ಪ್ರಧಾನಿ ಮೋದಿಯನ್ನು ಭೇಟಿಯಾದ ದೆಹಲಿ ಸಿಎಂ ರೇಖಾ ಗುಪ್ತಾ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಇದೇ ವೇಳೆ ಅವರ ಸಂಪುಟದ ಸಚಿವರು ದೆಹಲಿ ನಗರದಾದ್ಯಂತ ಗುಂಡಿ ಬಿದ್ದ ರಸ್ತೆಗಳು ಮತ್ತು ಬಾಕಿ ಇರುವ ಯೋಜನೆಗಳ ದುರಸ್ತಿಯನ್ನು ಪರಿಶೀಲಿಸಲು ಪ್ರಾರಂಭಿಸಿದರು. ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಪ್ರಧಾನಿ ಮೋದಿಯವರ ಸಮ್ಮುಖದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು.

ಪ್ರಧಾನಿ ಮೋದಿಯನ್ನು ಭೇಟಿಯಾದ ದೆಹಲಿ ಸಿಎಂ ರೇಖಾ ಗುಪ್ತಾ
Rekha Gupta Met Pm Modi

Updated on: Feb 22, 2025 | 3:05 PM

ನವದೆಹಲಿ: ಮೂಲಸೌಕರ್ಯಗಳ ಸುಧಾರಣೆಗಾಗಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಗೆದ ರಸ್ತೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾದ ದೆಹಲಿ ಸಿಎಂ ರೇಖಾ ಗುಪ್ತಾ ಮೋದಿಯವರಿಗೆ ಪುಷ್ಪ ಗುಚ್ಛ ನೀಡಿದರು. ದೆಹಲಿಯ 4ನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ರೇಖಾ ಗುಪ್ತಾ ಪ್ರಧಾನಿಯನ್ನು ಭೇಟಿಯಾಗುತ್ತಿರುವುದು ಇದೇ ಮೊದಲು. ಇಬ್ಬರೂ ನಾಯಕರು ಪ್ರಧಾನ ಮಂತ್ರಿಯವರ ನಿವಾಸದಲ್ಲಿ ಭೇಟಿಯಾದರು.

ಪ್ರಧಾನಿ ಮೋದಿಯವರೊಂದಿಗಿನ ಭೇಟಿಯ ಬಳಿಕ ಮಾತನಾಡಿದ ಸಿಎಂ ರೇಖಾ ಗುಪ್ತಾ , “ಈ ದೆಹಲಿಯ ಮಗಳಿಗೆ ಮುಖ್ಯಮಂತ್ರಿಯಾಗಿ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಮೋದಿಯವರಿಗೆ ಧನ್ಯವಾದ” ಎಂದು ಹೇಳಿದ್ದಾರೆ.


ಇಂದಿನ ಮಾತುಕತೆ ವೇಳೆ ದೆಹಲಿ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೆಹಲಿ ಸರ್ಕಾರವು ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ವೇಗವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ದೆಹಲಿಯನ್ನು ಸ್ಮಾರ್ಟ್ ಮತ್ತು ಉತ್ತಮ ನಗರವನ್ನಾಗಿ ಮಾಡಲು ತಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಛತ್ರಪತಿ ಸಂಭಾಜಿ ಜೀವನಾಧರಿತ ಛಾವಾ ಸಿನಿಮಾಗೆ ಪ್ರಧಾನಿ ಮೋದಿಯಿಂದಲೂ ಭಾರೀ ಮೆಚ್ಚುಗೆ

ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಅಗತ್ಯ ಎಂದು ಪ್ರಧಾನಿ ಮೋದಿ ಮುಖ್ಯಮಂತ್ರಿಗಳಿಗೆ ಸೂಚಿಸಿದರು. ಇದರಿಂದ ಸಾರ್ವಜನಿಕರಿಗೆ ಸಾಧ್ಯವಾದಷ್ಟು ಬೇಗ ಪರಿಹಾರ ಸಿಗುತ್ತದೆ. ದೆಹಲಿಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಎಲ್ಲ ರೀತಿಯಲ್ಲೂ ಸಹಕರಿಸಲಿದೆ ಎಂದು ಮೋದಿ ಹೇಳಿದರು.


ಪ್ರಧಾನಮಂತ್ರಿಯವರ ನಿವಾಸಕ್ಕೆ ತೆರಳುವ ಮೊದಲು, ರೇಖಾ ಗುಪ್ತಾ ಅವರು ಬೆಳಿಗ್ಗೆ ಶಾಲಿಮಾರ್ ಬಾಗ್‌ನಲ್ಲಿರುವ ತಮ್ಮ ಮನೆಯ ಮೊದಲ ಮಹಡಿಯ ಬಾಲ್ಕನಿಯಿಂದ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ದೆಹಲಿ ಸಿಎಂ ಆಗಿ ಸೇವೆ ಸಲ್ಲಿಸಲು “ದೆಹಲಿಯ ಮಗಳಾದ” ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಗರದ ಎಲ್ಲಾ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಪರವಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಾವು ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಪ್ರಧಾನಿ ಮೋದಿಯವರ ಆಯುಷ್ಮಾನ್ ಭಾರತ್ ಯೋಜನೆಯನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿದ್ದೇವೆ” ಎಂದು ಅವರು ಹೇಳಿದರು, ಒಂದು ದಿನವೂ ವ್ಯರ್ಥ ಮಾಡದೆ ಜನರ ಸೇವೆಯನ್ನು ಮುಂದುವರಿಸುವುದಾಗಿ ಭರವಸೆ ನೀಡಿದರು.

“ಪ್ರಧಾನಿ ಮೋದಿಯವರ ಆದೇಶದಂತೆ ವಿಕಸಿತ್ ದೆಹಲಿಯನ್ನು ಸಾಧಿಸುವುದು ನಮ್ಮ ಧ್ಯೇಯವಾಗಿದೆ” ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ