ದೆಹಲಿ: ಮಗಳಿಗೆ ತಿಳಿಯದಂತೆ ಪಕ್ಕದಲ್ಲೇ ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರಿಗೆ ಕರೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಆಕೆಯ ಶವ ನೆಲದ ಮೇಲೆ ಬಿದ್ದಿತ್ತು. ಅದೇ ಕೋಣೆಯಲ್ಲಿ ಅವರ ಮಗಳು ಕೂಡ ಮಲಗಿದ್ದಳು. ಪೊಲೀಸರಿಗೆ ಅನುಮಾನ ಬಂದು ತನಿಖೆಯನ್ನು ಚುರುಕುಗೊಳಿಸಿದಾಗ ತಾನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಆತನಿಗೆ ಬೇರೊಬ್ಬ ಮಹಿಳೆ ಜತೆ ಸಂಬಂಧವಿತ್ತು ಹಾಗಾಗಿ ತನ್ನ ಸಹೋದರಿಯನ್ನು ಕೊಲೆ ಮಾಡಿದ್ದಾನೆಂದು ಮೃತ ಮಹಿಳೆಯ ಸಹೋದರ ಬಾವನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿ: ಮಗಳಿಗೆ ತಿಳಿಯದಂತೆ ಪಕ್ಕದಲ್ಲೇ ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ
ಕೊಲೆಯಾದ ಮಹಿಳೆ ಮತ್ತವರ ಪತಿ

Updated on: Oct 27, 2025 | 8:04 AM

ನವದೆಹಲಿ, ಅಕ್ಟೋಬರ್ 27: ವ್ಯಕ್ತಿಯೊಬ್ಬ ಮಗಳಿಗೆ ತಿಳಿಯದಂತೆ ಆಕೆಯ ಪಕ್ಕದಲ್ಲೇ ಮಲಗಿದ್ದ ಪತ್ನಿಯನ್ನು ಕೊಲೆ(Murder) ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರಿಗೆ ಕರೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಘಟನೆ ಕೇಶವ ಪುರಂನಲ್ಲಿ ನಡೆದಿದೆ. ದಿನೇಶ್ ಶರ್ಮಾ ಎಂಬ ವ್ಯಕ್ತಿ ತನ್ನ ಪತ್ನಿ ಸುಷ್ಮಾ ಶರ್ಮಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ.ನಂತರ ಆಕೆ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಲಾಗಿದೆ.

ಪೊಲೀಸರು ಮನೆಗೆ ತಲುಪಿದಾಗ, 40 ವರ್ಷದ ಮಹಿಳೆಯ ಶವ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ ಮತ್ತು ದಂಪತಿಯ 11 ವರ್ಷದ ಮಗಳು ಕೂಡ ಅದೇ ಕೋಣೆಯಲ್ಲಿದ್ದಳು. ಆದರೆ ಆಕೆ ಹಾಸಿಗೆಯ ಮೇಲೆ ಮಲಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ನಡೆಸಿದಾಗ, ಆ ವ್ಯಕ್ತಿ ತನ್ನ ಹೆಂಡತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ಆರೋಪಿ ಪತಿ ದೇವಸ್ಥಾನದಲ್ಲಿ ಅರ್ಚಕನಾಗಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರು ಮಹಿಳೆಯ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗಾಗಿ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ, ಬದಲಾಗಿ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.

ಮತ್ತಷ್ಟು ಓದಿ: 4 ಮಕ್ಕಳ ತಾಯಿ ಸಲ್ಮಾ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದುಷ್ಕರ್ಮಿಗಳ ಕೊಲೆ ಸಂಚು ಹೇಗಿತ್ತು ಗೊತ್ತಾ?

ರಾತ್ರಿ 12 ಅಥವಾ 1 ಗಂಟೆ ಸುಮಾರಿಗೆ ಆಕೆಯ ಕೊಲೆಯಾಗಿದೆ. ಆದರೆ ಪೊಲೀಸರು ಇಂದು ಬೆಳಗ್ಗೆ 6 ಗಂಟೆಗೆ ನಮಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮೃತ ಮಹಿಳೆಯ ಸಹೋದರ ಅಶೋಕ್ ಕುಮಾರ್ ಹೇಳಿದ್ದಾರೆ.

ಆರೋಪಿ ಪತಿಗೆ ವಿವಾಹೇತರ ಸಂಬಂಧವಿತ್ತು ಎಂದು ಕುಟುಂಬದವರು ಆರೋಪಿಸಿದ್ದು, ಅದೇ ಕೊಲೆಗೆ ಕಾರಣ ಎಂದು ಹೇಳಿದ್ದಾರೆ.

ಊಟದ ವಿಷಯಕ್ಕೆ ದಂಪತಿ ನಡುವೆ ಮನೆಯಲ್ಲಿ ಜಗಳವಾಗಿತ್ತು ಮತ್ತು ನಮ್ಮ ಬಾವ ನಮ್ಮ ಸಹೋದರಿಯನ್ನು ಕೊಂದ್ದಾರೆ ಎಂದು ಮೃತಳ ಸಹೋದರ ಹೇಳಿದ್ದಾಗಿ ಪೊಲೀಸರು ಹೇಳುತ್ತಾರೆ. ಆದರೆ ನಿಜವಾದ ಕಾರಣ ಬಾವನ ವಿವಾಹೇತರ ಸಂಬಂಧ. ಅಕ್ಕ ವರ್ಷಗಳಿಂದ ಈ ಬಗ್ಗೆ ಕುಟುಂಬದವರ ಬಳಿ ಅಳಲುತೋಡಿಕೊಂಡಿದ್ದಾಗಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Follow Us