AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ದೆಹಲಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

ದೆಹಲಿಯ ಕೊಹತ್ ಎನ್​ಕ್ಲೇವ್​ನಲ್ಲಿರುವ ಮನೆಯೊಂದರಲ್ಲಿ ವೃದ್ಧ ದಂಪತಿಯ ಶವಗಳು ಪತ್ತೆಯಾಗಿವೆ. ಈ ಅಪರಾಧದ ಹಿಂದೆ ಅವರ ಮನೆ ಕೆಲಸದಾಕೆಯ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ, ದಂಪತಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಹೇಳಲಾಗಿದ್ದು, ಅವರ ಶವಗಳು ಮಂಗಳವಾರ (ಮಾರ್ಚ್ 18) ಪತ್ತೆಯಾಗಿವೆ.

Delhi Crime: ದೆಹಲಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ
ಕ್ರೈಂImage Credit source: ICE Cleaning
ನಯನಾ ರಾಜೀವ್
|

Updated on: Mar 20, 2025 | 7:45 AM

Share

ನವದೆಹಲಿ, ಮಾರ್ಚ್​ 20: ದೆಹಲಿಯ ಕೊಹತ್ ಎನ್​ಕ್ಲೇವ್​ನಲ್ಲಿರುವ ಮನೆಯೊಂದರಲ್ಲಿ ವೃದ್ಧ ದಂಪತಿಯ ಶವಗಳು ಪತ್ತೆಯಾಗಿವೆ. ಈ ಅಪರಾಧದ ಹಿಂದೆ ಅವರ ಮನೆ ಕೆಲಸದಾಕೆಯ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ, ದಂಪತಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಹೇಳಲಾಗಿದ್ದು, ಅವರ ಶವಗಳು ಮಂಗಳವಾರ (ಮಾರ್ಚ್ 18) ಪತ್ತೆಯಾಗಿವೆ.

ದೆಹಲಿ ಪೊಲೀಸರು ಪ್ರಮುಖ ಶಂಕಿತನನ್ನು ಬಂಧಿಸಿದ್ದು, ಆತನ ಸಹಚರನನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಕೊಲೆ ಎರಡು ಮೂರು ದಿನಗಳ ಹಿಂದೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ನಂಬಿದ್ದಾರೆ ಆದರೆ ಅದೇ ಪ್ರದೇಶದಲ್ಲಿ ವಾಸಿಸುವ ದಂಪತಿಯ ಮಗ ಅವರ ಮನೆಗೆ ಭೇಟಿ ನೀಡಿದಾಗ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು, ಅವರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಹೆಚ್ಚಿನ ವಿಚಾರಣೆಯ ನಂತರ ಕೊಲೆಗಳ ಹಿಂದಿನ ನಿಖರವಾದ ಉದ್ದೇಶ ದೃಢಪಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ ಕ್ರಿಕೆಟ್ ಬೆಟ್ಟಿಂಗ್ ಸಾಲ ತೀರಿಸಲು ವೃದ್ಧೆ ಹತ್ಯೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವೃದ್ಧೆ ಕಮಲಾ (82) ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಶೋಕ, ಪ್ಲಂಬರ್ ಆಗಿದ್ದ. ಆಟೊ ಚಾಲಕ ಅಂಜನ್‌ಮೂರ್ತಿ ಹಾಗೂ ಕಾರ್ಮಿಕ ಸಿದ್ದರಾಜು ಸ್ನೇಹಿತರಾಗಿದ್ದರು. ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಾವಳಿ ವೇಳೆ ಮೂವರು ವಿಪರೀತ ಬೆಟ್ಟಿಂಗ್ ಕಟ್ಟುತ್ತಿದ್ದರು. ಇದಕ್ಕಾಗಿ ಹಲವರ ಬಳಿ ಸಾಲ ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಮತ್ತಷ್ಟು ಓದಿ: ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ: ಅಳಿಯನ ಕೈಯಲ್ಲೇ ಹೆಣವಾದ ಪಂಚನಹಳ್ಳಿ ಸಾಹುಕಾರ

ಕ್ರಿಕೆಟ್ ಪಂದ್ಯಗಳ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡಿದ್ದರು. ಸಾಲ ನೀಡಿದ್ದ ಜನ, ಹಣ ವಾಪಸು ನೀಡುವಂತೆ ಒತ್ತಾಯಿಸುತ್ತಿದ್ದರು. ಕೆಲಸದಿಂದ ಬರುವ ಹಣದಲ್ಲಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಅದೇ ಕಾರಣಕ್ಕೆ ಆರೋಪಿಗಳು, ಚಿನ್ನಾಭರಣ ಕಳ್ಳತನ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದರು.

ಪಶ್ಚಿಮ ಕಾರ್ಡ್ ರಸ್ತೆಗೆ ಹೊಂದಿಕೊಂಡಿರುವ 2ನೇ ಹಂತದ 12ನೇ ಅಡ್ಡರಸ್ತೆಯ ಮನೆಯಲ್ಲಿ ವೃದ್ಧೆ ಕಮಲಾ ನೆಲೆಸಿದ್ದರು. ಪತಿ ಹಲವು ವರ್ಷಗಳ ಹಿಂದೆಯೇ ತೀರಿಕೊಂಡಿದ್ದರು. ಮಕ್ಕಳು ಪ್ರತ್ಯೇಕವಾಗಿ ಬೇರೆಡೆ ವಾಸವಿದ್ದರು. ಅಶೋಕ, ತಿಂಗಳ ಹಿಂದೆಯಷ್ಟೇ ಕಮಲಾ ಮನೆಗೆ ಪ್ಲಂಬರ್ ಕೆಲಸಕ್ಕೆ ಹೋಗಿದ್ದ. ಇಡೀ ದಿನ ಮನೆಯಲ್ಲಿ ಅಶೋಕ, ವೃದ್ಧೆ ಧರಿಸಿದ್ದ ಚಿನ್ನಾಭರಣ ಗಮನಿಸಿದ್ದ ಎಂದು ಪೊಲೀಸರು ಹೇಳಿದರು.

ಲಗ್ಗೆರೆ ಎಲ್‌.ಜಿ. ರಾಮಣ್ಣ ಬಡಾವಣೆಯ ಆರ್‌. ಅಶೋಕ (40), ಲಗ್ಗೆರೆ ಕೆಂಪೇಗೌಡ ನಗರದ ಸಿ.ಎಂ. ಸಿದ್ದರಾಜು (34) ಹಾಗೂ ಕಾಮಾಕ್ಷಿಪಾಳ್ಯದ ಸಣ್ಣಕಿ ಬಯಲು ನಿವಾಸಿ ಅಂಜನಮೂರ್ತಿ (33) ಬಂಧಿತರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್