ಲೆಫ್ಟಿನೆಂಟ್ ಗವರ್ನರ್, ದೆಹಲಿ ಮುಖ್ಯಮಂತ್ರಿ ಪರಸ್ಪರ ರಾಜಕೀಯ ಕಚ್ಚಾಟ ಬಿಡಬೇಕು: ಸುಪ್ರೀಂಕೋರ್ಟ್

ಆಮ್ ಆದ್ಮಿ ಪಕ್ಷದ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಡಿಇಆರ್‌ಸಿಗೆ ಮುಖ್ಯಸ್ಥರೇ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ.

ಲೆಫ್ಟಿನೆಂಟ್ ಗವರ್ನರ್, ದೆಹಲಿ ಮುಖ್ಯಮಂತ್ರಿ ಪರಸ್ಪರ ರಾಜಕೀಯ ಕಚ್ಚಾಟ ಬಿಡಬೇಕು: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on:Jul 17, 2023 | 3:06 PM

ದೆಹಲಿ ಜುಲೈ17: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal)  ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena) ಇಬ್ಬರೂ ರಾಜಕೀಯ ಕಚ್ಚಾಟ ಬಿಡಬೇಕು ಎಂದು ಸುಪ್ರೀಂಕೋರ್ಟ್ (Supreme Court) ಹೇಳಿದ್ದು ಕೇಂದ್ರದ ವಿವಾದಾತ್ಮಕ ಸುಗ್ರೀವಾಜ್ಞೆಗೆ ಸಂಬಂಧಿಸಿದ ಜಗಳ  ಪರಿಹರಿಸುವಂತೆ ಸಲಹೆಯನ್ನು ನೀಡಿತು. ಬಿಕ್ಕಟ್ಟನ್ನು ಪರಿಹರಿಸಲು ನಾವು ಸಲಹೆಯನ್ನು ನೀಡುತ್ತೇವೆ. ಎಲ್‌ಜಿ ಮತ್ತು ಸಿಎಂ ಕುಳಿತು ಒಪ್ಪುವ ಅಭ್ಯರ್ಥಿಯನ್ನು ನೀಡಬಹುದೇ? ಹಾಗಾದರೆ ಆ ವ್ಯಕ್ತಿಯನ್ನು ಡಿಇಆರ್‌ಸಿ (ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ) ಗೆ ನೇಮಿಸಬಹುದು” ಎಂದು ನ್ಯಾಯಾಲಯ ಹೇಳಿದೆ.

ಆಮ್ ಆದ್ಮಿ ಪಕ್ಷದ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಡಿಇಆರ್‌ಸಿಗೆ ಮುಖ್ಯಸ್ಥರೇ ಇಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಈ ಸಲಹೆಯನ್ನು ನೀಡಿದೆ.

ಸುಗ್ರೀವಾಜ್ಞೆಗೆ ಬದಲಾಗಿ ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಕೇಂದ್ರವು ಅಫಿಡವಿಟ್ ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

DERC ಅಧ್ಯಕ್ಷರ ನೇಮಕಾತಿ ಈ ಪ್ರಕರಣವು ಸುಗ್ರೀವಾಜ್ಞೆಯ ಒಂದು ವಿಭಾಗಕ್ಕೆ ಸಂಬಂಧಿಸಿದೆ. ಇಡೀ ಸುಗ್ರೀವಾಜ್ಞೆಯನ್ನು ಪ್ರಶ್ನಿಸುವ ಎರಡನೇ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ನಡೆಸಿದ್ದು, ನೋಟಿಸ್ ಜಾರಿ ಮಾಡಿ ಮತ್ತು ವಿಷಯವನ್ನು ಸಂವಿಧಾನ ಪೀಠಕ್ಕೆ ಕಳುಹಿಸುತ್ತದೆ. ಸುಪ್ರೀಂಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಗುರುವಾರ ನಡೆಸಲಿದೆ.

ಇದನ್ನೂ ಓದಿ: ರಾಜ್ಯಸಭೆಗೆ ಎಸ್ ಜೈಶಂಕರ್, ಡೆರೆಕ್ ಓಬ್ರಿಯಾನ್ ಸೇರಿದಂತೆ 11 ಮಂದಿ ಅವಿರೋಧ ಆಯ್ಕೆ

ಆಮ್ ಆದ್ಮಿ ಪಕ್ಷ (ಎಎಪಿ) ಈ ವಿಷಯದ ಬಗ್ಗೆ ಕಾಂಗ್ರೆಸ್ ಬೆಂಬಲವನ್ನು ಪಡೆದುಕೊಂಡಿದ್ದರೂ ಸಹ, ಕೇಂದ್ರವು ರಾಜ್ಯಸಭೆಯ ಮೂಲಕ ತನ್ನ ಸುಗ್ರೀವಾಜ್ಞೆಯನ್ನು ಜಾರಿ ಮಾಡುವಲ್ಲಿ ಯಾವುದೇ ತೊಂದರೆ ಎದುರಿಸುವ ಸಾಧ್ಯತೆಯಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Mon, 17 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್