ಎಎಪಿ ಸಂಸದ ಸಂಜಯ್ ಸಿಂಗ್ ರಿಮಾಂಡ್‌ಗಾಗಿ ಇಡಿ ಮನವಿ; ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

Sanjay Singh: ಎಎಪಿಯ ಸಂಜಯ್ ಸಿಂಗ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸುತ್ತದೆ. ನಾವು ಈ ರೀತಿಯ ಚಟುವಟಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಇಡೀ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ತತ್ವಗಳು ಹೈಜಾಕ್ ಮಾಡಲಾಗಿದೆ. ಅವರು ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ಈ ರೀತಿಯ ಬೆದರಿಕೆ ಹಾಕುತ್ತಿದ್ದಾರೆ

ಎಎಪಿ ಸಂಸದ ಸಂಜಯ್ ಸಿಂಗ್ ರಿಮಾಂಡ್‌ಗಾಗಿ ಇಡಿ ಮನವಿ; ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ
ಸಂಜಯ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: Oct 05, 2023 | 7:01 PM

ದೆಹಲಿ ಅಕ್ಟೋಬರ್ 05: ಆಮ್ ಆದ್ಮಿ ಪಕ್ಷದ ನಾಯಕ (Aam Aadmi Party) ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Singh) ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು (ಗುರುವಾರ) ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸಿಂಗ್ ಅವರನ್ನು 10 ದಿನಗಳ ಕಸ್ಟಡಿಗೆ ಕೋರಿ ಇಡಿ (ED) ಸಲ್ಲಿಸಿದ ಮನವಿಯ ಕುರಿತು ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಸಂಜೆ ಬಂಧಿಸಿದೆ.

ಸಿಂಗ್ ಬಂಧನದ ಹಿಂದೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೈಜಾಕ್ ಮಾಡಲಾಗಿದೆ: ಕೆ ಸಿ ವೇಣುಗೋಪಾಲ್

ಎಎಪಿಯ ಸಂಜಯ್ ಸಿಂಗ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸುತ್ತದೆ. ನಾವು ಈ ರೀತಿಯ ಚಟುವಟಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಇಡೀ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ತತ್ವಗಳು ಹೈಜಾಕ್ ಮಾಡಲಾಗಿದೆ. ಅವರು ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ಈ ರೀತಿಯ ಬೆದರಿಕೆ ಹಾಕುತ್ತಿದ್ದಾರೆ. ರಾಜ್ಯ ಅಥವಾ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಬೇಡಿ ಎಂದಿದ್ದಾರೆ.

ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಚಿನ್ ಪೈಲಟ್

ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಆಪ್ ನಾಯಕ ಸಂಜಯ್ ಸಿಂಗ್ ಅವರನ್ನು ಹೇಗೆ ಬಂಧಿಸಲಾಯಿತು ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕ್ಲಿಕ್ ಸಂಸ್ಥಾಪಕ-ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಎಎಪಿ ರಾಜ್ಯಸಭಾ ಸದಸ್ಯ ಸಿಂಗ್ ಅವರನ್ನು ತನಿಖಾ ಸಂಸ್ಥೆಗಳು ಬಂಧಿಸಿರುವುದನ್ನು ಉಲ್ಲೇಖಿಸಿ ಪೈಲಟ್ ಟೋಂಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನಿನ್ನೆ ನಡೆದ ಘಟನೆ ಮತ್ತು ಕೇಂದ್ರ ಸರ್ಕಾರವು ತನ್ನ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಈಗ ಎಲ್ಲರಿಗೂ ತಿಳಿದಿದೆ.

ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆ ನಡೆಸಿದ ಶೇ 90-95ರಷ್ಟು ದಾಳಿಗಳು ಮತ್ತು ಕ್ರಮಗಳು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವವರ ವಿರುದ್ಧ, ರಾಜಕೀಯದಲ್ಲಿ ಅವರ ವಿರೋಧಿಗಳ ವಿರುದ್ಧ ನಡೆಯುತ್ತಿದೆ ಎಂದು ಹೇಳಿದ್ದಾರೆ. “ದೇಶ ಈ ಸಂಪೂರ್ಣ ಸಂಚಿಕೆಯನ್ನು ವೀಕ್ಷಿಸುತ್ತಿದೆ. ಇದು ಸರಿಯಲ್ಲ ಎಂದು ನಾನು ನಂಬುತ್ತೇನೆ” ಎಂದು ಪೈಲಟ್ ಹೇಳಿದರು.

ಎಎಪಿ ನಾಯಕನ ಮೇಲಿನ ಎಲ್ಲಾ ಪ್ರಕರಣಗಳು ಸುಳ್ಳು: ಅರವಿಂದ ಕೇಜ್ರಿವಾಲ್

ಏಜೆನ್ಸಿಗಳು ತನಿಖೆ ನಡೆಸುತ್ತವೆ.ಆದರೆ ತನಿಖೆಯಿಂದ ಏನೂ ಹೊರಬರುವುದಿಲ್ಲ ಎಂದು ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ಇದು ಸಮಯ ವ್ಯರ್ಥ. ಇಂದು ಸುಪ್ರೀಂಕೋರ್ಟ್ ಪ್ರಶ್ನೆಗಳನ್ನು ಕೇಳುತ್ತಿರುವ ರೀತಿ (ಮನೀಶ್ ಸಿಸೋಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ) ಇದು ಸುಳ್ಳು ಪ್ರಕರಣ ಎಂದು ತೋರಿಸುತ್ತದೆ, ”ಎಂದು ಕೇಜ್ರಿವಾಲ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ:ಮದ್ಯ ನೀತಿ ಪ್ರಕರಣದಲ್ಲಿ ಎಎಪಿಯನ್ನು ಆರೋಪಿ ಮಾಡಬೇಕೇ? ಕಾನೂನು ಸಲಹೆ ಪಡೆಯಲಿದೆ ತನಿಖಾ ಸಂಸ್ಥೆ

ಎಎಪಿ ಸಂಸದ ಲಂಚ ಪಡೆದಿದ್ದಾರೆ ಎಂದ ಬಿಜೆಪಿ

ಇಡಿ ತನಿಖೆಯ ಪ್ರಕಾರ ಸಜಯ್ ಸಿಂಗ್ ದಿನೇಶ್ ಅರೋರಾ ಮತ್ತು ಅಮಿತ್ ಅರೋರಾ ಅವರನ್ನು ಭೇಟಿಯಾಗುತ್ತಿದ್ದರು .ಅವರು ಸಂಜಯ್ ಸಿಂಗ್‌ಗೆ ₹ 2 ಕೋಟಿಯಿಂದ ₹ 3 ಕೋಟಿ ನೀಡಿದ್ದರ ಎಎಪಿ ನಾಯಕ ಮನೀಶ್ ಸಿಸೋಡಿಯಾ ಕೂಡ ಮದ್ಯದ ನೀತಿಯ ಅಕ್ರಮಗಳ ವಿಷಯದಲ್ಲಿ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯವು ಮುಂದಿನ ವಾರ ತನ್ನ ಆದೇಶವನ್ನು ಪ್ರಕಟಿಸುತ್ತದೆ ಎಂದು ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ