Delhi Excise Policy Case: ಸಿಎಂ ಅರವಿಂದ್ ಕೇಜ್ರಿವಾಲ್​​​​ಗೆ ಜಾಮೀನು ಮಂಜೂರು

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್​​​​ಗೆ ಅವರಿಗೆ ದೆಹಲಿ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿದೆ.

Delhi Excise Policy Case: ಸಿಎಂ ಅರವಿಂದ್ ಕೇಜ್ರಿವಾಲ್​​​​ಗೆ ಜಾಮೀನು ಮಂಜೂರು
CM Arvind Kejriwal
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 16, 2024 | 10:57 AM

ದೆಹಲಿ, ಮಾ.16: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ (Delhi Excise Policy Case) ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​​ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್​​​ ಕೇಜ್ರಿವಾಲ್​​​ ಅವರಿಗೆ ಇಡಿ 11 ಬಾರಿ ಸಮನ್ಸ್​​​ ನೀಡಿತ್ತು. ಆದರೆ ಯಾವುದಕ್ಕೂ ಉತ್ತರ ನೀಡದ ಕೇಜ್ರಿವಾಲ್​​​ ವಿರುದ್ಧ ಇಡಿ ರೂಸ್ ಅವೆನ್ಯೂ ನ್ಯಾಯಾಲಯದ ಮೊರೆ ಹೋಗಿತ್ತು. ಹಾಗಾಗಿ ಕೋರ್ಟ್​​ ಕೇಜ್ರಿವಾಲ್​​ ಅವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​ ಹಾಜರಾಗುವಂತೆ ಆದೇಶ ನೀಡತ್ತು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್​​​​ ಇಂದು ಕೋರ್ಟ್​​ಗೆ ಹಾಜರಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​​​ ಅವರಿಗೆ ವಿಚಾರಣೆ ನಡೆಸಿ ಜಾಮೀನು ನೀಡಿದೆ. ಈ ಹಿಂದೆ ಕೇಜ್ರಿವಾಲ್ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಮಾರ್ಚ್ 16 ರಂದು ತನ್ನ ಮುಂದೆ ಹಾಜರಾಗುವಂತೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ನೀಡಿದ್ದ ಆದೇಶದ ವಿರುದ್ಧ ಅರವಿಂದ್ ಕೇಜ್ರಿವಾಲ್ ರೂಸ್ ಅವೆನ್ಯೂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದೆಹಲಿ ಮದ್ಯದ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಿದ್ದಾರೆ ಎಂದು ಸಮನ್ಸ್‌ ನೀಡಲಾಗಿತ್ತು. ಈ ಸಮನ್ಸ್​​​​ಗೆ ಕೇಜ್ರಿವಾಲ್ ಅವರು ಅವಿಧೇಯರಾಗಿದ್ದರು. ಈ ಕಾರಣಕ್ಕೆ ಅವರ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಲಾಗಿತ್ತು. ಆದರೆ ಕೇಜ್ರಿವಾಲ್​​​ ಅವರು ಯಾವುದೇ ಅಸಹಕಾರ ತೋರಿಲ್ಲ ಎಂದು ಅವರು ಪರ ವಕೀಲ ರಮೇಶ್ ಗುಪ್ತಾ ಅವರು ಕೋರ್ಟ್​​ ಮುಂದೆ ಹೇಳಿದ್ದಾರೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‌ಗೆ ನೀಡಿದ್ದ ಇಡಿ ಸಮನ್ಸ್‌ಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ದೆಹಲಿ ಕೋರ್ಟ್

ಈ ಹಿಂದೆ ನಡೆದ ವಿಚಾರಣೆಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಕೇಜ್ರಿವಾಲ್ ಮತ್ತು ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸುವ ವಕೀಲರ ವಾದವನ್ನು ಆಲಿಸಿ, ಫೆಬ್ರವರಿ 17ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಲು ಅನುಮತಿ ನೀಡಿದರು. ಆದರೆ ಮಾ.16ಕ್ಕೆ ಕೋರ್ಟ್​​ಗೆ ದೈಹಿಕವಾಗಿ ಹಾಜರಾಗಬೇಕು ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 am, Sat, 16 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್