ದೆಹಲಿಯಲ್ಲಿ ಮರ್ಯಾದಾ ಹತ್ಯೆ; ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ

ತಮ್ಮ ಜಾತಿಯವನನ್ನು ಬಿಟ್ಟು ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ತಂದೆಯೇ ಮಗಳನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈ ಮರ್ಯಾದಾ ಹತ್ಯೆಗೆ ದೆಹಲಿ ಬೆಚ್ಚಿಬಿದ್ದಿದೆ.

ದೆಹಲಿಯಲ್ಲಿ ಮರ್ಯಾದಾ ಹತ್ಯೆ; ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jun 17, 2024 | 7:40 PM

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಮಗಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಬಳಿಕ ಮಗಳ ಶವವನ್ನು ಜಮೀನಿನಲ್ಲಿ ಬಿಟ್ಟು ಹೋಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ (Delhi Crime News) ನಡೆದಿರುವ ಈ ಆಘಾತಕಾರಿ ಘಟನೆ (Shocking News) ರೋಹಿಣಿಯ ಕಂಝವಾಲಾ ಪ್ರದೇಶದಲ್ಲಿ ನಡೆದಿದೆ. ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದೇ ಈ ಭೀಕರ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. 46 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ಮಹಿಳೆಯ ಶವವು ರಕ್ತದ ಮಡುವಿನಲ್ಲಿ ಬಿದ್ದಿದ್ದು, ದೇಹದ ಮೇಲೆ ಸಾಕಷ್ಟು ಬಾರಿ ಇರಿದಿರುವ ಗಾಯಗಳಾಗಿತ್ತು. ಕಾಂಝಾವಾಲಾದ ಚಂದ್‌ಪುರ ಗ್ರಾಮದ ಕೃಷಿಭೂಮಿಯಲ್ಲಿ ಶವ ಪತ್ತೆಯಾಗಿತ್ತು. ರೋಹಿಣಿ ಉಪ ಪೊಲೀಸ್ ಆಯುಕ್ತ ಗುರಿಕ್ಬಾಲ್ ಸಿಂಗ್ ಸಿಧು ಅವರು 46 ವರ್ಷದ ಆರೋಪಿಯ ಬಂಧನವನ್ನು ಖಚಿತಪಡಿಸಿದ್ದಾರೆ. ಭಾನುವಾರ ರಾತ್ರಿ 8:53ಕ್ಕೆ ಈ ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ: Video Viral: ನಡುರಸ್ತೆಯಲ್ಲೇ ಯುವತಿಯ ವಿಚಿತ್ರ ಡ್ಯಾನ್ಸ್ ;ವಿಡಿಯೋ ವೈರಲ್​​

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡವು ಮಹಿಳೆಯ ಕುತ್ತಿಗೆ ಮತ್ತು ಹೊಟ್ಟೆಯಲ್ಲಿ ಆಳವಾದ ಗಾಯಗಳಾಗಿದೆ ಎಂದು ಸಿಧು ಹೇಳಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಅನೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗಿದೆ ಎಂದಿದ್ದಾರೆ.

ಅಪರಾಧ ನಡೆದಿದ್ದು ಹೇಗೆ?:

ಪೊಲೀಸರ ಪ್ರಕಾರ, ಆರೋಪಿ ತಂದೆ ಪ್ರೇಮ್ ನಗರದಲ್ಲಿರುವ ಅವರ ಮನೆಗೆ ಹೋಗಲು ಕ್ಯಾಬ್ ಬಾಡಿಗೆಗೆ ಪಡೆದಿದ್ದನು. ಆದರೆ ದಾರಿಯಲ್ಲಿ ಆಕೆಯ ಮದುವೆಯ ಬಗ್ಗೆ ಮಗಳೊಂದಿಗೆ ಜಗಳವಾಡಿದನು. ತಮ್ಮನ್ನು ಕಂಜ್ವಾಲಾದಲ್ಲಿ ಬಿಡುವಂತೆ ಚಾಲಕನಿಗೆ ಸೂಚಿಸಿದರು. ಆಗ ಅವರು ಅವಳನ್ನು ಜಮೀನಿಗೆ ಕರೆದೊಯ್ದು, ಕತ್ತು ಸೀಳಿ ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Viral News: 80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ, ಅಪರೂಪದ ಲವ್ ಸ್ಟೋರಿ 

ಈ ಕುಟುಂಬ ಬಿಹಾರದ ಮುಜಾಫರ್‌ಪುರ ಮೂಲದವರು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಮುಜಾಫರ್‌ಪುರದಲ್ಲಿ ತನ್ನ ಮಗಳು ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಆತನನ್ನೇ ಗುಟ್ಟಾಗಿ ಮದುವೆಯಾಗಿದ್ದಳು. ಈ ಮೂಲಕ ಕುಟುಂಬದ ಹೆಸರಿಗೆ ಕಳಂಕ ತಂದಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ