Delhi Demolition Drive ಶಾಹೀನ್ ಬಾಗ್ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಸ್ಥಗಿತ; ತೆರವು ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್

ಶಾಹೀನ್ ಬಾಗ್‌ನ ಸ್ಥಳೀಯ ನಿವಾಸಿಗಳು ಸೋಮವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಮಾಡಲು ಬಂದ ಬುಲ್ಡೋಜರ್ ಎದುರು ನಿಂತು ಘೋಷಣೆಗಳನ್ನು ಕೂಗಿದರು...

Delhi Demolition Drive ಶಾಹೀನ್ ಬಾಗ್ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಸ್ಥಗಿತ; ತೆರವು ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್
ಶಾಹೀನ್ ಬಾಗ್ ಅತಿಕ್ರಮಣ ವಿರೋಧಿ ಕಾರ್ಯಾಚರಣೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 09, 2022 | 2:18 PM

ದೆಹಲಿ: ದೆಹಲಿ ಪೊಲೀಸರೊಂದಿಗೆ ನಾಗರಿಕ ಸಂಸ್ಥೆಯು ಸ್ಥಳಕ್ಕೆ ಆಗಮಿಸಿದ ಕೆಲವೇ ಗಂಟೆಗಳ ನಂತರ ಶಾಹೀನ್ ಬಾಗ್‌ನಲ್ಲಿ ( Shaheen Bagh) ಅತಿಕ್ರಮಣ ವಿರೋಧಿ ಕಾರ್ಯಾಚರಣೆಯನ್ನು (anti-encroachment drive)ಸೋಮವಾರ ಸ್ಥಗಿತಗೊಳಿಸಲಾಯಿತು. ಶಾಹೀನ್ ಬಾಗ್‌ನ ಸ್ಥಳೀಯ ನಿವಾಸಿಗಳು ಸೋಮವಾರ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಮಾಡಲು ಬಂದ ಬುಲ್ಡೋಜರ್ (bulldozer)ಎದುರು ನಿಂತು ಘೋಷಣೆಗಳನ್ನು ಕೂಗಿದರು. ಉದ್ದೇಶಿತ ಧ್ವಂಸ ಕಾರ್ಯಾಚರಣೆ ವಿರುದ್ಧ ಪ್ರತಿಭಟಿಸಲು ಜನರು ಇಲ್ಲಿ ಸೇರಿದ್ದಾರೆ ಎಂದು ಸ್ಥಳೀಯ ನಿವಾಸಿ ಯಾಸಿರ್ ಇಮಾಮ್ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.  ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಶಾಹೀನ್ ಬಾಗ್ ಬಳಿಯ ಕಾಳಿಂದಿ ಕುಂಜ್-ಜಾಮಿಯಾ ನಗರ ಪ್ರದೇಶದಲ್ಲಿ ಮತ್ತು ಶ್ರೀನಿವಾಸಪುರಿಯಲ್ಲಿ ಕಳೆದ ವಾರ ಶುಕ್ರವಾರದವರೆಗೆ ಸಾಕಷ್ಟು ಪೊಲೀಸ್ ಪಡೆಯ ಅಲಭ್ಯತೆಯಿಂದಾಗಿ ಅತಿಕ್ರಮಣ ವಿರೋಧಿ ಅಭಿಯಾನಗಳನ್ನು ರದ್ದುಗೊಳಿಸಲಾಗಿದೆ.ನಾಗರಿಕ ಸಂಸ್ಥೆಯ ಬುಲ್ಡೋಜರ್‌ಗಳು ಪ್ರದೇಶವನ್ನು ತೊರೆದ ನಂತರ ಶಾಹೀನ್ ಬಾಗ್‌ನಲ್ಲಿನ ಅತಿಕ್ರಮಣ ವಿರೋಧಿ ಅಭಿಯಾನವು ಸ್ಥಗಿತಗೊಂಡಿತು. ಅವರು ತಮ್ಮ ಧ್ವಂಸ ಕಾರ್ಯಾಚರಣೆ ಮುಗಿಸಿ ತೆರಳಿದ್ದಾರೆ ಎಂದು ಡಿಸಿಪಿ (ಆಗ್ನೇಯ) ಇಶಾ ಪಾಂಡೆ ಹೇಳಿದ್ದಾರೆ.

ಶಾಹೀನ್ ಬಾಗ್ ಧ್ವಂಸ ಕಾರ್ಯಾಚರಣೆ ವಿರುದ್ಧ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಪ್ರತಿಭಟನೆ

ಶಾಹೀನ್ ಬಾಗ್‌ನಲ್ಲಿ ಅತಿಕ್ರಮಣ ವಿರೋಧಿ ಅಭಿಯಾನವನ್ನು ಪ್ರತಿಭಟಿಸುವಲ್ಲಿ ಸ್ಥಳೀಯರೊಂದಿಗೆ ಸೇರಿಕೊಂಡ ಎಎಪಿ ಶಾಸಕ ಅಮಾನತುಲ್ಲಾ ಖಾನ್, ಜನರು ತನ್ನ ಮನವಿಯ ಮೇರೆಗೆ ಅತಿಕ್ರಮಣ ಮಾಡಿದ್ದ ಜಾಗಗಳನ್ನು ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ. “ಇಲ್ಲಿನ ಮಸೀದಿಯ ಹೊರಗಿರುವ ‘ವಾಝು ಖಾನಾ’ ಮತ್ತು ಶೌಚಾಲಯಗಳನ್ನು ಈ ಹಿಂದೆ ಪೊಲೀಸರ ಸಮ್ಮುಖದಲ್ಲಿ ತೆಗೆಯಲಾಗಿತ್ತು. ಯಾವುದೇ ಅತಿಕ್ರಮಣ ಇಲ್ಲದಿರುವಾಗ, ಅವರು ಇಲ್ಲಿಗೆ ಬಂದಿದ್ದೇಕೆ? ಬರೀ ರಾಜಕೀಯ ಮಾಡುವುದಕ್ಕಾಗಿಯೇ ಎಂದು ಖಾನ್ ಪ್ರಶ್ನಿಸಿದ್ದಾರೆ.

ಶಾಹೀನ್ ಬಾಗ್ ಧ್ವಂಸ ಕಾರ್ಯಚರಣೆ ವಿರುದ್ಧದ ಅರ್ಜಿಗಳ ವಿಚಾರಣೆ ಮಧ್ಯಾಹ್ನ 2 ಗಂಟೆಗೆ

ಶಾಹೀನ್ ಬಾಗ್‌ನಲ್ಲಿ ಅತಿಕ್ರಮಣ ವಿರೋಧಿ ಅಭಿಯಾನದ ವಿರುದ್ಧದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆ ನಡೆಸಲಿದೆ. ಉತ್ತರ ಎಂಸಿಡಿ ಕಳೆದ ತಿಂಗಳು ಜಹಾಂಗೀರ್‌ಪುರಿಯಲ್ಲಿ ಇದೇ ರೀತಿಯ ಕಾರ್ಯಾಚರಣೆಯನ್ನು ನಡೆಸಿತ್ತು. ದೆಹಲಿ ಹೈಕೋರ್ಟ್‌ನ ನಿರ್ದೇಶನದ ಅನುಸಾರವಾಗಿ ಜಹಾಂಗೀರ್‌ಪುರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ನಾಗರಿಕ ಸಂಸ್ಥೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:56 pm, Mon, 9 May 22

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್