ನಾಳೆ ಎಲ್​​ಜಿಯನ್ನು ಭೇಟಿಯಾಗಲಿದ್ದಾರೆ ಕೇಜ್ರಿವಾಲ್, ರಾಜೀನಾಮೆ ಸಲ್ಲಿಕೆ ಸಾಧ್ಯತೆ

|

Updated on: Sep 16, 2024 | 5:34 PM

ಭಾನುವಾರ, ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. “ನಾನು 2 ದಿನಗಳ ನಂತರ ರಾಜೀನಾಮೆ ನೀಡಲಿದ್ದೇನೆ. ನಾನು ಪ್ರಾಮಾಣಿಕನೇ ಎಂದು ಜನರನ್ನು ಕೇಳಿ.ಅವರು ಪ್ರತಿಕ್ರಿಯಿಸುವವರೆಗೂ ಸಿಎಂ ಕುರ್ಚಿಯಲ್ಲಿ ಕೂರುವುದಿಲ್ಲ. ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡಿದ ನಂತರವೇ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದಿದ್ದರು.

ನಾಳೆ ಎಲ್​​ಜಿಯನ್ನು ಭೇಟಿಯಾಗಲಿದ್ದಾರೆ ಕೇಜ್ರಿವಾಲ್, ರಾಜೀನಾಮೆ ಸಲ್ಲಿಕೆ ಸಾಧ್ಯತೆ
ಅರವಿಂದ್ ಕೇಜ್ರಿವಾಲ್
Follow us on

ದೆಹಲಿ ಸೆಪ್ಟೆಂಬರ್ 16: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಮಂಗಳವಾರ ಸಂಜೆ 4:30 ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಲಿದ್ದು, ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ಮಾಡಿದೆ.
ಮಂಗಳವಾರದ ಸಭೆಗೆ ಮುಖ್ಯಮಂತ್ರಿ ಸಕ್ಸೇನಾ ಅವರಿಂದ ಸಮಯ ಕೇಳಿದ್ದಾರೆ, ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷವು ಸಂಸ್ಥೆಗೆ ತಿಳಿಸಿದೆ. ಪಿಟಿಐ ವರದಿಯ ಪ್ರಕಾರ, ಮಂಗಳವಾರ ಸಂಜೆ 4:30 ಕ್ಕೆ ಭೇಟಿಯಾಗಲು ಎಲ್-ಜಿ ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಹೇಳಿದ್ದಾರೆ.

ಭಾನುವಾರ, ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. “ನಾನು 2 ದಿನಗಳ ನಂತರ ರಾಜೀನಾಮೆ ನೀಡಲಿದ್ದೇನೆ. ನಾನು ಪ್ರಾಮಾಣಿಕನೇ ಎಂದು ಜನರನ್ನು ಕೇಳಿ.ಅವರು ಪ್ರತಿಕ್ರಿಯಿಸುವವರೆಗೂ ಸಿಎಂ ಕುರ್ಚಿಯಲ್ಲಿ ಕೂರುವುದಿಲ್ಲ. ಜನರು ನನಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡಿದ ನಂತರವೇ ನಾನು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ. ಜೈಲಿನಿಂದ ಹೊರಬಂದ ನಂತರ ‘ಅಗ್ನಿಪರೀಕ್ಷೆ’ ನೀಡಲು ಬಯಸುತ್ತೇನೆ” ಎಂದು ಹೇಳಿದ್ದರು.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು ದೆಹಲಿಯ ತಿಹಾರ್ ಜೈಲಿನಿಂದ ಹೊರನಡೆದ ಎರಡು ದಿನಗಳ ನಂತರ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ.

‘ಕೇಜ್ರಿವಾಲ್ ಅವರಿಗೆ ತಮ್ಮ ಜನರ ಮೇಲೆ ನಂಬಿಕೆ ಇದೆ’: ಸೌರಭ್ ಭಾರದ್ವಾಜ್

ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ನಾಯಕನನ್ನು ಆಯ್ಕೆ ಮಾಡಲು ಶಾಸಕಾಂಗ ಪಕ್ಷದ ಸಭೆ ನಡೆಸಲಾಗುವುದು ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.

“ಯಾರು ಚುನಾಯಿತರಾಗುತ್ತಾರೋ ಅವರು ಲೆಫ್ಟಿನೆಂಟ್ ಗವರ್ನರ್ ಮೂಲಕ ರಾಷ್ಟ್ರಪತಿಗಳಿಗೆ ಸರ್ಕಾರ ರಚಿಸುವುದಾಗಿ ಹೇಳುತ್ತಾರೆ. ಶಾಸಕರು ನಮ್ಮೊಂದಿಗಿದ್ದಾರೆ. ಆದ್ದರಿಂದ ನಿಸ್ಸಂಶಯವಾಗಿ ಆ ವ್ಯಕ್ತಿಯನ್ನು ಕರೆಯಲಾಗುವುದು ಮತ್ತು ಪ್ರಮಾಣವಚನ ಸ್ವೀಕರಿಸುತ್ತಾರೆ. ಈ ಸಂಪೂರ್ಣ ಪ್ರಕ್ರಿಯೆಯು ಒಂದು ವಾರದೊಳಗೆ ಪೂರ್ಣಗೊಳ್ಳಬೇಕು ಎಂದು ನಾನು ಭಾವಿಸುತ್ತೇನೆ” ಎಂದು ಭಾರದ್ವಾಜ್ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದರೆ ₹11 ಲಕ್ಷ ನೀಡುವುದಾಗಿ ಘೋಷಿಸಿದ ಶಿವಸೇನಾ ಶಾಸಕ

“ಬಿಜೆಪಿ ಕಳೆದ ಎರಡು ವರ್ಷಗಳಲ್ಲಿ ಏನು ಮಾಡಿದ್ದರೂ, ಮುಖ್ಯಮಂತ್ರಿಗೆ ಇನ್ನೂ ಜನರು ಮತ್ತು ಅವರ ಪ್ರಾಮಾಣಿಕತೆಯ ಮೇಲೆ ನಂಬಿಕೆ ಇದೆ. ದೆಹಲಿಯ ಜನರು ಚುನಾವಣೆ ನಡೆಯಲು ಉತ್ಸುಕರಾಗಿದ್ದಾರೆ, ಇದರಿಂದ ಅವರು ಮತ ಚಲಾಯಿಸಬಹುದು ಮತ್ತು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಗೆಲ್ಲಬಹುದು ಎಂದು ಎಎಪಿ ನಾಯಕ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Mon, 16 September 24