Toolkit case: ವಕೀಲೆ ನಿಖಿತಾ ಜಾಕೋಬ್​ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​; ಪ್ರತಿಕ್ರಿಯಿಸಲು ಪೊಲೀಸರಿಗೆ ಸೂಚನೆ

Greta Thunberg Toolkit Case: ನಿಖಿತಾ ಜಾಕೋಬ್​ ಮತ್ತು ಶಂತನು ಮುಲುಕ್​ ನಿರೀಕ್ಷಣಾ ಜಾಮೀನು ನೀಡುವಂತೆ ದೆಹಲಿ ಪಟಿಯಾಲಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿತ್ತು. ಆದರೆ ಅದನ್ನು ಮಾರ್ಚ್​ 9ಕ್ಕೆ ಮುಂದೂಡಿದೆ.

Toolkit case: ವಕೀಲೆ ನಿಖಿತಾ ಜಾಕೋಬ್​ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್​; ಪ್ರತಿಕ್ರಿಯಿಸಲು ಪೊಲೀಸರಿಗೆ ಸೂಚನೆ
ನಿಖಿತಾ ಜಾಕೋಬ್​
Follow us
Lakshmi Hegde
|

Updated on:Mar 02, 2021 | 11:48 AM

ದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ದೆಹಲಿ ಚಲೋ ಚಳವಳಿಗೆ ಸಂಬಂಧಪಟ್ಟ ಟೂಲ್​ಕಿಟ್ ಪ್ರಕರಣದಲ್ಲಿ ಬಂಧನದಿಂದ ಪಾರಾಗಲು ವಕೀಲೆ ನಿಖಿತಾ ಜಾಕೋಬ್​ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಪಟಿಯಾಲಾ ಕೋರ್ಟ್ ಮಾರ್ಚ್​ 9ಕ್ಕೆ ಮುಂದೂಡಿದೆ. ಈ ಟೂಲ್​​ಕಿಟ್​ನ್ನು ತಯಾರಿಸಿದ್ದು ಬೆಂಗಳೂರು ಮೂಲದ ದಿಶಾ ರವಿ ಎನ್ನಲಾಗಿದ್ದು, ಅವರನ್ನು ಅದಾಗಲೇ ದೆಹಲಿ ಪೊಲೀಸರು ಬೆಂಗಳೂರಿಗೆ ಬಂದು ಬಂಧಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಹೋರಾಟಗಾರ್ತಿ, ವಕೀಲೆ ನಿಖಿತಾ ಜಾಕೋಬ್​ ಮತ್ತು ಪುಣೆ ಮೂಲದ ಇಂಜಿನಿಯರ್​ ಶಂತನು ಮುಲುಕ್​ಗೂ ಜಾಮೀನು ರಹಿತ ಅರೆಸ್ಟ್ ವಾರೆಂಟ್​ ಜಾರಿಯಾಗಿದೆ. ಈ ಅರೆಸ್ಟ್​ ವಾರೆಂಟ್​ಗೆ ನಿಖಿತಾ ಬಾಂಬೆ ಹೈಕೋರ್ಟ್​ನಿಂದ ನಾಲ್ಕು ವಾರಗಳ ಮಧ್ಯಂತರ ರಕ್ಷಣೆ ಪಡೆದಿದ್ದರು. ಆದರೆ ದೆಹಲಿ ಪೊಲೀಸರು ಜಾಕೋಬ್​ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರೈತ ಚಳವಳಿಗೆ ಸಂಬಂಧಪಟ್ಟ ಟೂಲ್​​ಕಿಟ್​ನ್ನು ಎಡಿಟ್​ ಮಾಡಲು ನಿಖಿತಾ ಜಾಕೋಬ್​ ಸಹಾಯ ಮಾಡಿದ್ದಾರೆ. ಅವರಿಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದೂ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಈ ಮಧ್ಯೆ ನಿಖಿತಾ ಜಾಕೋಬ್​ ಮತ್ತು ಶಂತನು ಮುಲುಕ್​ ನಿರೀಕ್ಷಣಾ ಜಾಮೀನು ನೀಡುವಂತೆ ದೆಹಲಿ ಪಟಿಯಾಲಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿತ್ತು. ಆದರೆ ಅದನ್ನು ಮಾರ್ಚ್​ 9ಕ್ಕೆ ಮುಂದೂಡಿದ್ದು, ಟೂಲ್​ಕಿಟ್​​ ಪ್ರಕರಣದಲ್ಲಿ ನಿಖಿತಾ ಜಾಕೋಬ್​ ಮತ್ತು ಶಂತನು ಮುಲುಕ್​​ರ ನಿರೀಕ್ಷಣಾ ಜಾಮೀನು ಮನವಿಗೆ ಪ್ರತಿಕ್ರಿಯೆ ನೀಡಲು ದೆಹಲಿ ಪೊಲೀಸರಿಗೆ ಅವಕಾಶ ನೀಡಿದೆ.

ಏನಿದು ಟೂಲ್​ ಕಿಟ್​ ಪ್ರಕರಣ? ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಬಂಧಿಸಿ ಟೂಲ್​ಕಿಟ್​ ಒಂದನ್ನು ಗ್ರೇಟಾ ಟ್ವಿಟ್​ರ್​ನಲ್ಲಿ ಹಂಚಿಕೊಂಡಿದ್ದರು. ಟೂಲ್​​ಕಿಟ್​ ಎಂದರೆ, ಒಂದು ಪ್ರತಿಭಟನೆ ಅಥವಾ ಒಂದು ಕಾರ್ಯಕ್ರಮದ ಸಂಪೂರ್ಣ ರೂಪುರೇಷೆ ಹೇಗೆ ನಡೆಯಬೇಕು ಎನ್ನುವ ಮಾಹಿತಿ ಇದರಲ್ಲಿ ಇರುತ್ತದೆ. ಗ್ರೇಟಾ ಹಂಚಿಕೊಂಡಿದ್ದ ಟೂಲ್​ಕಿಟ್​ನಲ್ಲಿ , ಪ್ರತಿಭಟನೆಯಲ್ಲಿ ರೈತರು ಭಾಗವಹಿಸಬೇಕು, ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಅದಾನಿ-ಅಂಬಾನಿಯಂಥ ದೊಡ್ಡ ದೊಡ್ಡ ಉದ್ಯಮಿಗಳ ಕಚೇರಿ ಎದುರು ಪ್ರತಿಭಟನೆ ಮಾಡಬೇಕು, ಗಣರಾಜ್ಯೋತ್ಸವ ದಿನದಂದು ರೈತರು ಟ್ರ್ಯಾಕ್ಟರ್​ ಜಾಥಾದಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು ಎನ್ನುವುದಕ್ಕೆ ಸ್ಫೂರ್ತಿದಾಯಕವಾಗಿತ್ತು ಈ ಟೂಲ್​ಕಿಟ್​. ಆದರೆ, ಈ ಪ್ರತಿಭಟನೆ ಹಿಂಸಾಚಾರದೊಂದಿಗೆ ಅಂತ್ಯವಾಗಿತ್ತು. ಗ್ರೇಟಾ ಹಂಚಿಕೊಂಡ ಟೂಲ್​ಕಿಟ್​ ಅನ್ನು ದಿಶಾ ಪ್ರಸಾರ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ, ದೆಹಲಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಹವಾಮಾನ ಬದಲಾವಣೆ ಕುರಿತು 2018ರಲ್ಲಿ ದೊಡ್ಡ ಹೋರಾಟವನ್ನು ಹುಟ್ಟು ಹಾಕಿತ್ತು ಫ್ರೈಡೇ ಫಾರ್ ಫ್ಯೂಚರ್ ಸಂಸ್ಥೆ. ದಿಶಾ ಈ ಸಂಸ್ಥೆಯ ಸಹ ಸಂಸ್ಥಾಪಕಿ. ಹವಾಮಾನ ವೈಪರಿತ್ಯದ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಅಂದು ಬೆಂಗಳೂರಲ್ಲಿ ಚಾಲನೆ ನೀಡಿದ್ದು ಇದೇ ಗ್ರೇಟಾ ಥನ್​ಬರ್ಗ್. ಹೀಗಾಗಿ, ಇಬ್ಬರ ನಡುವೆ ನಿಕಟ ಸಂಪರ್ಕವಿದೆ. ಹೀಗಾಗಿ, ಗ್ರೇಟಾ ಹಂಚಿಕೊಂಡಿದ್ದ ಟೂಲ್​​ ಕಿಟ್​ ಅನ್ನು ದಿಶಾ ಎಲ್ಲರಿಗೂ ಪ್ರಸಾರ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Disha Ravi | ಗ್ರೇಟಾ ಥನ್​ಬರ್ಗ್​ ಪೋಸ್ಟ್ ಮಾಡಿದ್ದ ಟೂಲ್​ಕಿಟ್​ನಲ್ಲಿ ಏನಿತ್ತು? ಅದನ್ನು ಹಂಚಿದ್ದ ದಿಶಾ ರವಿ ಯಾರು?

Greta Thunberg Toolkit | ಗ್ರೇಟಾ ಥನ್​ಬರ್ಗ್ ಟೂಲ್​ಕಿಟ್ ಪ್ರಕರಣ; ವಕೀಲೆ ನಿಖಿತಾ ಜಾಕೋಬ್​ಗೆ ಜಾಮೀನುರಹಿತ ವಾರೆಂಟ್ ಜಾರಿಗೊಳಿಸಿದ ಕೋರ್ಟ್

Published On - 11:44 am, Tue, 2 March 21

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು