Arvind Kejriwal: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತೆ 4 ದಿನ ಇಡಿ ಕಸ್ಟಡಿಗೆ
ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರ ಇಡಿ ಕಸ್ಟಡಿಯನ್ನು ಏಪ್ರಿಲ್ 1ರವರೆಗೆ ವಿಸ್ತರಣೆ ಮಾಡಲಾಗಿದೆ.
ದೆಹಲಿ, ಮಾ.28: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಲಾಗಿತ್ತು. 6 ದಿನಗಳ ಅವರು ಇಡಿ ಕಸ್ಟಡಿಗೆ ವಹಿಸಲಾಗಿದೆ. ಇಂದು ರೋಸ್ ಅವೆನ್ಯೂ ಕೋರ್ಟ್‌ಗೆ ಅವರನ್ನು ವಿಚಾರಣೆಗೆ ಕೆರದುಕೊಂಡು ಬರಲಾಗಿತ್ತು. ಇದೀಗ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆಯನ್ನು ಮಾಡಲಾಗಿದೆ ಎಂದು ದೆಹಲಿ ಕೋರ್ಟ್ ಆದೇಶ ನೀಡಿದೆ. ಏಪ್ರಿಲ್ 1ರವರೆಗೆ ಇಡಿ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಇಡಿ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.
Excise Case: Delhi Court extends ED remand of Arvind Kejriwal till April 1
ED while seeking remand stated that Data in one mobile phone (belonging to the arrestee’s wife) has been extracted and is being analyzed. However, data from the other 4 digital devices seized during… pic.twitter.com/OB565de53Y
— ANI (@ANI) March 28, 2024
ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 22ರಂದು ಇಡಿ ಸಂಬಂಧಿಸಿತ್ತು. ಆರು ದಿನಗಳ ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವಿಚಾರಣೆಯನ್ನು ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನಡೆಸಿ, 4 ದಿನ ಕಸ್ಟಡಿಯನ್ನು ವಿಸ್ತರಣೆ ಮಾಡಿದ್ದಾರೆ.
ನಿನ್ನೆ, ದೆಹಲಿ ಹೈಕೋರ್ಟ್ ಕೇಜ್ರಿವಾಲ್‌ಗೆ ಯಾವುದೇ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತ್ತು. ಬಂಧನವನ್ನು ಪ್ರಶ್ನಿಸಿ ಅವರ ಮನವಿಯ ಮೇಲೆ ಮಾತ್ರ ನೋಟಿಸ್ ಜಾರಿ ಮಾಡಿತ್ತು. ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು ವಿಚಾರಣೆಯ ಸಮಯದಲ್ಲಿ ಹಾಲಿ ಸಿಎಂ ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಅರವಿಂದ್ ಕೇಜ್ರಿವಾಲ್ ಪ್ರಯತ್ನಸುತ್ತಿದ್ದಾರೆ. ಗೋವಾದಿಂದ ಕರೆಸಲಾದ ಕೆಲವು ವ್ಯಕ್ತಿ ಹಾಗು ಏಜೆನ್ಸಿಗಳನ್ನು ವಿಚಾರಣೆ ಮಾಡಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ: ಕೇಜ್ರಿವಾಲ್ನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕೆಂಬ ಮನವಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಹೀಗಾಗಿ ಇಡಿ ಇನ್ನೂ 7 ದಿನಗಳ ಕಸ್ಟಡಿಗೆ ಕೋರಿತ್ತು. ಸಿಎಂ ಆಗಿದ್ದರೆ ಅವರು ದೋಷಮುಕ್ತರಾಗುವುದಿಲ್ಲ, ಸಿಎಂಗೆ ವಿಭಿನ್ನ ಮಾನದಂಡಗಳಿಲ್ಲ, ಸಿಎಂ ಅನ್ನು ಬಂಧಿಸುವ ಹಕ್ಕು ಸಾಮಾನ್ಯ ವ್ಯಕ್ತಿಗಿಂತ ಭಿನ್ನವಾಗಿಲ್ಲ ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಇಡಿ ಎಎಪಿಯ ಗೋವಾ ಘಟಕದ ಮುಖ್ಯಸ್ಥ ಅಮಿತ್ ಪಾಲೇಕರ್ ಮತ್ತು ಪಕ್ಷದ ಇತರ ಕೆಲವು ನಾಯಕರನ್ನು ವಿಚಾರಣೆಗೆ ಕರೆಸಿತ್ತು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:02 pm, Thu, 28 March 24