AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಫಲಿತಾಂಶ: ಬಿಜೆಪಿಯಲ್ಲಿ ಸಿಎಂ ರೇಸ್​ನಲ್ಲಿ ಯಾರೆಲ್ಲ? ಇಲ್ಲಿದೆ ವಿವರ

Delhi Election Result 2025: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಬಹುತೇಕ ಖಚಿತವಾಗಿದ್ದು, ಇದರ ಬೆನ್ನಲ್ಲೇ ಪಕ್ಷದಿಂದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ. ಕೆಲವು ಮಂದಿ ನಾಯಕರು ಸಿಎಂ ಹುದ್ದೆಯ ರೇಸ್​​ನಲ್ಲಿ ಇದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಇದರ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ದೆಹಲಿ ನಾಯಕರು ಹೇಳಿದ್ದಾರೆ. ಸಿಎಂ ರೇಸ್​​ನಲ್ಲಿರವವರು ಯಾರೆಲ್ಲ ಎಂಬ ಮಾಹಿತಿ ಇಲ್ಲಿದೆ.

ದೆಹಲಿ ಫಲಿತಾಂಶ: ಬಿಜೆಪಿಯಲ್ಲಿ ಸಿಎಂ ರೇಸ್​ನಲ್ಲಿ ಯಾರೆಲ್ಲ? ಇಲ್ಲಿದೆ ವಿವರ
ಬಿಜೆಪಿಯಲ್ಲಿ ಸಿಎಂ ರೇಸ್​ನಲ್ಲಿ ಯಾರೆಲ್ಲ? ಇಲ್ಲಿದೆ ವಿವರ
ಗಣಪತಿ ಶರ್ಮಾ
|

Updated on: Feb 08, 2025 | 12:00 PM

Share

ನವದೆಹಲಿ, ಫೆಬ್ರವರಿ 8: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಮ್ಯಾಜಿಕ್ ನಂಬರ್ ಗಡಿ ದಾಟುತ್ತಿದ್ದಂತೆಯೇ ಕೇಸರಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಬಿಜೆಪಿ ನಾಯಕ ವೀರೇಂದ್ರ ಸಚ್‌ದೇವ್ ಶನಿವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಯಾರೆಂಬ ವಿಷಯ ನಮಗೆ ಹೆಚ್ಚು ಮುಖ್ಯವಲ್ಲ. ಜನರಿಗೆ ದ್ರೋಹ ಮಾಡುವವರಿಗೆ (ಎಎಪಿ), ಜನರು ಈ ರೀತಿ (ಸೋಲು) ಪಾಠ ಕಲಿಸುತ್ತಾರೆ ಎಂದು ವೀರೇಂದ್ರ ಸಚ್‌ದೇವ್ ಹೇಳಿದ್ದಾರೆ.

ಬಿಜೆಪಿಯ ಸಂಭಾವ್ಯ ಸಿಎಂ ಅಭ್ಯರ್ಥಿಗಳು ಯಾರೆಲ್ಲ?

ಪರ್ವೇಶ್ ವರ್ಮಾ: ದೆಹಲಿಯ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ. ನವದೆಹಲಿ ಕ್ಷೇತ್ರದಿಂದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿದ್ದಾರೆ.

ರಮೇಶ್ ಬಿಧುರಿ: ಬಿಜೆಪಿಯ ಸಿಎಂ ಫೇಸ್ ಎಂದು ರಮೇಶ್ ಬಿಧುರಿಯವರನ್ನು ಎಎಪಿ ಹೇಳಿತ್ತು. ಹಾಗೆಂದು ಚುನಾವಣಾ ಪ್ರಚಾರದ ಸಮಯದಲ್ಲಿ ಅವರನ್ನು ಚರ್ಚೆಗೂ ಆಹ್ವಾನಿಸಿತ್ತು. ಆದರೆ ಮಾತ್ರ ಪಕ್ಷದ ಸಿಎಂ ಫೇಸ್ ಅನ್ನು ನಿರ್ಧರಿಸಲಾಗಿಲ್ಲ ಎಂದಿತ್ತು. ದೆಹಲಿ ಸಿಎಂ ಅತಿಶಿ ವಿರುದ್ಧ ಬಿಧುರಿ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಕೈಲಾಶ್ ಗಹ್ಲೋಟ್: ಬಿಜ್ವಾಸನ್‌ನಿಂದ ಸ್ಪರ್ಧಿಸಿದ ಗಹ್ಲೋಟ್, ಬಿಜೆಪಿಯ ಮತ್ತೊಬ್ಬ ಸಂಭಾವ್ಯ ಸಿಎಂ ಅಭ್ಯರ್ಥಿ.

ಕಪಿಲ್ ಮಿಶ್ರಾ: ಕರವಾಲ್ ನಗರದಿಂದ ಸ್ಪರ್ಧಿಸಿರುವ ಮಿಶ್ರಾ, ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮುನ್ನಡೆಯಲ್ಲಿದ್ದಾರೆ.

ವಿಜೇಂದರ್ ಗುಪ್ತಾ: ದೆಹಲಿಯಲ್ಲಿ ಪಕ್ಷ ಗೆಲುವು ಸಾಧಿಸಿದರೆ ಬಿಜೆಪಿಯ ಈ ಹಿರಿಯ ನಾಯಕ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಪರ್ಧಿ. ದೆಹಲಿ ಬಿಜೆಪಿಯ ಮಾಜಿ ಮುಖ್ಯಸ್ಥರಾಗಿರುವ ಅವರು, ಎಎಪಿ ಪ್ರಾಬಲ್ಯದ ಹೊರತಾಗಿಯೂ 2015 ಮತ್ತು 2020 ಎರಡರಲ್ಲೂ ರೋಹಿಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಗುಪ್ತಾ ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ