AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Excise Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ದೆಹಲಿ ಮದ್ಯನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕವಿತಾರ ನ್ಯಾಯಾಂಗ ಬಂಧನದ ಅವಧಿ ಮೇ 20ರವರೆಗೆ ದೆಹಲಿ ಹೈಕೋರ್ಟ್​ ವಿಸ್ತರಿಸಿದೆ.

Excise Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ
ಕೆ ಕವಿತಾ
ನಯನಾ ರಾಜೀವ್
|

Updated on: May 14, 2024 | 2:53 PM

Share

ದೆಹಲಿಯ ಅಬಕಾರಿ ನೀತಿ(Delhi Excise Policy Case) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾ(K Kavitha) ರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರನೇ ಪೂರಕ ಆರೋಪಪಟ್ಟಿಯನ್ನು ಪರಿಗಣಿಸಿ ವಾದಗಳನ್ನು ಆಲಿಸುವುದನ್ನು ರೂಸ್ ಅವೆನ್ಯೂ ನ್ಯಾಯಾಲಯವು ಮೇ 20ಕ್ಕೆ ಮುಂದೂಡಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಈ ಹಿಂದೆ ಆದೇಶಿಸಲಾಗಿತ್ತು.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಕೆ ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕೆಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​