ದೆಹಲಿ ಅಬಕಾರಿ ನೀತಿ ಪ್ರಕರಣ: 8 ಆರೋಪಿಗಳ ವಿರುದ್ಧ ಲುಕೌಟ್ ಸುತ್ತೋಲೆ ಹೊರಡಿಸಿದ ಸಿಬಿಐ

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಮೂವರು ಮಾಜಿ ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ನಾಲ್ವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಯಾವುದೇ ಎಲ್‌ಒಸಿ ನೀಡಿಲ್ಲ

ದೆಹಲಿ ಅಬಕಾರಿ ನೀತಿ ಪ್ರಕರಣ: 8 ಆರೋಪಿಗಳ ವಿರುದ್ಧ ಲುಕೌಟ್ ಸುತ್ತೋಲೆ ಹೊರಡಿಸಿದ ಸಿಬಿಐ
ಮನೀಶ್ ಸಿಸೋಡಿಯಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 21, 2022 | 8:24 PM

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಂಟು ‘ಖಾಸಗಿ’ ಆರೋಪಿಗಳ ವಿರುದ್ಧ ಲುಕ್ ಔಟ್ ಸುತ್ತೋಲೆ (LOC) ಹೊರಡಿಸಲಾಗಿದೆ ಎಂದು ಕೇಂದ್ರೀಯ ತನಿಖಾ ದಳ (CBI) ಅಧಿಕಾರಿಗಳು ತಿಳಿಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸ ಲಾದ ಎಂಟು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ ಪ್ರಥಮ ಮಾಹಿತಿ ವರದಿಯಲ್ಲಿ ಒಟ್ಟು 9 ‘ಖಾಸಗಿ’ ವ್ಯಕ್ತಿಗಳನ್ನು ಹೆಸರಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಪೆರ್ನೋಡ್ ರಿಕಾರ್ಡ್‌ನ ಮಾಜಿ ಉಪಾಧ್ಯಕ್ಷ ಮನೋಜ್ ರೈ ಅವರನ್ನು ಹೊರತುಪಡಿಸಿ, ಎಲ್ಲಾ ಖಾಸಗಿ ವ್ಯಕ್ತಿಗಳ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಲಾಗಿದೆ. ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಮತ್ತು ಮೂವರು ಮಾಜಿ ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಎಫ್‌ಐಆರ್‌ನಲ್ಲಿ ಹೆಸರಿಸಲಾದ ನಾಲ್ವರು ಸರ್ಕಾರಿ ಅಧಿಕಾರಿಗಳ ವಿರುದ್ಧ ಯಾವುದೇ ಎಲ್‌ಒಸಿ ನೀಡಿಲ್ಲ ಎಂದು ಅವರು ಹೇಳಿದರು. ಸರ್ಕಾರಕ್ಕೆ ತಿಳಿಸದೆ ದೇಶವನ್ನು ತೊರೆಯಲು ಸಾಧ್ಯವಿಲ್ಲದ ಕಾರಣ ಸರ್ಕಾರಿ ಅಧಿಕಾರಿಗಳ ವಿರುದ್ಧ ಎಲ್‌ಒಸಿಗಳನ್ನು ನೀಡುವ ಅಗತ್ಯವಿಲ್ಲ ಎಂದು ಸಿಬಿಐ ಲುಕೌಟ್ ನೋಟಿಸ್ ಕಳುಹಿಸಿಲ್ಲ ಎಂದು ಅವರು ಹೇಳಿದ್ದಾರೆ.

ಸ್ಟಾಂಡಪ್ ಕಾಮಿಡಿಯನ್‌ಗಳು, ಸಾಮಾಜಿಕ ಮಾಧ್ಯಮ ಇನ್ಫ್ಲ್ಯೂಯೆನ್ಸರ್ ಗಳು , ಹೈದರಾಬಾದ್  ನಂಟು ಇರುವ ಸಗಟು ಮತ್ತು ಚಿಲ್ಲರೆ ಮದ್ಯದ ವ್ಯಾಪಾರಿಗಳು ಮತ್ತು ಇದೇ ರೀತಿಯ ಮುಂಬೈ ವಿಳಾಸಗಳನ್ನು ಹಂಚಿಕೊಳ್ಳುವ ಕಾರ್ಪೊರೇಟ್ ಸಂಸ್ಥೆಗಳು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖೆಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಪ್ರಕರಣದಲ್ಲಿ ತನ್ನ ವಿರುದ್ಧ ಸಿಬಿಐ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದ ಸಿಸೋಡಿಯಾ ಇದು ನಾಟಕ ಎಂದಿದ್ದಾರೆ.  ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (50), ಐಎಎಸ್ ಅಧಿಕಾರಿ ಮತ್ತು ದೆಹಲಿಯ ಮಾಜಿ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಅವರ ದೆಹಲಿ ನಿವಾಸ ಮತ್ತು ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 31 ಸ್ಥಳಗಳ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿದೆ.

ಸಿಬಿಐ ಎಫ್‌ಐಆರ್‌ನಲ್ಲಿ ‘ಖಾಸಗಿ’ ಹೆಸರುಗಳು ಹೀಗಿವೆ

ಉದ್ಯಮಿ ವಿಜಯ್ ನಾಯರ್ ಸೇರಿದಂತೆ ಒಟ್ಟು ಒಂಬತ್ತು ಖಾಸಗಿ ವ್ಯಕ್ತಿಗಳನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಿದೆ. ಮನರಂಜನೆ ಮತ್ತು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಓನ್ಲಿ ಮಚ್ ಲೌಡರ್ ಮಾಜಿ ಸಿಇಒ ಮನೋಜ್ ರೈ, ಪೆರ್ನೋಡ್ ರಿಕಾರ್ಡ್ ನ ಮಾಜಿ ಉದ್ಯೋಗಿ ಅಮನದೀಪ್ ಧಾಲ್, ಬ್ರಿಂಡ್ಕೊ ಸ್ಪಿರಿಟ್ಸ್ ಮಾಲೀಕ ಇಂಡೋಸ್ಪಿರಿಟ್‌ನ ಎಂಡಿ ಸಮೀರ್ ಮಹೇಂದ್ರು ಮತ್ತು ಹೈದರಾಬಾದ್ ಮೂಲದ ಅರುಣ್ ರಾಮಚಂದ್ರ ಪಿಳ್ಳೈ.

ಮನೋಜ್ ರೈ ವಿರುದ್ಧ ಇಲ್ಲಿಯವರೆಗೆ ಯಾವುದೇ ಎಲ್ಒಸಿ ಹೊರಡಿಸಲಾಗಿಲ್ಲ ಎಂದು ಅವರು ಹೇಳಿದರು.

ಸಿಸೋಡಿಯಾ ಅವರ ಮೂವರು ಆಪ್ತ ಸಹವರ್ತಿಗಳಾದ ಗುರುಗಾಂವ್​​ನ ಬಡ್ಡಿ ರಿಟೇಲ್ ಪ್ರೈ ಲಿಮಿಟೆಡ್ ನ ಅಮಿತ್ ಅರೋರಾ, ದಿನೇಶ್ ಅರೋರಾ ಮತ್ತು ಅರ್ಜುನ್ ಪಾಂಡೆ ಅವರನ್ನು ಎಫ್‌ಐಆರ್‌ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ.

ಆಪಾದಿತ ಅಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮದ್ಯದ ವ್ಯಾಪಾರಿಗಳಲ್ಲಿ ಒಬ್ಬರಾಗಿದ್ದ ಮಹೇಂದ್ರು ಅವರು ಸಿಸೋಡಿಯಾ ಅವರ “ಆಪ್ತ ಸಹಚರರಿಗೆ” ಕನಿಷ್ಠ ಎರಡು ಕೋಟಿ ರೂಪಾಯಿ ಮೌಲ್ಯದ ಪಾವತಿಗಳನ್ನು ಮಾಡಿದ್ದಾರೆ ಎಂದು ಹೇಳಲಾಗಿದೆ. ಸಿಸೋಡಿಯಾ ಅವರ ಆಪ್ತ ಸಹಚರರು ಆರೋಪಿ ಸರ್ಕಾರಿ ಅಧಿಕಾರಿಗಳಿಗೆ ಮದ್ಯ ಪರವಾನಗಿದಾರರಿಂದ ಸಂಗ್ರಹಿಸಿದ ಅನಗತ್ಯ ಹಣದ ಲಾಭವನ್ನು ನಿರ್ವಹಿಸುವಲ್ಲಿ ಮತ್ತು ಅದನ್ನು ಚಲಾವಣೆ ಮಾಡುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಎಫ್ಐಆರ್ ನಲ್ಲಿ ಹೇಳಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ