AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ, ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ.

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳಿಂದ ಮನಬಂದಂತೆ ಗುಂಡಿನ ದಾಳಿ
ದೆಹಲಿ ಅಪಾರ್ಟ್​ಮೆಂಟ್​ನಲ್ಲಿ ಗುಂಡಿನ ದಾಳಿ
ನಯನಾ ರಾಜೀವ್
|

Updated on: Apr 24, 2023 | 9:29 AM

Share

ದೆಹಲಿಯ ಅಪಾರ್ಟ್​ಮೆಂಟ್​ನಲ್ಲಿ ಇಬ್ಬರು ಮುಸುಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ, ಆಘಾತಕಾರಿ ಘಟನೆಯೊಂದರಲ್ಲಿ, ಇಬ್ಬರು ಮುಸುಕುಧಾರಿಗಳು ಆಗ್ನೇಯ ದೆಹಲಿಯ ಸಿದ್ಧಾರ್ಥ್ ನಗರದಲ್ಲಿನ ಅಪಾರ್ಟ್‌ಮೆಂಟ್‌ನ ಬಾಗಿಲುಗಳಿಗೆ ಭಾನುವಾರ ಗುಂಡು ಹಾರಿಸಿದ್ದಾರೆ. ಮೊದಲ ಮಹಡಿಯ ಅಪಾರ್ಟ್‌ಮೆಂಟ್‌ನ ಬಾಗಿಲಿಗೆ ಎರಡು ಬಾರಿ ಗುಂಡು ಹಾರಿಸಿದ ಆರೋಪಿಗಳು ನೆಲ ಅಂತಸ್ತಿನ ಕಡೆಗೆ ಪರಾರಿಯಾಗಿದ್ದರು.

ಮುಸುಕುಧಾರಿಗಳು ಪರಾರಿಯಾಗುವ ಮೊದಲು ನೆಲ ಮಹಡಿಯಲ್ಲಿರುವ ಮತ್ತೊಂದು ಅಪಾರ್ಟ್‌ಮೆಂಟ್‌ನ ಕಿಟಕಿಯ ಮೇಲೆ ಮೂರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಮತ್ತಷ್ಟು ಓದಿ:  ಶಿವಮೊಗ್ಗ: ಹಿಂದೂ ಯುವಕನ ಬರ್ಬರ ಹತ್ಯೆ, ನಾಲ್ವರು ಹಂತಕರು ಅಂದರ್

ಮತ್ತೊಂದು ಘಟನೆಯಲ್ಲಿ ದೆಹಲಿಯ ರಾಜೇಂದರ್​ ನಗರದಲ್ಲಿ ವ್ಯಕ್ತಿಯೊಬ್ಬನನ್ನು ಇಬ್ಬರು ಯುವಕರು ಹೊಡೆದು ಹತ್ಯೆ ಮಾಡಿದ್ದಾರೆ.

ಮೃತರನ್ನು ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿ ಮನೀಷ್​ ಕುಮಾರ್ ಹಾಗೂ ಲಾಲ್​ಚಂದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ರಾತ್ರಿ 11.30ರ ಸುಮಾರಿಗೆ ಅಂಗಡಿ ಎದುರು ನಿಂತಿರುವಾಗ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ