ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್​ 22ರವರೆಗೆ ವಿಸ್ತರಣೆ

|

Updated on: Oct 19, 2023 | 12:18 PM

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ನ್ಯಾಯಾಂಗ ಬಂಧನವನ್ನು ನವೆಂಬರ್​ 22ರವರೆಗೆ ವಿಸ್ತರಿಸಲಾಗಿದೆ. ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ನವೆಂಬರ್​ 22ರವರೆಗೆ ವಿಸ್ತರಣೆ
ಮನೀಶ್ ಸಿಸೋಡಿಯಾ
Image Credit source: NDTV
Follow us on

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ನ್ಯಾಯಾಂಗ ಬಂಧನವನ್ನು ನವೆಂಬರ್​ 22ರವರೆಗೆ ವಿಸ್ತರಿಸಲಾಗಿದೆ. ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ವಿವರಗಳ ಪ್ರಕಾರ, ಆರೋಪಿಗಳ ವಕೀಲರು ದಾಖಲೆಗಳು ಸರಿಯಾಗಿಲ್ಲದ ಕಾರಣ ಅವುಗಳನ್ನು ಪರಿಶೀಲಿಸಲು ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು. 2022ರ ಜುಲೈ 22ರಂದು, ಎಲ್‌ಜಿ ವಿಕೆ ಸಕ್ಸೇನಾ ಅವರು ಹೊಸ ಅಬಕಾರಿ ನೀತಿಯ ಅನುಷ್ಠಾನದಲ್ಲಿ ಆಪಾದಿತ ನಿಯಮ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು.

ಮದ್ಯದ ಪರವಾನಗಿದಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡಲಾಗಿದೆ ಎಂದು ದೆಹಲಿಯ ಮುಖ್ಯ ಕಾರ್ಯದರ್ಶಿಯ ವರದಿ ತಿಳಿಸಿತ್ತು. ಈ ಅಕ್ರಮಗಳಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಎಲ್‌ಜಿ ದೆಹಲಿಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದರು. ಚಿಲ್ಲರೆ ಮದ್ಯದ ಪರವಾನಗಿಗಾಗಿ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಕಾರ್ಟೆಲೈಸೇಶನ್ ಬಗ್ಗೆ ದೂರು ನೀಡಲಾಗಿದೆ.

ಮತ್ತಷ್ಟು ಓದಿ: ದೆಹಲಿ ಅಬಕಾರಿ ನೀತಿ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಸುಪ್ರೀಂ

ದೆಹಲಿಯ ಅಬಕಾರಿ ನೀತಿ 2021-2022ಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಎಫ್‌ಐಆರ್‌ನಲ್ಲಿ 15 ವ್ಯಕ್ತಿಗಳನ್ನು ಹೆಸರನ್ನು ಉಲ್ಲೇಖಿಸಿತ್ತು, ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಸಿಸೋಡಿಯಾ ಹೆಸರು ಕೇಳಿ ಬಂದಿತ್ತು. ಎಲ್-ಜಿ ಕಚೇರಿಯಿಂದ ನೀಡಲಾದ ಜ್ಞಾಪಕ ಪತ್ರದಲ್ಲಿ ಆರೋಪಗಳನ್ನು ಉಲ್ಲೇಖಿಸಿ ಎಫ್‌ಐಆರ್‌ನಲ್ಲಿ ಸಿಸೋಡಿಯಾ ಸೇರಿ ವಿಜಯ್ ನಾಯರ್, ಮನರಂಜನಾ ಮತ್ತು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಜಿ ಸಿಇಒ, ಓನ್ಲಿ ಮಚ್ ಲೌಡರ್ ಹೆಸರೂ ಇತ್ತು.

ಆಗಸ್ಟ್ 2022 ರಲ್ಲೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿತ್ತು.
ಜುಲೈ 31ರಂದು ಹೊಸ ಅಬಕಾರಿ ನೀತಿ ರದ್ದು ಆಮ್ ಆದ್ಮಿ ಪಕ್ಷದ (ಎಎಪಿ) ಮಹತ್ವಾಕಾಂಕ್ಷೆಯ ದೆಹಲಿ ಅಬಕಾರಿ ನೀತಿಯನ್ನು 31 ಜುಲೈ 2022 ರಂದು ರದ್ದುಗೊಳಿಸಲಾಗಿತ್ತು.

ಹೊಸ ನೀತಿಯನ್ನು ರದ್ದುಗೊಳಿಸಿದ ನಂತರ, ದೆಹಲಿ ಸರ್ಕಾರವು ನವೆಂಬರ್ 17, 2020 ರ ಮೊದಲು ಜಾರಿಗೆ ತಂದ ಹಳೆಯ ಅಬಕಾರಿ ಆಡಳಿತವನ್ನು ಮರಳಿ ತರಲು ನಿರ್ಧರಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ