AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ಇಂದು ತೀರ್ಪು ಪ್ರಕಟ

MJ Akbar Defamation Case Against Priya Ramani | ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದೆ.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ಇಂದು ತೀರ್ಪು ಪ್ರಕಟ
ಎಂ.ಜೆ.ಅಕ್ಬರ್ ಮತ್ತು ಪ್ರಿಯಾ ರಮಣಿ
ಆಯೇಷಾ ಬಾನು
ಆಯೇಷಾ ಬಾನು|

Updated on: Feb 10, 2021 | 7:15 AM

Share

ದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದೆ. ACMM ಕೋಟ್​​ ಜಡ್ಜ್​ ನ್ಯಾ.ರವೀಂದ್ರ ಕುಮಾರ್ ಪಾಂಡೆ ಬುಧವಾರ ಮಧ್ಯಾಹ್ನ 2.30ಕ್ಕೆ ಓಪನ್ ಕೋರ್ಟ್​ನಲ್ಲಿ ಎಲ್ಲರ ಸಂಮುಖದಲ್ಲಿ ತೀರ್ಪು ಪ್ರಕಟಿಸಲಿದ್ದಾರೆ. ಎರಡೂ ಕಕ್ಷಿದಾರರು ಈ ವಿಷಯದಲ್ಲಿ ಅಂತಿಮ ವಾದಗಳನ್ನು ಮುಕ್ತಾಯಗೊಳಿಸಿದ ನಂತರ ನ್ಯಾಯಾಲಯವು ಇತ್ತೀಚೆಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅದರ ತೀರ್ಪು ಹೊರ ಬೀಳಲಿದೆ.

ತನ್ನ ಪ್ರಕರಣವನ್ನು ಸಮರ್ಥಿಸಿಕೊಂಡ ರಮಣಿಯ ವಕೀಲ ಮತ್ತು ಹಿರಿಯ ವಕೀಲ ರೆಬೆಕಾ ಜಾನ್ ತನ್ನ ಕಕ್ಷಿದಾರರನ್ನು ಖುಲಾಸೆಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ, ಎಂ.ಜೆ.ಅಕ್ಬರ್ ಅವರ ವಕೀಲ ಮತ್ತು ಹಿರಿಯ ವಕೀಲೆ ಗೀತಾ ಲುಥ್ರಾ ಅವರು ರಮಣಿ ಅವರ ಆರೋಪದಿಂದಾಗಿ ಅವರ ಭವಿಷ್ಯಕ್ಕೆ ಕಳಂಕವಾಗಿದೆ ಎಂದು ಒತ್ತಿ ಹೇಳಿದರು.

ರಮಣಿ ಅವರ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಮತ್ತು ನ್ಯಾಯಾಲಯದ ನಿರ್ದೇಶನದ ಮೇರೆಗೆ ಅದನ್ನು ಸಕ್ರಿಯಗೊಳಿಸಬಹುದು ಎಂದು ಹಿರಿಯ ವಕೀಲ ಜಾನ್ ನ್ಯಾಯಾಲಯಕ್ಕೆ ತಿಳಿಸಿದರು.

ಎಂ.ಜೆ.ಅಕ್ಬರ್ ವಿರುದ್ಧ ಪ್ರಿಯಾ ರಮಣಿ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ನಂತರದ ದಿನಗಳಲ್ಲಿ ಅಕ್ಬರ್ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ರಾಜಿ ಸಾಧ್ಯತೆ ಪರಿಶೀಲಿಸಲು ಕೋರ್ಟ್​ ಸೂಚನೆ

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?