ಭಾನುವಾರ ಶರಣಾಗುತ್ತೇನೆ, ನಾನಿಲ್ಲದಿದ್ದರೂ ದೆಹಲಿಯ ಕೆಲಸಕ್ಕೆ ತೊಂದರೆಯಾಗದು; ಸಿಎಂ ಅರವಿಂದ್ ಕೇಜ್ರಿವಾಲ್

ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಅಂತ್ಯಗೊಳ್ಳುತ್ತಿದೆ. ಭಾನುವಾರ ಮಧ್ಯಾಹ್ನ 3 ಗಂಟೆಗೆ ಜೈಲಿಗೆ ವಾಪಾಸ್ ಹೋಗಲು ಮನೆಯಿಂದ ಹೊರಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಭಾನುವಾರ ಶರಣಾಗುತ್ತೇನೆ, ನಾನಿಲ್ಲದಿದ್ದರೂ ದೆಹಲಿಯ ಕೆಲಸಕ್ಕೆ ತೊಂದರೆಯಾಗದು; ಸಿಎಂ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: May 31, 2024 | 3:44 PM

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣದಲ್ಲಿ (Delhi Liquor Policy Case) ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (CM Arvind Kejriwal) ಅವರು ಭಾನುವಾರ ಜೈಲು ಅಧಿಕಾರಿಗಳ ಮುಂದೆ ಶರಣಾಗುವುದಾಗಿ ಹೇಳಿದ್ದಾರೆ. ನಾನು ಎಲ್ಲಿಯೇ ಇದ್ದರೂ ಅದು ಮುಖ್ಯವಾಗುವುದಿಲ್ಲ. ನಾನು ಎಲ್ಲಿ ವಾಸಿಸುತ್ತೇನೆ ಎಂಬುದು ಮುಖ್ಯವಲ್ಲ. ಜೈಲಿನ ಒಳಗೆ ಅಥವಾ ಹೊರಗೆ ಎಲ್ಲೇ ಇದ್ದರೂ ದೆಹಲಿಯ ಕೆಲಸವನ್ನು ನಿಲ್ಲಿಸಲು ಬಿಡುವುದಿಲ್ಲ. ಜೂನ್ 1ರವರೆಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸುಪ್ರೀಂ ಕೋರ್ಟ್‌ಗೆ ಶರಣಾಗುವುದಾಗಿ ಹೇಳಿದ್ದಾರೆ.

“ನಾನು ಎಷ್ಟು ದಿನ ಜೈಲಿನಲ್ಲಿ ಇರುತ್ತೇನೆ ಎಂದು ನನಗೆ ತಿಳಿದಿಲ್ಲ. ಆದರೆ ಸರ್ವಾಧಿಕಾರದ ವಿರುದ್ಧ ಹೋರಾಡಲು ನಾನು ಹೆಮ್ಮೆಪಡುತ್ತೇನೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ. ನಾನಿಲ್ಲದಿದ್ದಾಗ ನನ್ನ ವಯಸ್ಸಾದ ಪೋಷಕರನ್ನು ನೋಡಿಕೊಳ್ಳುವಂತೆ ದೆಹಲಿಯ ಜನರನ್ನು ಕೇಜ್ರಿವಾಲ್ ಮನವಿ ಮಾಡಿದ್ದಾರೆ. “ನಾನು ಯಾವಾಗಲೂ ಮಗನಂತೆ ನಿಮಗಾಗಿ ಕೆಲಸ ಮಾಡಿದ್ದೇನೆ. ಇಂದು ನನ್ನ ವಯಸ್ಸಾದ ಪೋಷಕರನ್ನು ನೋಡಿಕೊಳ್ಳಲು ನಾನು ನಿಮ್ಮನ್ನು ವಿನಂತಿಸುತ್ತೇನೆ. ಅವರ ಆರೋಗ್ಯ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚೆನ್ನಾಗಿಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಿಂದ ರಾಹುಲ್ ಗಾಂಧಿ, ಕೇಜ್ರಿವಾಲ್​ಗೆ ಬೆಂಬಲ; ಮೋದಿ ಹೇಳಿದ್ದೇನು?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾವನಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ್ದು, ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.

“ಭಾನುವಾರ ಶರಣಾಗಲು ನಾನು ಮಧ್ಯಾಹ್ನ 3 ಗಂಟೆಗೆ ನನ್ನ ಮನೆಯಿಂದ ಹೊರಡುತ್ತೇನೆ. ನಾವು ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದೇವೆ. ನಾನು ದೇಶಕ್ಕಾಗಿ ನನ್ನ ಪ್ರಾಣವನ್ನು ಬೇಕಾದರೂ ತ್ಯಾಗ ಮಾಡುತ್ತೇನೆ” ಎಂದು ಅರವಿಂದ್ ಕೇಜ್ರಿವಾಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ಆರೋಗ್ಯ ಸರಿಯಾಗಿತ್ತಾ?; ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಗೆ ಇಡಿ ಆಕ್ಷೇಪ

ಅರವಿಂದ್ ಕೇಜ್ರಿವಾಲ್ ಮೇ 10ರಂದು ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಜೂನ್ 2ರಂದು ಅವರು ತಿಹಾರ್ ಜೈಲಿಗೆ ಶರಣಾಗುವಂತೆ ಸೂಚಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ