ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಮನ್ಸ್‌ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾದ ಸಮನ್ಸ್‌ಗೆ ಹಾಜರಾಗದ ಕಾರಣ ಅವರ ವಿಚಾರಣೆಗೆ ಕೋರಿ ಇಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಲ್ಲಿಸಿದ ಚಾರ್ಜ್ ಶೀಟ್‌ಗಳಲ್ಲಿ ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಮನ್ಸ್‌ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೊರೆ ಹೋದ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 19, 2024 | 8:13 PM

ದೆಹಲಿ ಮಾರ್ಚ್ 19: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ (Delhi excise policy case) ತಮಗೆ ನೀಡಲಾದ ಜಾರಿ ನಿರ್ದೇಶನಾಲಯದ (ED) ಎಲ್ಲ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ಆಮ್ ಆದ್ಮಿ ಪಕ್ಷದ (AAP) ಸಂಚಾಲಕರ ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಲಿದೆ. ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಗುರುವಾರ, ಅಂದರೆ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಭಾನುವಾರ ಕೇಂದ್ರ ಸಂಸ್ಥೆ ಒಂಬತ್ತನೇ ಸಮನ್ಸ್ ಜಾರಿ ಮಾಡಿತ್ತು.

ಈ ಪ್ರಕರಣದಲ್ಲಿ ಹಿಂದಿನ ಎಂಟು ಸಮನ್ಸ್‌ಗಳಲ್ಲಿ 6ಕ್ಕೆ ಕೇಜ್ರಿವಾಲ್ ಗೈರಾಗಿದ್ದು, ಇಡಿ ಅವರ ವಿರುದ್ಧ ಸಲ್ಲಿಸಿದ ಎರಡು ದೂರುಗಳ ಮೇಲೆ ದೆಹಲಿ ನ್ಯಾಯಾಲಯವು ದೆಹಲಿ ಸಿಎಂಗೆ ಜಾಮೀನು ನೀಡಿದ ಒಂದು ದಿನದ ನಂತರ ಸಮನ್ಸ್ ಜಾರಿಗೊಳಿಸಲಾಗಿದೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ನೀಡಲಾದ ಸಮನ್ಸ್‌ಗೆ ಹಾಜರಾಗದ ಕಾರಣ ಅವರ ವಿಚಾರಣೆಗೆ ಕೋರಿ ಇಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಸಲ್ಲಿಸಿದ ಚಾರ್ಜ್ ಶೀಟ್‌ಗಳಲ್ಲಿ ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. 2021-22ರ ಅಬಕಾರಿ ನೀತಿಯನ್ನು ಸಿದ್ಧಪಡಿಸುವ ಕುರಿತು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಸಂಸ್ಥೆ ಹೇಳಿದೆ.

ಈ ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್, ಪಕ್ಷದ ಸಂವಹನ ಉಸ್ತುವಾರಿ ವಿಜಯ್ ನಾಯರ್ ಮತ್ತು ಕೆಲವು ಮದ್ಯದ ಉದ್ಯಮಿಗಳನ್ನು ಇಡಿ ಇಲ್ಲಿಯವರೆಗೆ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರನ್ನು ಕಳೆದ ವಾರ ಏಜೆನ್ಸಿ ಬಂಧಿಸಿತ್ತು. ಇಡಿ ತನ್ನ ಹೇಳಿಕೆಯಲ್ಲಿ ಕವಿತಾ ಅವರು, ಕೇಜ್ರಿವಾಲ್ ಮತ್ತು ಸಿಸೋಡಿಯಾ ಸೇರಿದಂತೆ ಉನ್ನತ ಎಎಪಿ ನಾಯಕತ್ವದೊಂದಿಗೆ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದೆ.

ಇದನ್ನೂ ಓದಿ: ‘ಆಡಿಟರ್’ ರಮೇಶ್ ಅವರನ್ನು ನೆನೆದು ಭಾವುಕರಾದ ಮೋದಿ; ಯಾರು ಆ ನಾಯಕ?

ಕೇಜ್ರಿವಾಲ್ ವಿರುದ್ಧ ಬಿಜೆಪಿ ವಾಗ್ದಾಳಿ

ಕಳೆದ ಆರು ತಿಂಗಳಲ್ಲಿ ಕೇಜ್ರಿವಾಲ್‌ಗೆ ಒಂಬತ್ತು ಸಮನ್ಸ್‌ಗಳನ್ನು ನೀಡಲಾಗಿದೆ.ಅವರು ಕೆಲವು ಕಾರಣಗಳನ್ನು ಹೇಳುತ್ತಾ ಅವೆಲ್ಲದಕ್ಕೂ ಗೈರಾಗಿದ್ದಾರೆ. ಆದರೆ ಈ ಬೈಗುಳಗಳು ಕೆಲಸ ಮಾಡುವುದಿಲ್ಲ. ಕಾನೂನಿನ ಕೈಯಿಂದ ನೀವು ಎಷ್ಟು ದೂರ ಓಡುತ್ತೀರಿ. ಪುರಾವೆಗಳು ಇದ್ದಾಗ ಅದು ಅಂತಿಮವಾಗಿ ನಿಮ್ಮನ್ನು ಹಿಡಿಯುತ್ತದೆ. ಚಂಡಮಾರುತ ಬರುತ್ತಿದೆ ಮತ್ತು ನೀವು ಭ್ರಷ್ಟಾಚಾರ ಮಾಡಿದಾಗ ಅದು ಖಂಡಿತವಾಗಿಯೂ ಬರುತ್ತದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!