AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ರೋಹಿಣಿಯಲ್ಲಿ ಡಿಟಿಸಿ ಎಲೆಕ್ಟ್ರಿಕ್ ಬಸ್​ ಪಲ್ಟಿ, ಮೂವರಿಗೆ ಗಾಯ

ದೆಹಲಿಯ ಕೆಎನ್ ಕಾಟ್ಜು ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಸೆಕ್ಟರ್ 15 ರಲ್ಲಿ ದೆಹಲಿ ಸಾರಿಗೆ ನಿಗಮದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ: ರೋಹಿಣಿಯಲ್ಲಿ ಡಿಟಿಸಿ ಎಲೆಕ್ಟ್ರಿಕ್ ಬಸ್​ ಪಲ್ಟಿ, ಮೂವರಿಗೆ ಗಾಯ
ಎಲೆಕ್ಟ್ರಿಕ್ ಬಸ್
ನಯನಾ ರಾಜೀವ್
|

Updated on: Nov 19, 2023 | 11:57 AM

Share

ದೆಹಲಿಯ ಕೆಎನ್ ಕಾಟ್ಜು ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಸೆಕ್ಟರ್ 15 ರಲ್ಲಿ ದೆಹಲಿ ಸಾರಿಗೆ ನಿಗಮದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಕೆಎನ್​ ಕಾಟ್ಜು ಮಾರ್ಗ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಲೆಕ್ಟ್ರಿಕ್​ ಬಸ್​ನ ಮುಂಭಾಗದ ಗಾಜು ಪುಡಿಪುಡಿಯಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಸ್​ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ. ನವೆಂಬರ್ 4 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ಡಿಟಿಸಿ ಬಸ್​ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇನ್ನೊಬ್ಬರು ಗಾಯಗೊಂಡಿದ್ದರು.

ಮತ್ತಷ್ಟು ಓದಿ: ರಾಜಸ್ಥಾನ: ಟ್ರಕ್​ಗೆ ಕಾರು ಡಿಕ್ಕಿ, ಐವರು ಪೊಲೀಸ್​ ಅಧಿಕಾರಿಗಳ ದುರ್ಮರಣ

ರೋಹಿಣಿಯ ಮದರ್ ಡಿವೈನ್ ಸ್ಕೂಲ್ ಬಳಿ ಅಪಘಾತ ಸಂಭವಿಸಿತ್ತು, ವರದಿಯ ಪ್ರಕಾರ, ಬಸ್​ ನಿಯಂತ್ರಣ ತಪ್ಪಿ ಕಾರಿ ಮತ್ತು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು, ನಂತರ ಬಸ್​ ಅನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!