AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್

ಎಎಪಿ ನಾಯಕರನ್ನು ಬರಮಾಡಿಕೊಳ್ಳಲು ಆದಿತ್ಯ ಠಾಕ್ರೆ ಕೂಡ ಹಾಜರಿದ್ದರು. ಉದ್ಧವ್ ಠಾಕ್ರೆ ಕೇಜ್ರಿವಾಲ್ ಮತ್ತು ಎಎಪಿ ನಾಯಕರನ್ನು ತಮ್ಮ ನಿವಾಸದಲ್ಲಿ ಚಹಾಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್
ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್ - ಭಗವಂತ್ ಮಾನ್
ರಶ್ಮಿ ಕಲ್ಲಕಟ್ಟ
|

Updated on: Feb 24, 2023 | 10:10 PM

Share

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal), ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಮತ್ತು ಆಪ್ ಹಿರಿಯ ನಾಯಕರಾದ ಸಂಜಯ್ ಸಿಂಗ್, ಸಂಸದ ರಾಘವ್ ಚಡ್ಡಾ ಶುಕ್ರವಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ಅವರನ್ನು ಮುಂಬೈನ ಅವರ ನಿವಾಸ ಮಾತೋಶ್ರೀಯಲ್ಲಿ ಭೇಟಿಯಾದರು. ಎಎಪಿ ನಾಯಕರನ್ನು ಬರಮಾಡಿಕೊಳ್ಳಲು ಆದಿತ್ಯ ಠಾಕ್ರೆ ಕೂಡ ಹಾಜರಿದ್ದರು. ಉದ್ಧವ್ ಠಾಕ್ರೆ ಕೇಜ್ರಿವಾಲ್ ಮತ್ತು ಎಎಪಿ ನಾಯಕರನ್ನು ತಮ್ಮ ನಿವಾಸದಲ್ಲಿ ಚಹಾಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಶಿವಸೇನಾ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ಏಕನಾಥ್ ಶಿಂಧೆ ಅವರಿಗೆ ನೀಡಲಾಗಿದೆ. ಇತ್ತ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಆಪಾದಿತ ಮದ್ಯ ಹಗರಣ ಮತ್ತು ಸ್ನೂಪಿಂಗ್ ಪ್ರಕರಣದಲ್ಲಿ ಸಿಲುಕಿರುವ ಸಮಯದಲ್ಲಿ ಈ ಸಭೆಯು ಬಂದಿದೆ.

“ಕೊರೊನಾ ಸಾಂಕ್ರಾಮಿಕವು ಉತ್ತುಂಗದಲ್ಲಿದ್ದಾಗ, ಮಹಾರಾಷ್ಟ್ರದಲ್ಲಿ ಉದ್ಧವ್ ಜಿ ಅದನ್ನು ನಿಯಂತ್ರಿಸಿದ ರೀತಿ ಶ್ಲಾಘನೀಯವಾಗಿತ್ತು. ಇಂದು ನಾವು ಕೇಂದ್ರ ಸರ್ಕಾರವು ಬಂಡವಾಳಶಾಹಿಗಳನ್ನು ಉಳಿಸಲು ದೇಶವನ್ನು ಅಡಮಾನವಿಡುವ ವಿಷಯವನ್ನು ಚರ್ಚಿಸಿದ್ದೇವೆ. ನಾವು ಪರಸ್ಪರ ಏನನ್ನಾದರೂ ಕಲಿತಾಗ ಮಾತ್ರ ದೇಶ ಪ್ರಗತಿ ಹೊಂದುತ್ತದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ಮೇಯರ್ ಚುನಾವಣೆ ಕುರಿತು ಮಾತನಾಡಿದ ಮುಖ್ಯಮಂತ್ರಿ ದೆಹಲಿಯ ಜನರು ನಮಗೆ ಅವಕಾಶ ನೀಡಿದ್ದಾರೆ, ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಡ್ಡಿಪಡಿಸಿದೆ” ಎಂದು ಹೇಳಿದರು.

ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ ನಂತರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುವುದಾಗಿ ಹೇಳಿದರು.

ಇದನ್ನೂ ಓದಿ: Delhi MCD: ದೆಹಲಿ ಸಿವಿಕ್ ಸೆಂಟರ್‌ನಲ್ಲಿ ಎಎಪಿ, ಬಿಜೆಪಿ ಕೌನ್ಸಿಲರ್‌ಗಳ ನಡುವೆ ಹೊಡೆದಾಟ; ಬಿಜೆಪಿ ಗೂಂಡಾಗಿರಿ ನಿಲ್ಲಿಸಲಿ ಎಂದ ಆಪ್

“ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಅವರನ್ನು ಭೇಟಿಯಾಗಬೇಕು ಎಂಬ ಆಸೆ ಬಹಳ ದಿನಗಳಿಂದ ಇತ್ತು. ನಾವು ಈ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ. ಉದ್ಧವ್ ಜಿ ಸಿಂಹದ ಮಗ (ಬಾಳಾಸಾಹೇಬ್).ಉದ್ಧವ್ ಠಾಕ್ರೆ ಅವರಿಗೆ ನ್ಯಾಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ದೇಶದಲ್ಲಿನಹಲವು ಸಂಗತಿಗಳ ಬಗ್ಗೆ ಚರ್ಚಿಸಲಾಗಿದೆ” ಎಂದು ಕೇಜ್ರಿವಾಲ್ ಹೇಳಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, ‘ಬಿಜೆಪಿಯವರು ಗೂಂಡಾಗಿರಿ ಮಾಡುತ್ತಾರೆ, ಇಡಿ ಮತ್ತು ಸಿಬಿಐ ಅನ್ನು ಹೇಡಿಗಳು ಬಳಸುತ್ತಾರೆ, ದೆಹಲಿಯ ಜನರು ನಮಗೆ ಎಂಸಿಡಿಯಲ್ಲಿ ಬಹುಮತ ನೀಡಿದ್ದಾರೆ, ಸ್ಥಾಯಿ ಸಮಿತಿಯಲ್ಲಿ ನಮಗೆ ಬಹುಮತವಿದೆ, ಬಿಜೆಪಿ ಮಾತ್ರ ಚುನಾವಣೆ ಬಗ್ಗೆ ಯೋಚಿಸುತ್ತದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್