ರಾಹುಲ್ ಗಾಂಧಿ ಪಾಸ್‌ಪೋರ್ಟ್‌ಗಾಗಿ ಸಲ್ಲಿಸಿರುವ ಮನವಿ ವಿರೋಧಿಸಿ ಉತ್ತರ ನೀಡಲು ಸುಬ್ರಮಣಿಯನ್ ಸ್ವಾಮಿಗೆ ದೆಹಲಿ ಕೋರ್ಟ್ ಅನುಮತಿ

ರಾಹುಲ್, ಮಂಗಳವಾರ ತಮ್ಮ ಯುನೈಟೆಡ್ ಸ್ಟೇಟ್ಸ್ ಭೇಟಿಗೆ ಮುಂಚಿತವಾಗಿ ಹೊಸ ಸಾಮಾನ್ಯ ಪಾಸ್‌ಪೋರ್ಟ್ ನೀಡುವುದಕ್ಕೆ ಅನುಮತಿ ಮತ್ತು ಯಾವುದೇ ಆಕ್ಷೇಪಣೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು.

ರಾಹುಲ್ ಗಾಂಧಿ ಪಾಸ್‌ಪೋರ್ಟ್‌ಗಾಗಿ ಸಲ್ಲಿಸಿರುವ ಮನವಿ ವಿರೋಧಿಸಿ ಉತ್ತರ ನೀಡಲು ಸುಬ್ರಮಣಿಯನ್ ಸ್ವಾಮಿಗೆ ದೆಹಲಿ ಕೋರ್ಟ್ ಅನುಮತಿ
ರಾಹುಲ್ ಗಾಂಧಿ- ಸುಬ್ರಮಣಿಯನ್ ಸ್ವಾಮಿ
Follow us
ರಶ್ಮಿ ಕಲ್ಲಕಟ್ಟ
|

Updated on: May 24, 2023 | 2:06 PM

ಹೊಸ ಸಾಮಾನ್ಯ ಪಾಸ್‌ಪೋರ್ಟ್ (passport) ನೀಡಲು ಅನುಮತಿ ಕೋರಿ ರಾಹುಲ್ ಗಾಂಧಿ (Rahul gandhi) ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ ಉತ್ತರ ನೀಡಲು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಅನುಮತಿ ನೀಡಿದೆ. ರಾಹುಲ್ ಗಾಂಧಿ ವಿರುದ್ಧದ ಪ್ರಕರಣಗಳು ನ್ಯಾಯಾಲಯದ ಮುಂದೆ ಬಾಕಿಯಿದ್ದು, ಅವರಿಗೆ ಪ್ರಯಾಣಿಸಲು ಅವಕಾಶ ನೀಡುವುದರಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಸ್ವಾಮಿ ವಾದಿಸಿದರು. ಆದರೆ, ರಾಹುಲ್ ಪರ ವಾದ ಮಂಡಿಸಿದ ವಕೀಲ ತರನ್ನುಮ್ ಚೀಮಾ ಅವರಿಗೆ ನ್ಯಾಯಾಲಯ ಯಾವುದೇ ಪ್ರಯಾಣದ ನಿರ್ಬಂಧವನ್ನು ವಿಧಿಸಿಲ್ಲ ಎಂದು ಹೇಳಿದರು.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರು ಪ್ರಯಾಣದ ಹಕ್ಕು ಮೂಲಭೂತ ಹಕ್ಕು. 2015 ರಲ್ಲಿ ವಿಚಾರಣಾ ನ್ಯಾಯಾಲಯದಿಂದ ಜಾಮೀನು ಪಡೆದಾಗ ರಾಹುಲ್ ಗಾಂಧಿಗೆ ಯಾವುದೇ ನಿರ್ಬಂಧವನ್ನು ವಿಧಿಸಲಾಗಿಲ್ಲ ಎಂದು ಹೇಳಿದರು. ಏತನ್ಮಧ್ಯೆ, ನ್ಯಾಯಾಲಯವು ಸ್ವಾಮಿಗೆ ಲಿಖಿತ ಉತ್ತರವನ್ನು ಸಲ್ಲಿಸಲು ಅವಕಾಶ ನೀಡಿದ್ದು, ಮೇ 26 ರಂದು ಹೆಚ್ಚಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ರಾಹುಲ್, ಮಂಗಳವಾರ ತಮ್ಮ ಯುನೈಟೆಡ್ ಸ್ಟೇಟ್ಸ್ ಭೇಟಿಗೆ ಮುಂಚಿತವಾಗಿ ಹೊಸ ಸಾಮಾನ್ಯ ಪಾಸ್‌ಪೋರ್ಟ್ ನೀಡುವುದಕ್ಕೆ ಅನುಮತಿ ಮತ್ತು ಯಾವುದೇ ಆಕ್ಷೇಪಣೆಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ನಂತರ 2023 ರ ಮಾರ್ಚ್‌ನಲ್ಲಿ ಸಂಸತ್ತಿನ ಸದಸ್ಯರಾಗಿ ಅನರ್ಹಗೊಂಡ ನಂತರ ಅವರು ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಒಪ್ಪಿಸಿದ್ದರಿಂದ ಅವರು ನ್ಯಾಯಾಲಯದಿಂದ ಅನುಮತಿ ಕೋರಿದ್ದರು.

2012ರಲ್ಲಿ ಸ್ವಾಮಿ ಸಲ್ಲಿಸಿದ್ದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಆರೋಪಿಯಾಗಿರುವ ಕಾರಣ ಆಕ್ಷೇಪಣೆ ಇಲ್ಲ ಎಂದು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಡಿಸೆಂಬರ್ 19, 2015 ರಂದು ಹೊರಡಿಸಿದ ಆದೇಶದ ಮೂಲಕ ಗಾಂಧಿ ಅವರಿಗೆ ಅವರ ತಾಯಿ ಸೋನಿಯಾ ಗಾಂಧಿ ಮತ್ತು ಇತರ ಆರೋಪಿಗಳೊಂದಿಗೆ ಪ್ರಕರಣದಲ್ಲಿ ಜಾಮೀನು ನೀಡಲಾಯಿತು.

ಇದನ್ನೂ ಓದಿ: Sengol: ನೂತನ ಸಂಸತ್ತಿನಲ್ಲಿ ಇರಿಸಲಾಗುವ ಅಧಿಕಾರ ಹಸ್ತಾಂತರ ಸೂಚಿಸುವ ‘ಸೆಂಗೋಲ್’ನ ಇತಿಹಾಸವೇನು?

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಪಡೆಯಲು ವಂಚನೆ, ಭೂಕಬಳಿಕೆ ಮತ್ತು ಹಣ ದುರುಪಯೋಗದ ಆರೋಪದ ಮೇಲೆ ರಾಹುಲ್ ಮತ್ತು ಸೋನಿಯಾ ಗಾಂಧಿ ಮತ್ತು ಇತರ ಸಹಚರರ ವಿರುದ್ಧ ಸುಬ್ರಮಣಿಯನ್ ಸ್ವಾಮಿ 2012 ರಲ್ಲಿ ಪ್ರಕರಣ ದಾಖಲಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್