ಐವರು ಜೈಶ್ ಉಗ್ರರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್

ಅಪರಾಧಿಗಳು "ಜೈಶ್ ಸದಸ್ಯರು ಮಾತ್ರವಲ್ಲದೆ ಶಸ್ತ್ರಾಸ್ತ್ರ, ಲಾಜಿಸ್ಟಿಕ್ ಮತ್ತು ಸ್ಫೋಟಕಗಳನ್ನು ಒದಗಿಸುವ ಮೂಲಕ ಭಯೋತ್ಪಾದಕರು , ಜೈಶ್ ಸದಸ್ಯರಿಗೆ ಬೆಂಬಲ, ಆಶ್ರಯ ನೀಡುತ್ತಿದ್ದಾರೆ" ಎಂದು ನ್ಯಾಯಾಲಯ ಹೇಳಿದೆ.

ಐವರು ಜೈಶ್ ಉಗ್ರರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೆಹಲಿ ಕೋರ್ಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 28, 2022 | 9:59 PM

ದೆಹಲಿ: ದೇಶಾದ್ಯಂತ ಭಯೋತ್ಪಾದನಾ ಚಟುವಟಿಕೆಗಳಿಗೆ ಯುವಕರನ್ನು ನೇಮಿಸಿ ತರಬೇತಿ ನೀಡಿದ ಜೈಶ್-ಎ-ಮೊಹಮ್ಮದ್ (JeM) ನ ಐವರು ಭಯೋತ್ಪಾದಕರಿಗೆ ದೆಹಲಿ ನ್ಯಾಯಾಲಯ (Delhi Court) ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರ ಸಜ್ಜದ್ ಅಹ್ಮದ್ ಖಾನ್, ಬಿಲಾಲ್ ಅಹ್ಮದ್ ಮಿರ್, ಮುಜಾಫರ್ ಅಹ್ಮದ್ ಭಟ್, ಇಶ್ಫಾಕ್ ಅಹ್ಮದ್ ಭಟ್ ಮತ್ತು ಮೆಹರಾಜ್-ಉದ್-ದಿನ್ ಚೋಪಾನ್ ಗೆ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ತನ್ವೀರ್ ಅಹ್ಮದ್ ಗನಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನೂ ನ್ಯಾಯಾಧೀಶರು ವಿಧಿಸಿದ್ದಾರೆ.ಎಲ್ಲಾ ಅಪರಾಧಿಗಳು ಭಾರತದ ವಿರುದ್ಧ ಯುದ್ಧ ಮಾಡಲು ಪಿತೂರಿ ನಡೆಸುತ್ತಿದ್ದಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಅಪರಾಧಿಗಳು “ಜೈಶ್ ಸದಸ್ಯರು ಮಾತ್ರವಲ್ಲದೆ ಶಸ್ತ್ರಾಸ್ತ್ರ, ಲಾಜಿಸ್ಟಿಕ್ ಮತ್ತು ಸ್ಫೋಟಕಗಳನ್ನು ಒದಗಿಸುವ ಮೂಲಕ ಭಯೋತ್ಪಾದಕರು , ಜೈಶ್ ಸದಸ್ಯರಿಗೆ ಬೆಂಬಲ, ಆಶ್ರಯ ನೀಡುತ್ತಿದ್ದಾರೆ” ಎಂದು ಅದು ಹೇಳಿದೆ. “ಆರೋಪಿಗಳು ಜಮ್ಮು ಮತ್ತು ಕಾಶ್ಮೀರದ ಸ್ಥಳೀಯರನ್ನು ಉಗ್ರಗಾಮಿತ್ವಕ್ಕೆ ಹೋಗಲು ಪ್ರೇರೇಪಿಸುವಲ್ಲಿ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಹಣವನ್ನು ವ್ಯವಸ್ಥೆಗೊಳಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ್ದಕ್ಕಾಗಿ ಅವರೆಲ್ಲರೂ ಅಪರಾಧ u/s 120B IPC ಹಾಗೂ U/s 18 UA(P)ಆಕ್ಟ್‌ ಅಡಿಯಲ್ಲಿ ಅಪರಾಧಕ್ಕಾಗಿ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ನ್ಯಾಯಾಧೀಶರು ಹೇಳಿದರು. ಎನ್ಐಎ ಮಾರ್ಚ್ 2019 ರಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿತು.

ಗುರಿಗಳ ಸ್ಥಳಾನ್ವೇಷಣೆ, ಅಡಗುತಾಣಗಳ ವ್ಯವಸ್ಥೆ ಮತ್ತು ಭಯೋತ್ಪಾದಕರಿಗೆ ಬೆಂಬಲವನ್ನು ಒದಗಿಸಲು ಮತ್ತು ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಪಾಕಿಸ್ತಾನ ಮೂಲದ ಜೆಎಂ ಕಾರ್ಯಕರ್ತರು ಅಪರಾಧಿಗಳಿಗೆ ತರಬೇತಿ ನೀಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

Published On - 9:55 pm, Mon, 28 November 22

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ