Arvind Kejriwal: ಅಬಕಾರಿ ನೀತಿ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಣೆ

|

Updated on: Jun 19, 2024 | 5:05 PM

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕೇಜ್ರಿವಾಲ್‌ಗೆ ಮೇ 10 ರಂದು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿದ್ದು ಜೂನ್ 2 ರಂದು ಶರಣಾಗುವಂತೆ ಸೂಚಿಸಿತು. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಕೇಜ್ರಿವಾಲ್ ಜೂನ್ 2 ರಂದು ಶರಣಾಗಿದ್ದರು.

Arvind Kejriwal: ಅಬಕಾರಿ ನೀತಿ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್
Follow us on

ದೆಹಲಿ ಜೂನ್ 19: ಅಬಕಾರಿ ನೀತಿ (excise policy) ಸಂಬಂಧಿತ ಅಕ್ರಮ ಹಣ ವರ್ಗಾವಣೆ (money laundering case)ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal)  ಅವರ ನ್ಯಾಯಾಂಗ ಬಂಧನವನ್ನು ನಗರದ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ. ನ್ಯಾಯಾಲಯಕ್ಕೆ ಕೇಜ್ರಿವಾಲ್ ಅವರನ್ನು ವರ್ಚುವಲ್ ಆಗಿ ಹಾಜರುಪಡಿಸಿದ ನಂತರ ನ್ಯಾಯಾಲಯ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು.

ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲು ಜಾರಿ ನಿರ್ದೇಶನಾಲಯದ (ಇಡಿ) ಅರ್ಜಿಯನ್ನು ವಿರೋಧಿಸಿದ ಕೇಜ್ರಿವಾಲ್ ಅವರ ವಕೀಲರು, ಅವರ ಕಸ್ಟಡಿ ವಿಸ್ತರಣೆಯನ್ನು ಸಮರ್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ಸಲ್ಲಿಸಿದರು. ಮಾರ್ಚ್ 21 ರಂದು ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು, ಪ್ರಸ್ತುತ ಅವರನ್ನು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.  ಮೇ 10 ರಂದು ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿತ್ತು.

ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಕೇಜ್ರಿವಾಲ್‌ಗೆ ಮೇ 10 ರಂದು ಸುಪ್ರೀಂ ಕೋರ್ಟ್ 21 ದಿನಗಳ ಮಧ್ಯಂತರ ಜಾಮೀನು ನೀಡಿದ್ದು ಜೂನ್ 2 ರಂದು ಶರಣಾಗುವಂತೆ ಸೂಚಿಸಿತು. ಮಧ್ಯಂತರ ಜಾಮೀನು ಅವಧಿ ಮುಗಿದ ನಂತರ ಕೇಜ್ರಿವಾಲ್ ಜೂನ್ 2 ರಂದು ಶರಣಾಗಿದ್ದರು.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು ಜೂನ್ 2 ರಂದು ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಶರಣಾದರು. ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ಒಂದು ವಾರ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದಾಗ್ಯೂ, ಅವರಿಗೆ ಜಾಮೀನು ಮಂಜೂರು ಮಾಡಿಲ್ಲ
ವೈದ್ಯಕೀಯ ಕಾರಣಗಳಿಗಾಗಿ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ವಿಚಾರಣೆ ನಡೆಸವು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿತು.

ಇದನ್ನೂ ಓದಿ: ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ: ರೈಲು ಹಳಿಗಳ ಸುರಕ್ಷತೆಗಾಗಿ 18 ಸಾವಿರ ಲೊಕೊ ಪೈಲಟ್ ನೇಮಕಾತಿ ಮಾಡಲಿದೆ ರೈಲ್ವೆ

ಕೇಜ್ರಿವಾಲ್ ನಂತರ ವಿಚಾರಣಾ ನ್ಯಾಯಾಲಯಕ್ಕೆ ತೆರಳಿದರು ಮತ್ತು ವೈದ್ಯಕೀಯ ಕಾರಣಗಳಿಗಾಗಿ ಏಳು ದಿನಗಳ ಮಧ್ಯಂತರ ಜಾಮೀನು ಮತ್ತು ಸಾಮಾನ್ಯ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮುಂದೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದರು. ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಮಾಡಿದ ಅವರ ಮನವಿಯನ್ನು ವಿಚಾರಣಾ ನ್ಯಾಯಾಲಯವು ಜೂನ್ 5 ರಂದು ತಿರಸ್ಕರಿಸಿತು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಿಯಮಿತ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು ಪ್ರಸ್ತುತ ವಿಚಾರಣೆ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Wed, 19 June 24