AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ವೇಗದ ಅಭಿವೃದ್ಧಿ; ಗೆಲುವಿನ ಬಳಿಕ ಪ್ರಧಾನಿ ಮೋದಿ ಭರವಸೆ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಿ ಬಿಜೆಪಿ ಜಯಭೇರಿ ಬಾರಿಸಿದೆ. ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. ಬಿಜೆಪಿಯ ಭರ್ಜರಿ ಗೆಲುವಿನ ಬಳಿಕ ದೆಹಲಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ.

ದೆಹಲಿಯಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ವೇಗದ ಅಭಿವೃದ್ಧಿ; ಗೆಲುವಿನ ಬಳಿಕ ಪ್ರಧಾನಿ ಮೋದಿ ಭರವಸೆ
Prime Minister Modi
ಸುಷ್ಮಾ ಚಕ್ರೆ
|

Updated on:Feb 08, 2025 | 7:53 PM

Share

ನವದೆಹಲಿ: 2025ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಕುರಿತು ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಬಿಜೆಪಿ ಕಾರ್ಯಕರ್ತರಿಂದ ಚಪ್ಪಾಳೆ ತಟ್ಟಿದ ನಂತರ ಅವರು ವೇದಿಕೆಯತ್ತ ನಡೆದು ದೆಹಲಿ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ್ದಾರೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ “ಡಬಲ್ ಸ್ಪೀಡ್”ನಲ್ಲಿ ಅಭಿವೃದ್ಧಿಯನ್ನು ಜನರು ನಿರೀಕ್ಷಿಸಬಹುದು ಎಂದು ಮೋದಿ ಭರವಸೆ ನೀಡಿದರು.

“ಇಂದಿನ ಗೆಲುವು ಐತಿಹಾಸಿಕ. ಇದು ಸಾಮಾನ್ಯ ವಿಜಯವಲ್ಲ. ದೆಹಲಿಯ ಜನರು ‘ಆಪ್ದಾ’ವನ್ನು ಓಡಿಸಿದ್ದಾರೆ. ದೆಹಲಿಯನ್ನು ‘ಆಪ್ದಾ’ದಿಂದ ಮುಕ್ತಗೊಳಿಸಲಾಗಿದೆ. ದೆಹಲಿಯ ಜನಾದೇಶ ಸ್ಪಷ್ಟವಾಗಿದೆ. ಇಂದು ದೆಹಲಿಯಲ್ಲಿ ಅಭಿವೃದ್ಧಿ, ದೃಷ್ಟಿಕೋನ ಮತ್ತು ನಂಬಿಕೆ ಗೆದ್ದಿದೆ. ಇಂದು, ದೆಹಲಿಯನ್ನು ಆವರಿಸಿದ್ದ ವಂಚಕ ಸರ್ಕಾರ ಸೋಲನುಭವಿಸಿದೆ. ಈ ಗೆಲುವಿಗಾಗಿ ನಾನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ಮತ್ತು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Delhi Results: ದೆಹಲಿಯಲ್ಲಿ 40 ಸ್ಥಾನಗಳನ್ನು ಪಡೆದು ಬಹುಮತ ದಾಟಿದ ಬಿಜೆಪಿ; ಡೊಳ್ಳು ಬಾರಿಸಿ ಕಾರ್ಯಕರ್ತರ ಸಂಭ್ರಮಾಚರಣೆ

ನಾವು ಅಭಿವೃದ್ಧಿಯೊಂದಿಗೆ ದೆಹಲಿಯ ಜನರು ನಮಗೆ ನೀಡಿದ ಪ್ರೀತಿಯನ್ನು ಜನರಿಗೆ ಹಿಂದಿರುಗಿಸುತ್ತೇವೆ. ದೆಹಲಿ ನಮಗೆ ಪೂರ್ಣ ಹೃದಯದಿಂದ ಪ್ರೀತಿ ನೀಡಿದೆ ಎಂದು ಮತದಾರರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಜನರು ನಮ್ಮನ್ನು ಎಂದಿಗೂ ನಿರಾಶೆಗೊಳಿಸಿಲ್ಲ. 2014, 2019 ಮತ್ತು 2024ರಲ್ಲಿ ದೆಹಲಿಯ ಜನರು 7 ಸ್ಥಾನಗಳಲ್ಲಿಯೂ ಬಿಜೆಪಿಗೆ ಗೆಲುವನ್ನು ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಈ ಜನಾದೇಶವು “ಮೋದಿಯವರ ಭರವಸೆ”ಯಲ್ಲಿ ಜನರು ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

“ಇಂದಿನ ಫಲಿತಾಂಶಗಳು ಬಿಜೆಪಿಯ ಡಬಲ್-ಎಂಜಿನ್ ಸರ್ಕಾರದ ಮೇಲೆ ದೇಶ ಎಷ್ಟು ನಂಬಿಕೆಯನ್ನು ಹೊಂದಿದೆ ಎಂಬುದನ್ನು ತೋರಿಸುತ್ತದೆ. ಸಮಾಜದ ಪ್ರತಿಯೊಂದು ವರ್ಗವು ಬಿಜೆಪಿಗೆ ಮತ ಹಾಕಿದೆ. ಇಂದು, ಭಾರತ ಆಪ್​ನ ಓಲೈಕೆಯನ್ನು ತಿರಸ್ಕರಿಸಿದೆ ಮತ್ತು ಬಿಜೆಪಿಯ ‘ಸಂತುಷ್ಟೀಕರಣ’ ನೀತಿಯನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Parvesh Verma: ಅರವಿಂದ್ ಕೇಜ್ರಿವಾಲ್​ ಎದುರು ಗೆದ್ದು ದೆಹಲಿ ಸಿಎಂ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿರುವ ಪರ್ವೇಶ್ ವರ್ಮಾ ಯಾರು?

ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಪ್ರದರ್ಶನ ನೀಡಿದ ನಂತರ, ಹರಿಯಾಣ, ಮಹಾರಾಷ್ಟ್ರ ಮತ್ತು ಈಗ ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಹೃದಯದಲ್ಲಿ ನೋವು ಇರುವುದನ್ನು ನಾನು ನೋಡುತ್ತಿದ್ದೆ. ದೆಹಲಿಗೆ ಸಂಪೂರ್ಣವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದಿರುವ ಬಗ್ಗೆ ನಮಗೆ ನೋವಿತ್ತು. ಆದರೆ ಇಂದು ದೆಹಲಿ ನಮ್ಮ ವಿನಂತಿಯನ್ನು ಸಹ ಸ್ವೀಕರಿಸಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sat, 8 February 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ