ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavitha) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
ಕೆ ಕವಿತಾ

Updated on: Apr 09, 2024 | 12:38 PM

ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavitha) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಕೊಠಡಿಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ.

ಇದಕ್ಕೂ ಮುನ್ನ ಕವಿತಾ ಅವರನ್ನು ಸೋಮವಾರ (ಏಪ್ರಿಲ್ 8) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಮತ್ತಷ್ಟು ಓದಿ: ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮದ್ಯಪಾನ ನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬಿಆರ್‌ಎಸ್ ಮುಖಂಡರ ಅರ್ಜಿಯ ವಿಚಾರಣೆ ವೇಳೆ ಅವರ ವಕೀಲರು ವಾದ ಮಂಡಿಸಿದ ಕೆ. ಕವಿತಾ ಅವರ ಮಗನ ಪರೀಕ್ಷೆಗಳು ಏಪ್ರಿಲ್ ತಿಂಗಳಿನಲ್ಲಿ ಪ್ರಾರಂಭವಾಗಲಿವೆ.

ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಾದಿಸಿದ್ದರು. ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏಪ್ರಿಲ್ 15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಯಶಸ್ಸಿನ ಅಂಚಿನಲ್ಲಿದ್ದು, ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗಲಿದೆ ಎಂದು ಇಡಿ ವಕೀಲರು ಪ್ರತಿಪಾದಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us