AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಸರ್ಕಾರಗಳು ಬ್ರಾಹ್ಮಣ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು: ರೇಖಾ ಗುಪ್ತಾ

ಬ್ರಾಹ್ಮಣ(Brahmin)ರು ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವ ಕೆಲಸ ಮಾಡುತ್ತಾರೆ, ಎಲ್ಲಾ ಸರ್ಕಾರಗಳು ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಹೇಳಿಕೆ ತೀವ್ರ ವಿವಾದದ ಅಲೆ ಎಬ್ಬಿಸಿದೆ. ದೆಹಲಿಯ ಪಿತಾಂಪುರದಲ್ಲಿ ಬ್ರಾಹ್ಮಣ ಸಭಾ ಆಯೋಜಿಸಿದ್ದ ಅಖಿಲ ಭಾರತ ಬ್ರಾಹ್ಮಣ ಸಮ್ಮೇಳನದಲ್ಲಿ ರೇಖಾ ಗುಪ್ತಾ ಈ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯವು ಧರ್ಮಗ್ರಂಥಗಳನ್ನು ಪೂಜಿಸುವುದಷ್ಟೇ ಅಲ್ಲದೆ ಆಯುಧಗಳನ್ನು ಕೂಡ ಗೌರವಿಸುತ್ತಾರೆ.

ಎಲ್ಲಾ ಸರ್ಕಾರಗಳು ಬ್ರಾಹ್ಮಣ ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು: ರೇಖಾ ಗುಪ್ತಾ
ರೇಖಾ ಗುಪ್ತಾ
ನಯನಾ ರಾಜೀವ್
|

Updated on: Oct 06, 2025 | 3:08 PM

Share

ನವದೆಹಲಿ, ಅಕ್ಟೋಬರ್ 06: ಬ್ರಾಹ್ಮಣ(Brahmin)ರು ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವ ಕೆಲಸ ಮಾಡುತ್ತಾರೆ, ಎಲ್ಲಾ ಸರ್ಕಾರಗಳು ಸಮುದಾಯದ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು ಎನ್ನುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಹೇಳಿಕೆ ತೀವ್ರ ವಿವಾದದ ಅಲೆ ಎಬ್ಬಿಸಿದೆ. ದೆಹಲಿಯ ಪಿತಾಂಪುರದಲ್ಲಿ ಬ್ರಾಹ್ಮಣ ಸಭಾ ಆಯೋಜಿಸಿದ್ದ ಅಖಿಲ ಭಾರತ ಬ್ರಾಹ್ಮಣ ಸಮ್ಮೇಳನದಲ್ಲಿ ರೇಖಾ ಗುಪ್ತಾ ಈ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣ ಸಮುದಾಯವು ಧರ್ಮಗ್ರಂಥಗಳನ್ನು ಪೂಜಿಸುವುದಷ್ಟೇ ಅಲ್ಲದೆ ಆಯುಧಗಳನ್ನು ಕೂಡ ಗೌರವಿಸುತ್ತಾರೆ.

ಸಮುದಾಯವು ಯಾವಾಗಲೂ ಧರ್ಮ, ಜ್ಞಾನ ಮತ್ತು ಸದ್ಭಾವನೆಯನ್ನು ಉತ್ತೇಜಿಸುವ ಮೂಲಕ ಸಮಾಜದ ಒಳಿತಿಗಾಗಿ ಕೆಲಸ ಮಾಡಿದೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ, ಅದು ಬ್ರಾಹ್ಮಣ ಸಮುದಾಯದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದರು.

ದೆಹಲಿಯಲ್ಲಿ ಬ್ರಾಹ್ಮಣ ಸಮುದಾಯವು ಕಳೆದ 27 ವರ್ಷಗಳಿಂದ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದೆ. ಈಗ ರಾಜಧಾನಿಯಲ್ಲಿ ಉತ್ತಮ ಆಡಳಿತ, ಅಭಿವೃದ್ಧಿಗಾಗಿ ಬ್ರಾಹ್ಮಣ ಸಮುದಾಯವು ತಮ್ಮ ಸಲಹೆಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಮತ್ತಷ್ಟು ಓದಿ: Rekha Gupta Attacked: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ದೆಹಲಿಯನ್ನು ಮುನ್ನಡೆಸಲು ನಿಮ್ಮೆಲ್ಲರ ಸಲಹೆಗಳನ್ನು ನೀಡುವುದನ್ನು ಮುಂದುವರಿಸಬೇಕೆಂದು ನಾನು ವಿನಂತಿಸುತ್ತೇನೆ. ಹಲವು ಹಳೆಯ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಕಳೆದ 27 ವರ್ಷಗಳಿಂದ ದೆಹಲಿಯ ಪ್ರಗತಿ ನಿಧಾನವಾಗಿದೆ, ಆದರೆ ಈಗ ಈ ವೇಗವನ್ನು ಹೆಚ್ಚಿಸುವ ಸಮಯ.

ರೇಖಾ ಗುಪ್ತಾ ಮಾತು

ನಾವೆಲ್ಲರೂ ದೆಹಲಿ ಮತ್ತು ಅದರ ಜನರಿಗಾಗಿ ಒಟ್ಟಾಗಿ ಕೆಲಸ ಮಾಡಿದರೆ, ನಾವು ದೆಹಲಿಯನ್ನು ಅಭಿವೃದ್ಧಿ ಹೊಂದಿದ ನಗರವನ್ನಾಗಿ ಮಾಡಬಹುದು” ಎಂದು ರೇಖಾ ಗುಪ್ತಾ ಹೇಳಿದರು.

ರೇಖಾ ಗುಪ್ತಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಸಂಜೀವ್ ಝಾ, ಅವರ ಹೇಳಿಕೆಯಿಂದ ಆಘಾತಕ್ಕೊಳಗಾಗಿದ್ದೇನೆ, ಏಕೆಂದರೆ ಅದು ಜನರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಹೇಳಿದರು . ಏತನ್ಮಧ್ಯೆ, ಅಕ್ಟೋಬರ್ 25 ರಿಂದ 28 ರವರೆಗೆ ನಡೆಯಲಿರುವ ಛಠ್ ಪೂಜೆಯ ಸಿದ್ಧತೆಗಳನ್ನು ಮುಖ್ಯಮಂತ್ರಿ ರೇಖಾ ಗುಪ್ತಾ ಪರಿಶೀಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ