ಅರವಿಂದ್ ಕೇಜ್ರಿವಾಲ್ ತನಿಖೆಗೆ ‘ಸಹಕರಿಸುತ್ತಿಲ್ಲ’: ದೆಹಲಿ ನ್ಯಾಯಾಲಯಕ್ಕೆ ಇಡಿ ಹೇಳಿಕೆ

ಅರವಿಂದ್ ಕೇಜ್ರಿವಾಲ್ ಅವರ ವಕೀಲರು, ಕೇಜ್ರಿವಾಲ್ ಜೈಲಿನೊಳಗೆ ಮೂರು ಪುಸ್ತಕಗಳನ್ನು ಓದಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಅದೆಂದರೆ ಭಗವದ್ಗೀತೆ, ರಾಮಾಯಣ ಮತ್ತು How Prime Ministers Decide. ಅವರು ವಿಶೇಷ ಆಹಾರಕ್ಕಾಗಿ ಮತ್ತು ಧಾರ್ಮಿಕ ಲಾಕೆಟ್ ಹೊಂದಲು ಅನುಮತಿ ಕೋರಿದ್ದಾರೆ ಎಂದಿದ್ದಾರೆ.

ಅರವಿಂದ್ ಕೇಜ್ರಿವಾಲ್ ತನಿಖೆಗೆ ‘ಸಹಕರಿಸುತ್ತಿಲ್ಲ’: ದೆಹಲಿ ನ್ಯಾಯಾಲಯಕ್ಕೆ ಇಡಿ ಹೇಳಿಕೆ
ಅರವಿಂದ್ ಕೇಜ್ರಿವಾಲ್
Follow us
|

Updated on: Apr 01, 2024 | 3:38 PM

ದೆಹಲಿ ಏಪ್ರಿಲ್ 1: ಈಗ ರದ್ದಾದ ದೆಹಲಿ ಅಬಕಾರಿ ನೀತಿಗೆ (Delhi excise policy)ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸೋಮವಾರ, ಏಪ್ರಿಲ್ 1 ರಂದು ಜಾರಿ ನಿರ್ದೇಶನಾಲಯದ ( Enforcement Directorate) ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಎಸ್‌ವಿ ರಾಜು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅರ್ಜಿಗೆ ಈ ವಾದಗಳು ಎಷ್ಟು ಸಂಬಂಧಿಸಿವೆ ಎಂದು ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಕೇಳಿದಾಗ, ಎಎಸ್‌ಜಿ ಅವರು “ನಂತರದ ಹಂತದಲ್ಲಿ ಅವರ ಇಡಿ ಕಸ್ಟಡಿಯನ್ನು ಪಡೆಯುವ ಹಕ್ಕನ್ನು ನಾವು ಕಾಯ್ದಿರಿಸಿದ್ದೇವೆ ಎಂದಿದ್ದಾರೆ.

ವಿಜಯ್ ನಾಯರ್ ಎಎಪಿಯ ಮಾಜಿ ಸಂವಹನ ಉಸ್ತುವಾರಿ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ವಿಚಾರಣೆ ವೇಳೆ ಆಮ್ ಆದ್ಮಿ ಪಕ್ಷದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ಅವರ ವಕೀಲರು, ಕೇಜ್ರಿವಾಲ್ ಜೈಲಿನೊಳಗೆ ಮೂರು ಪುಸ್ತಕಗಳನ್ನು ಓದಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಅದೆಂದರೆ ಭಗವದ್ಗೀತೆ, ರಾಮಾಯಣ ಮತ್ತು How Prime Ministers Decide. ಅವರು ವಿಶೇಷ ಆಹಾರಕ್ಕಾಗಿ ಮತ್ತು ಧಾರ್ಮಿಕ ಲಾಕೆಟ್ ಹೊಂದಲು ಅನುಮತಿ ಕೋರಿದ್ದಾರೆ ಎಂದಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರೂಸ್ ಅವೆನ್ಯೂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಸೋಮವಾರ ಅಂತ್ಯಗೊಂಡ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ನ್ಯಾಯಾಲಯಕ್ಕೆ ಪ್ರವೇಶಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ನಾಯಕ, “ಪ್ರಧಾನಿ ಈಗ ಏನು ಮಾಡುತ್ತಿದ್ದಾರೋ (ಅವರ ಬಂಧನವನ್ನು ಉಲ್ಲೇಖಿಸಿ)ಅದು ದೇಶಕ್ಕೆ ಒಳ್ಳೆಯದಲ್ಲ” ಎಂದು ಹೇಳಿದರು.  ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ನ್ಯಾಯಾಧೀಶ ಬವೇಜಾ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿದರು. ಇದರ ಬೆನ್ನಲ್ಲೇ, ಆತನ ಕಸ್ಟಡಿ ವಿಚಾರಣೆಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಇಡಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿತು. “ವಿಚಾರಣೆ ಪೂರ್ಣಗೊಂಡಿದೆ. ಅವರನ್ನು (ಕೇಜ್ರಿವಾಲ್) ಜೈಲಿಗೆ ಏಕೆ ಕಳುಹಿಸಲಾಗಿದೆ? ಈ ಸರ್ವಾಧಿಕಾರಕ್ಕೆ ದೇಶದ ಜನತೆ ಉತ್ತರ ನೀಡಲಿದ್ದಾರೆ ಎಂದು ಸುನೀತಾ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ ಏ.15ರವರೆಗೆ ನ್ಯಾಯಾಂಗ ಬಂಧನ

ವಿಜಯ್ ನಾಯರ್ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಸುಧಾಂಶು ತ್ರಿವೇದಿ, ಪತ್ರಿಕಾಗೋಷ್ಠಿಯಲ್ಲಿ, “ಪ್ರಧಾನ ಆರೋಪಿ ವಿಜಯ್ ನಾಯರ್ ಅವರು ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರಿಗೆ ವರದಿ ಮಾಡುತ್ತಿದ್ದರು ಎಂದು ಅರವಿಂದ್ ಕೇಜ್ರಿವಾಲ್ ಉಲ್ಲೇಖಿಸಿದ್ದಾರೆ ಎಂದು ಮಾಧ್ಯಮ ವರದಿಗಳಿವೆ. ದೆಹಲಿ ಸರ್ಕಾರದ ಪರಿಸ್ಥಿತಿ ಮದ್ಯಪಾನ ನೀತಿ ಸ್ಪಷ್ಟವಾಗುತ್ತಿದೆ, ಕೇಜ್ರಿವಾಲ್ ರಾಜೀನಾಮೆ ನೀಡುತ್ತಾರೋ ಅಥವಾ ಹೊಸ ರಾಜಕೀಯದತ್ತ ಮುಖ ಮಾಡುತ್ತಾರೋ ಕಾದು ನೋಡಬೇಕು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ