Delhi Earthquake: ದೆಹಲಿಯಲ್ಲಿ ಮತ್ತೆ ಭೂಕಂಪ; 2.7ರಷ್ಟು ತೀವ್ರತೆ ದಾಖಲು

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬುಧವಾರ ಸಂಜೆ ಮತ್ತೆ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 2.7ರಷ್ಟು ದಾಖಲಾಗಿದೆ.

Delhi Earthquake: ದೆಹಲಿಯಲ್ಲಿ ಮತ್ತೆ ಭೂಕಂಪ; 2.7ರಷ್ಟು ತೀವ್ರತೆ ದಾಖಲು
ಭೂಮಿ ಕಂಪಿಸಿದ್ದರಿಂದ ಹೆದರಿ ಹೊರಗೋಡಿ ಬಂದ ಜನರುImage Credit source: PTI
Follow us
Ganapathi Sharma
|

Updated on:Mar 22, 2023 | 6:42 PM

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ (Delhi) ಬುಧವಾರ ಸಂಜೆ ಮತ್ತೆ ಭೂಕಂಪ (Earthquake) ಸಂಭವಿಸಿದೆ. ಸಂಜೆ ಸುಮಾರು 4.42ಕ್ಕೆ ಭೂಕಂಪನ ಅನುಭವಕ್ಕೆ ಬಂದಿದ್ದು, ಜನರು ಮನೆ, ಕಚೇರಿಗಳಿಂದ ಆತಂಕದಿಂದ ಹೊರಗೋಡಿ ಬಂದಿದ್ದಾರೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 2.7ರಷ್ಟು ದಾಖಲಾಗಿದೆ. ಮಂಗಳವಾರ ರಾತ್ರಿ 10.20 ರ ಸುಮಾರಿಗೆ ದೆಹಲಿ ಹಾಗೂ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ಭೂಕಂಪ ಸಂಭವಿಸಿತ್ತು. ಸುಮಾರು 6.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅದೃಷ್ಟವಶಾತ್ ಸಾವು-ನೋವು ಸಂಭವಿಸಿರಲಿಲ್ಲ. ಪ್ರಬಲ ಕಂಪನದಿಂದಾಗಿ ದೆಹಲಿಯ ಶಕರ್‌ಪುರ ಮತ್ತು ಮೆಟ್ರೋ ಪಿಲ್ಲರ್ ನಂ. 51 ರ ಮುಂಭಾಗದಲ್ಲಿರುವ ಕಟ್ಟಡವು ಬಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಉತ್ತರ ಪ್ರದೇಶದ ಗಾಜಿಯಾಬಾದ್, ವಸುಂಧರಾ ಸೇರಿದಂತೆ ಹಲವು ಕಡೆಗಳಲ್ಲಿಯೂ ಭೂಮಿ ಕಂಪಿಸಿತ್ತು. ಒಂದು ನಿಮಿಷಕ್ಕೂ ಹೆಚ್ಚು ಸಮಯ ಭೂಮಿ ಕಂಪಿಸಿದ ಅನುಭವವಾಗಿತ್ತು.

ಅಫ್ಘಾನಿಸ್ತಾನದಲ್ಲಿ ಸಂಜೆ  ಭೂಕಂಪ ಸಂಭವಿಸಿತ್ತು. ಅದಾದ ನಂತರ ರಾತ್ರಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿತ್ತು. ತುರ್ಕಮೆನಿಸ್ತಾನ, ಕಜಕಿಸ್ತಾನ, ಪಾಕಿಸ್ತಾನ, ತಜಕಿಸ್ತಾನ, ಉಜ್ಬೇಕಿಸ್ತಾನ, ಚೀನಾ, ಮತ್ತು ಕಿರ್ಗಿಸ್ತಾನ್​ ದೇಶಗಳಲ್ಲಿಯೂ ಭೂಕಂಪ ಸಂಭವಿಸಿತ್ತು.

ಭಾರತದಲ್ಲಿ ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ದೆಹಲಿಯಲ್ಲಿ ಭೂಕಂಪನದ ಅನುಭವವಾಗಿತ್ತು. ಭೂಕಂಪದ ನಂತರ ಜಮ್ಮುವಿನ ಕೆಲವು ಭಾಗಗಳಲ್ಲಿ ಮೊಬೈಲ್ ಸೇವೆಗಳಿಗೆ ತೊಂದರೆಯಾಗಿದೆ ಎಂದೂ ವರದಿಯಾಗಿತ್ತು.

ಇದನ್ನೂ ಓದಿ: Pakistan Earthquake: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 9 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಭೂಕಂಪಗಳ ಸಂಖ್ಯೆ ಸಾಕಷ್ಟು ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ 4 ಕ್ಕಿಂತ ಹೆಚ್ಚು ತೀವ್ರತೆ ದಾಖಲಿಸಿದ್ದ 6 ಭೂಕಂಪಗಳು ದೇಶದಲ್ಲಿ ಈ ವರ್ಷ ಮಾರ್ಚ್ ತಿಂಗಳಲ್ಲಿ ಸಂಭವಿಸಿವೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Wed, 22 March 23

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು