Big News: ಸಿಬಿಐ ವಿಚಾರಣೆ ಬೆನ್ನಲ್ಲೇ ಇಡಿಯಿಂದ ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್ ದಾಖಲು ಸಾಧ್ಯತೆ

ಮನೀಶ್ ಸಿಸೋಡಿಯಾ ತಮ್ಮ ಪಕ್ಷವು ಯಾವುದೇ ತನಿಖೆಗೆ ಹೆದರುವುದಿಲ್ಲ. ಬಿಜೆಪಿ ನಾಯಕರು ಆರೋಪಿಸುತ್ತಿರುವ ಹಗರಣಗಳು ಸುಳ್ಳು ಎಂದು ಪ್ರತಿಪಾದಿಸಿದ್ದಾರೆ.

Big News: ಸಿಬಿಐ ವಿಚಾರಣೆ ಬೆನ್ನಲ್ಲೇ ಇಡಿಯಿಂದ ಡಿಸಿಎಂ ಮನೀಶ್ ಸಿಸೋಡಿಯಾ ವಿರುದ್ಧ ಅಕ್ರಮ ಹಣ ವರ್ಗಾವಣೆ ಕೇಸ್ ದಾಖಲು ಸಾಧ್ಯತೆ
ಮನೀಶ್ ಸಿಸೋಡಿಯಾ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 22, 2022 | 10:33 AM

ನವದೆಹಲಿ: ದೆಹಲಿ ಮದ್ಯ ನೀತಿಯ ಜಾರಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ನಡೆಯುತ್ತಿರುವ ಸಿಬಿಐ ತನಿಖೆಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯವು (ED) ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ವಿರುದ್ಧ ಅಕ್ರಮ ಹಣ ವರ್ಗಾವಣೆ (Money Laundering Case) ಪ್ರಕರಣವನ್ನು ದಾಖಲಿಸುವ ಸಾಧ್ಯತೆಯಿದೆ. ಮನೀಶ್ ಸಿಸೋಡಿಯಾ ವಿರುದ್ಧದ ಎಫ್‌ಐಆರ್‌ನ ಪ್ರತಿಯನ್ನು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಇತರ ಸಂಬಂಧಿತ ದಾಖಲೆಗಳನ್ನು ಸಿಬಿಐ ಭಾನುವಾರ ಇಡಿಯೊಂದಿಗೆ ಹಂಚಿಕೊಂಡಿತ್ತು.

ದೆಹಲಿಯ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ಶೋಧ ನಡೆಸಿತ್ತು. ನಂತರ ಅವರನ್ನು ಬಂಧಿಸಿತ್ತು. ಎಫ್‌ಐಆರ್‌ನಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಸಂಖ್ಯೆ 1 ಎಂದು ಹೆಸರಿಸಲಾಗಿದ್ದು, ಇತರ 14 ಮಂದಿಯನ್ನು ಹೆಸರಿಸಲಾಗಿದೆ.

ಇದನ್ನೂ ಓದಿ: ಮದ್ಯ ಹಗರಣ: ಎಫ್ಐಆರ್ ದಾಖಲಿಸಿದ ಸಿಬಿಐ; ಮನೀಶ್ ಸಿಸೋಡಿಯಾ ಆರೋಪಿ ನಂಬರ್ 1

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಾವು ಸಿಬಿಐ ತನಿಖೆಗೆ ಹೆದರುವುದಿಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ 5 ದಿನಗಳ ನಂತರ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ನಿರ್ಮಾಣದಲ್ಲಿ ಬಿರುಕು ಬಿಟ್ಟಿರುವ ಆರೋಪದ ಹಗರಣದ ಬಗ್ಗೆಯೂ ಸಂಸ್ಥೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಮನೀಶ್ ಸಿಸೋಡಿಯಾ ತಮ್ಮ ಪಕ್ಷವು ಯಾವುದೇ ತನಿಖೆಗೆ ಹೆದರುವುದಿಲ್ಲ. ಬಿಜೆಪಿ ನಾಯಕರು ಆರೋಪಿಸುತ್ತಿರುವ ಹಗರಣಗಳು ಸುಳ್ಳು ಎಂದು ಪ್ರತಿಪಾದಿಸಿದ್ದಾರೆ.

2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತು ತಮ್ಮ ಮನೆಯಲ್ಲಿ ಸಿಬಿಐ ದಾಳಿ ನಡೆಸಿದ್ದಕ್ಕಾಗಿ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಭ್ರಷ್ಟಾಚಾರದಲ್ಲಿ ತೊಡಗಿಲ್ಲದ ಕಾರಣ ಸಿಬಿಐ ತನಿಖೆಯಿಂದ ಏನನ್ನೂ ಬಹಿರಂಗಪಡಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿಗೆ ಸರ್ಕಾರವು ಭ್ರಷ್ಟಾಚಾರವನ್ನು ತಡೆಯಲು ಆಸಕ್ತಿಯಿಲ್ಲ. ಆದರೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಕೆಲಸವನ್ನು ನಿಲ್ಲಿಸಲು ಬಯಸಿದೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: Big News: ಮನೀಶ್ ಸಿಸೋಡಿಯಾ ಜನಪ್ರಿಯತೆಗೆ ಹೆದರಿ ಕೇಜ್ರಿವಾಲ್ ಸಿಬಿಐಗೆ ಮಾಹಿತಿ ನೀಡಿರಬಹುದು; ಬಿಜೆಪಿ ಹೊಸ ಆರೋಪ

ಉಪಮುಖ್ಯಮಂತ್ರಿಯವರ ವಿರುದ್ಧ ಸಿಬಿಐ ದಾಳಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜೀನಾಮೆಗೆ ಒತ್ತಾಯಿಸಿದೆ. ಎಫ್‌ಐಆರ್‌ನಲ್ಲಿ ಒಟ್ಟು 9 ಖಾಸಗಿ ವ್ಯಕ್ತಿಗಳನ್ನು ಹೆಸರಿಸಲಾಗಿದೆ. ಸಿಬಿಐ ತನ್ನ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಿದೆ ಎಂದು ಸಿಸೋಡಿಯಾ ಹೇಳಿಕೊಂಡಿದ್ದರು. ಆದರೆ ಏಜೆನ್ಸಿ ಅಧಿಕಾರಿಗಳು ಅದನ್ನು ನಿರಾಕರಿಸಿದ್ದರು. ಆಮ್ ಆದ್ಮಿ ಪಕ್ಷವು ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಗಳ ಮೇಲೆ ಕೇಂದ್ರೀಕರಿಸುವ ಬದಲು ಪ್ರತಿದಿನ ಬೆಳಿಗ್ಗೆ “ಸಿಬಿಐ-ಇಡಿ ಆಟ” ಆಡುತ್ತಿದೆ ಎಂದು ಆರೋಪಿಸಿ ಕೇಂದ್ರವನ್ನು ಲೇವಡಿ ಮಾಡಿತ್ತು.

ಸಿಬಿಐ ಶನಿವಾರ ಆರೋಪಿಗಳ ವಿಚಾರಣೆ ಆರಂಭಿಸಿದ್ದು, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಈ ದಾಳಿಯಲ್ಲಿ ವಶಪಡಿಸಿಕೊಂಡ ದಾಖಲೆಗಳು ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ಹೆಚ್ಚಿನ ಜನರನ್ನು ವಿಚಾರಣೆ ನಡೆಸಲಾಗುವುದು ಎಂದು ಅದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Mon, 22 August 22