಪೊಲೀಸ್ ವಶಕ್ಕೆ
  • ಪ್ರತಿಭಟನೆ ಹಿನ್ನೆಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ
  • ಗುರುಗ್ರಾಮದ ನಿವಾಸದಿಂದ ಧ್ರುವ್ ರಾಠಿ ವಶಕ್ಕೆ

ನವದೆಹಲಿ, ಅಕ್ಟೋಬರ್ 10: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (AISA) ಕರೆ ನೀಡಿರುವ ಪ್ರತಿಭಟನೆಗೂ ಮುನ್ನ ದೆಹಲಿಯಲ್ಲಿ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಜಧಾನಿಯಲ್ಲಿ ರಾತ್ರೋರಾತ್ರಿ ಕನಿಷ್ಠ 1,000 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಪ್ರತಿಭಟನೆ ವೇಳೆ ಅಶಾಂತಿ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಗುರುತಿಸಲಾದ ವ್ಯಕ್ತಿಗಳ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದವರನ್ನು ದೆಹಲಿಯ ವಿವಿಧ ಜಿಲ್ಲೆಗಳಲ್ಲಿ ಗುರುತಿಸಲಾದ 13 ಪ್ರಮುಖ ತಾತ್ಕಾಲಿಕ ಕೇಂದ್ರಗಳಿಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ.

ಶಾಹೀನ್ ಬಾಗ್, ಪೂರ್ವ ದೆಹಲಿ ಭಾಗಗಳಲ್ಲಿ ಕಾರ್ಯಾಚರಣೆ

ಶುಕ್ರವಾರ ಮಧ್ಯರಾತ್ರಿ 12.30ರ ವೇಳೆಗೆ ದಕ್ಷಿಣ ಪೂರ್ವ ದೆಹಲಿಯ ಶಾಹೀನ್ ಬಾಗ್ ಸೇರಿದಂತೆ ವಿವಿಧ ಪ್ರದೇಶಗಳಿಂದ ಸುಮಾರು 250 ಜನರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಶಹದಾರಾ ಮತ್ತು ಪೂರ್ವ ದೆಹಲಿ ಜಿಲ್ಲೆಗಳಿಂದ 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಜಂತರ್ ಮಂತರ್ ತಲುಪುವುದನ್ನು ತಡೆಯಲು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಜನಪಥ್ ವೃತ್ತ ಮತ್ತು ಸಂಸತ್ ಮಾರ್ಗದ ಬಳಿ ಪ್ರತಿಭಟನೆಗೆ ಬಂದ ಕೆಲವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ದೆಹಲಿಯ ಮೆಹ್ರೌಲಿ–ಗುರುಗ್ರಾಮ ರಸ್ತೆಯ ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆಯನ್ನೂ ತೀವ್ರಗೊಳಿಸಲಾಗಿದೆ.

30 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ

ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಾದ್ಯಂತ 30,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ವ್ಯವಸ್ಥೆ ಮಾಡಲಾಗಿದೆ. ರಾಜಧಾನಿಯ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿವಿಧ ಜಿಲ್ಲೆಗಳ ಸಂಪರ್ಕ ರಸ್ತೆಗಳಲ್ಲಿ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ನವದೆಹಲಿ ಪ್ರದೇಶಕ್ಕೆ ಪ್ರವೇಶಿಸುವ ರಸ್ತೆಗಳಲ್ಲಿ ಹಲವು ಹಂತಗಳ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಅಶೋಕ ರಸ್ತೆ ಮತ್ತು ಟಾಲ್‌ಸ್ಟಾಯ್ ರಸ್ತೆಯಲ್ಲೂ ಭದ್ರತೆ ಹೆಚ್ಚಿಸಲಾಗಿದ್ದು, ಅರೆಸೇನಾ ಪಡೆಗಳ ಸಿಬ್ಬಂದಿ ಕಾವಲು ಕಾಯುತ್ತಿದ್ದಾರೆ. ಭದ್ರತಾ ವ್ಯವಸ್ಥೆಯನ್ನು ನಿರಂತರವಾಗಿ ಮುಂದುವರಿಸಲು ವಿವಿಧ ಪಾಳಿಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಧ್ರುವ್ ರಾಠಿ ಪೊಲೀಶ್ ವಶಕ್ಕೆ

ಸಾಮಾಜಿಕ ಜಾಲತಾಣದ ಇನ್‌ಫ್ಲುಯೆನ್ಸರ್ ಧ್ರುವ್ ರಾಠಿ ಅವರನ್ನು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೊಲೀಸ್ ಸಿಬ್ಬಂದಿ ಅವರ ಮನೆಗೆ ತೆರಳಿ ಈ ಕ್ರಮ ಕೈಗೊಂಡಿದ್ದಾರೆ. ಆದರೆ, ಅವರನ್ನು ವಶಕ್ಕೆ ಪಡೆದಿರುವುದಕ್ಕೆ ನಿಖರ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: ಸಿಜೆಪಿ ಪ್ರತಿಭಟನೆ: ದೆಹಲಿಗೆ ಬಂದಿಳಿಯುತ್ತಿದ್ದಂತೆಯೇ ಅಭಿಜಿತ್ ದೀಪ್ಕೆ ವಿಮಾನದಲ್ಲೇ ಪೊಲೀಸ್ ವಶಕ್ಕೆ!

ಧ್ರುವ್ ರಾಠಿ ದೆಹಲಿಯಲ್ಲಿ ನಡೆಯಲಿದ್ದ ಸಿಜೆಪಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಾಗಿ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಜನರು ಜಂತರ್ ಮಂತರ್‌ಗೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದ ಪೊಲೀಸರು

ಸುರಕ್ಷತೆ ಮತ್ತು ಅಗತ್ಯ ಪ್ರಕ್ರಿಯೆಗಳನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಆದರೂ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಶಕ್ಕೆ ಪಡೆದವರನ್ನು ಇರಿಸಲು ವಿವಿಧ ಜಿಲ್ಲೆಗಳಲ್ಲಿ ತಾತ್ಕಾಲಿಕ ಕೇಂದ್ರಗಳನ್ನು ಗುರುತಿಸಲಾಗಿದ್ದು, ಪರಿಸ್ಥಿತಿಯ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಸಿಜೆಪಿ ಪ್ರತಿಭಟನೆಗೂ ಮುನ್ನ ಪೊಲೀಸರ ಕಾರ್ಯಾಚರಣೆ: 30 ರಿಂದ 40 ಜನ ವಶಕ್ಕೆ
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಪತ್ನಿ ಸೋನಲ್ ಕಡೆಯಿಂದ ಸಿಕ್ಕ ವಿಶೇಷ ಉಡುಗೊರೆ ಬಗ್ಗೆ ಹೇಳಿದ ತರುಣ್ ಸುಧೀರ್ 
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ಕೃತಜ್ಞತೆ ಸಲ್ಲಿಸುವ ಈ ದಿನದ ಮಹತ್ವ
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಏಳು ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಈ ವಾರ ಹೊರ ಹೋಗೋದು ಯಾರು?
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಬೆಂಗಳೂರು: ಬ್ರಿಗೇಡ್ ರಸ್ತೆ ಲೇಡಿಸ್​​ ಪಬ್​​ಗಳ ಮೇಲೆ ಪೊಲೀಸರ ದಿಢೀರ್ ದಾಳಿ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಮೈಸೂರಿನ ಪ್ರತಿಭೆ ರಿಷಿತಾ ಸಾಧನೆ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?