ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ರಜೆ ಘೋಷಿಸಿದ್ದಾರೆ. ನಗರದ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ದಾಖಲೆಯ ಮಳೆಯಾಗಿದ್ದು, 1982 ರ ಬಳಿಕ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕರಾವಳಿ ಕರ್ನಾಟಕ ಮತ್ತು ಗುಜರಾತ್ನ ಹಲವು ಪ್ರದೇಶಗಳಲ್ಲಿಯೂ ಸಾಕಷ್ಟು ಮಳೆಯಾಗಿದೆ. ಹಾಗಾಗಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದರು.
दिल्ली में पिछले 2 दिनों से हो रही मूसलाधार बरसात और मौसम विभाग की चेतावनियों को ध्यान में रखते हुए कल दिल्ली के सभी स्कूलों को एक दिन के लिए बंद किया जा रहा है।
— Arvind Kejriwal (@ArvindKejriwal) July 9, 2023
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತಾಗಿ ಸಿಎಂ ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Jammu And Kashmir Flood: ಪೂಂಚ್ನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಸೈನಿಕರು
8:30 ಕ್ಕೆ ಕೊನೆಗೊಂಡ 24-ಗಂಟೆಗಳ ಅವಧಿಯಲ್ಲಿ 153 ಮಿಮೀ ಮಳೆಯನ್ನು ದಾಖಲಿಸಿದೆ, ಜುಲೈ 25, 1982 ರಂದು 24-ಗಂಟೆಗಳ ಮಳೆಯಾದ 169.9 ಮಿಮೀ ಮಳೆಯಾಗಿದೆ ಎಂದು ಹಿರಿಯ IMD ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.