ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಜೆ ಘೋಷಿಸಿದ್ದಾರೆ.

ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್​
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jul 09, 2023 | 7:24 PM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ರಜೆ ಘೋಷಿಸಿದ್ದಾರೆ. ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದ್ದು, 1982 ರ ಬಳಿಕ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ ಮತ್ತು ಗುಜರಾತ್​ನ ಹಲವು ಪ್ರದೇಶಗಳಲ್ಲಿಯೂ ಸಾಕಷ್ಟು ಮಳೆಯಾಗಿದೆ. ಹಾಗಾಗಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಸಿಎಂ ಅರವಿಂದ್ ಕೇಜ್ರಿವಾಲ್​ ಸೂಚಿಸಿದ್ದರು.

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Jammu And Kashmir Flood: ಪೂಂಚ್​ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಸೈನಿಕರು

8:30 ಕ್ಕೆ ಕೊನೆಗೊಂಡ 24-ಗಂಟೆಗಳ ಅವಧಿಯಲ್ಲಿ 153 ಮಿಮೀ ಮಳೆಯನ್ನು ದಾಖಲಿಸಿದೆ, ಜುಲೈ 25, 1982 ರಂದು 24-ಗಂಟೆಗಳ ಮಳೆಯಾದ 169.9 ಮಿಮೀ ಮಳೆಯಾಗಿದೆ ಎಂದು ಹಿರಿಯ IMD ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ